BREAKING NEWS

ಅಮಿತ್ ಶಾ, ಜೆಪಿ ನಡ್ಡಾ ಭೇಟಿ ನಂತರ ಎನ್‌ಡಿಎ ಸೇರಿದ ಚಿರಾಗ್ ಪಾಸ್ವಾನ್

ನವದೆಹಲಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ ನಂತರ ಲೋಕ ಜನಶಕ್ತಿ ಪಕ್ಷದ(ರಾಮ್ ವಿಲಾಸ್) ನಾಯಕ ಚಿರಾಗ್ ಪಾಸ್ವಾನ್ ಅವರು ಸೋಮವಾರ ಸಂಜೆ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ(ಎನ್‌ಡಿಎ)ಗೆ ಸೇರ್ಪಡೆಗೊಂಡರು.

ಅಮಿತ್ ಶಾ ಮತ್ತು ಜೆಪಿ ನಡ್ಡಾ ಅವರನ್ನು ಭೇಟಿ ಮಾಡಿದ ನಂತರ ಟ್ವೀಟ್ ಮಾಡಿದ ಚಿರಾಗ್, “ಮೈತ್ರಿಗೆ ಸಂಬಂಧಿಸಿದ ವಿಷಯದ ಬಗ್ಗೆ ದೆಹಲಿಯಲ್ಲಿ ದೇಶದ ಗೃಹ ಸಚಿ ಅಮಿತ್ ಶಾ ಅವರೊಂದಿಗೆ ಸಕಾರಾತ್ಮಕ ಚರ್ಚೆ ನಡೆಸಿದೆ” ಎಂದು ತಿಳಿಸಿದ್ದಾರೆ.

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ವಿರೋಧಿಸಿ 2020ರ ಬಿಹಾರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಚಿರಾಗ್ ಪಾಸ್ವಾನ್ ಅವರು ಎನ್‌ಡಿಎದಿಂದ ಹೊರ ನಡೆದಿದ್ದರು. ಆದರೆ, ಪ್ರಮುಖ ವಿಷಯಗಳಲ್ಲಿ ಬಿಜೆಪಿಗೆ ಬೆಂಬಲ ನೀಡಿದ್ದರು.

ಚಿರಾಗ್ ಅವರನ್ನು ಮತ್ತೆ ಎನ್ ಡಿಎ ತೆಕ್ಕೆಗೆ ತರಲು ಬಿಜೆಪಿ ತೀವ್ರ ಪ್ರಯತ್ನ ನಡೆಸಿತ್ತು. ಸ್ವತಃ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರೇ ಚಿರಾಗ್ ಪಾಸ್ವಾನ್ ಅವರಿಗೆ ಪತ್ರ ಬರೆದು ಎನ್ ಡಿಎ ಸಭೆಗೆ ಆಹ್ವಾನ ನೀಡಿದ್ದರು ಮತ್ತು ಎಲ್‌ಜೆಪಿ (ರಾಮ್ ವಿಲಾಸ್) ಎನ್ ಡಿಎನ ಪ್ರಮುಖ ಮಿತ್ರ ಪಕ್ಷ ಎಂದು ಬಣ್ಣಿಸಿದ್ದರು.

ಅಲ್ಲದೆ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ನಿತ್ಯಾನಂದ ರೈ ಅವರು ಶುಕ್ರವಾರ ಸಂಜೆ ಚಿರಾಗ್ ಅವರನ್ನು ಎರಡನೇ ಬಾರಿ ಭೇಟಿಯಾಗಿ ಕೇಂದ್ರದ ಎನ್‌ಡಿಎ ಸರ್ಕಾರಕ್ಕೆ ಸೇರುವಂತೆ ಆಹ್ವಾನಿಸಿದ್ದರು.

andolanait

Recent Posts

ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆ: ಗರಿಕೆ ಖಂಡಿ ಅರಣ್ಯದಲ್ಲಿ ಶವ ಪತ್ತೆ

ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…

12 hours ago

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

13 hours ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

14 hours ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

15 hours ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

20 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

20 hours ago