BREAKING NEWS

ಆಸ್ಪತ್ರೆಗೆ ತೆರಳಿ ಕುಮಾರಸ್ವಾಮಿ ಆರೋಗ್ಯ ವಿಚಾರಿಸಿದ ಚುಂಚಶ್ರೀಗಳು

ಬೆಂಗಳೂರು : ಅನಾರೋಗ್ಯಕ್ಕೆ ತುತ್ತಾಗಿ ಆಸ್ಪತ್ರೆಗೆ ದಾಖಲಾಗಿರುವ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರನ್ನು ಆದಿಚುಂಚನಗಿರಿ ಶ್ರೀಗಳು ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದಾರೆ.

ನಿರಂತರ ಚುನಾವಣಾ ಪ್ರಚಾರದಲ್ಲಿ ಬಿಡುವಿಲ್ಲದೆ ತೊಡಗಿಕೊಂಡ ಪರಿಣಾಮ ಕುಮಾರಸ್ವಾಮಿಯವರಿಗೆ ಜ್ವರ ಕಾಣಿಸಿಕೊಂಡಿತ್ತು. ವಿಶ್ರಾಂತಿ ಅಗತ್ಯವಿದೆ ಎಂದು ವೈದ್ಯರು ಸಲಹೆ ನೀಡಿದ್ದರು. ವೈದ್ಯರ ಸಲಹೆ ಮೇರೆಗೆ ಅವರು ಶನಿವಾರ ನಗರದ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು.

ವಿಶ್ರಾಂತಿ ನಂತರ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗುವುದಾಗಿ ಕುಮಾರಸ್ವಾಮಿ ತಿಳಿಸಿದ್ದಾರೆ. ಅಲ್ಲದೆ, ಜೆಡಿಎಸ್ ಪಕ್ಷದ ಕಾರ್ಯಕರ್ತರು, ಮುಖಂಡರು ಈ ಬಗ್ಗೆ ಆತಂಕಕ್ಕೆ ಒಳಗಾಗುವುದು ಬೇಡ ಎಂದು ಮನವಿ ಮಾಡಿದ್ದಾರೆ.

 

lokesh

Recent Posts

ತಿರುವಿನಲ್ಲಿ ಉರುಳಿಬಿದ್ದ ಲಾರಿ: ತಪ್ಪಿದ ಭಾರೀ ಅನಾಹುತ

ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…

7 hours ago

ದುಬಾರೆ ಆನೆ ಶಿಬಿರದಲ್ಲಿ19 ವರ್ಷದ ಗಂಡಾನೆ ಸಾವು

ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…

8 hours ago

ಪ್ರೀತಿಗೆ ನಿರಾಕರಣೆ: ಮೈಸೂರಿನಲ್ಲಿ ಬೆಚ್ಚಿಬೀಳಿಸಿದ ಒನ್‌ ಸೈಡ್‌ ಲವ್‌ ಕೃತ್ಯ

ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…

10 hours ago

ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣ: ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಅಧ್ಯಕ್ಷ ಶಿವಕುಮಾರ್ ಅರೆಸ್ಟ್​!

ಮಂಡ್ಯ: ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…

12 hours ago

ಭಾರೀ ಮಳೆಗೆ ರೈತರ ಬೆಳೆ ನಾಶ: ಲಕ್ಷಾಂತರ ರೂ. ನಷ್ಟ, ಮನೆ ಗೋಡೆ ಕುಸಿತ

ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…

12 hours ago

ಸ್ಕೂಲ್ ಬಸ್‌ ಹರಿದು ಒಂದೂವರೆ ವರ್ಷದ ಮಗು ಸಾವು

ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…

13 hours ago