ಮನ್‌ಮುಲ್ ಹಗರಣ: ಸಿಐಡಿ ತನಿಖೆ ಆರಂಭ

ಮದ್ದೂರು: ಮಂಡ್ಯ ಜಿಲ್ಲಾ ಹಾಲು ಒಕ್ಕೂಟ (ಮನ್‌ಮುಲ್)ನಲ್ಲಿ ಹಾಲಿಗೆ ನೀರು ಮಿಶ್ರಣ ಅವ್ಯವಹಾರ ಪ್ರಕರಣದ ತನಿಖೆ ಆರಂಭಿಸಿರುವ ಸಿಐಡಿ ಅಧಿಕಾರಿಗಳ ತಂಡ ಮನ್‌ಮುಲ್ ಕಚೇರಿಗೆ ತೆರಳಿ ದಾಖಲೆ ಸಂಗ್ರಹಿಸಿದರು.

ಸಿಒಡಿ ಇನ್ಸ್‌ಪೆಕ್ಟರ್ ನರೇಂದ್ರಕುಮಾರ್ ನೇತೃತ್ವದ ಸಿಐಡಿ ಅಧಿಕಾರಿಗಳ ತಂಡ ಮನ್‌ಮುಲ್ ಕಚೇರಿಗೆ ಭೇಟಿ ನೀಡಿ ಕಡತಗಳ ಪರಿಶೀಲನೆ ನಡೆಸಿದರು.

ಈ ವೇಳೆ ಮನ್‌ಮುಲ್ ವ್ಯವಸ್ಥಾಪಕ ನಿರ್ದೇಶಕ ಅಶೋಕ್ ತನಿಖಾಧಿಕಾರಿಗಳಿಗೆ ಅಗತ್ಯ ಮಾಹಿತಿ, ದಾಖಲೆಗಳನ್ನು ಒದಗಿಸಿದರು.

× Chat with us