ಬೆಂಗಳೂರು: ಜೆ.ಡಿ.ಎಸ್. ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ಸಿ.ಕೆ.ನಾನು ಆಯ್ಕೆ ಮಾಡಲಾಗಿದೆ. ಈ ಮೂಲಕ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ.ದೇವೇಗೌಡರಿಗೆ ಸಿ.ಎಂ ಇಬ್ರಾಹಿಂ ಸೆಡ್ಡು ಹೊಡೆದಿದ್ದಾರೆ.
ಇಂದು ಬೆಂಗಳೂರಿನ ಕಾಡುಕೊಂಡನಹಳ್ಳಿಯ ಖಾಸಗಿ ಸಭಾ ಭವನದಲ್ಲಿ ಮಹತ್ವದ ಜೆಡಿಎಸ್ ರಾಷ್ಟ್ರೀಯ ಸಭೆಯನ್ನು ಉಚ್ಚಾಟಿತ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ನೇತೃತ್ವದಲ್ಲಿ ನಡೆಸಲಾಯಿತು. ಈ ಸಭೆಯಲ್ಲಿ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರನ್ನಾಗಿ ಕೇರಳದ ಸಿ.ಕೆ ನಾನು ಅವರನ್ನು ಆಯ್ಕೆ ಮಾಡಲಾಯಿತು. ಈ ಮೂಲಕ ದಳಪತಿಗಳಿಗೆ ಸಿಎಂ ಇಬ್ರಾಹಿಂ ಸೆಡ್ಡುಹೊಡೆದಿದ್ದಾರೆ.
ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾಗಿ ಆಯ್ಕೆಯಾದ ಬಳಿಕ ಸಿ.ಕೆ ನಾನು ಮಾತನಾಡಿ, ಜಾತ್ಯತೀತ ಗುಣವೇ ನಮ್ಮ ಪಕ್ಷದ ಆತ್ಮವಿದ್ದಂತೆ. ಹೀಗಾಗಿ ಯಾರು ಏನೇ ಹೇಳಲಿ ನಾವು ಪಕ್ಷವನ್ನು ಬೇರೆಯವರಿಗೆ ಅಡ ಇಡುವುದಿಲ್ಲ ಮತ್ತು ಅದಕ್ಕೆ ಅವಕಾಶವನ್ನು ಕೊಡುವುದಿಲ್ಲ ಎಂದು ಆಕ್ರೋಶ ವ್ಯಕ್ತ ಪಡಿಸಿದರು.
ಹಿಂದಿನ ಸಭೆಗಳಲ್ಲಿ ಮಾಜಿ ಪ್ರಧಾನಿ ದೇವೇಗೌಡ ಅವರೊಂದಿಗೆ ನಾನು ಭಾಗಿಯಾಗಿದ್ದೇನೆ. ನಾನು ಕಳೆದ ಅನೇಕ ವರ್ಷಗಳಿಂದ ಜನತಾ ದಳದಲ್ಲಿ ಇದ್ದೇನೆ. ಜನತಾ ದಳ ಜಾತ್ಯಾತೀತ ಸಿದ್ಧಾಂತದ ಮೇಲೆ ನಿಂತಿರುವ ಪಕ್ಷ. ಅದು ಮಹಾತ್ಮಾ ಗಾಂಧೀಜಿಯವರ ತತ್ವಗಳನ್ನು ಪಾಲಿಸುವ ಪಕ್ಷ. ಆದರೆ, ಗಾಂಧೀಜಿಯವರನ್ನು ವಿರೋಧಿಸುವವರೊಂದಿಗೆ ಜೆಡಿಎಸ್ ಸಂಖ್ಯ ಬೆಳೆಸುವುದು ಸರಿಯೆ? ಎಂದು ನನ್ನನ್ನು ಜನತಾದಳದಿಂದ ಉಚ್ಚಾಟಿಸಿದ ದೇವೇಗೌಡರನ್ನು ಕೇಳ ಬಯಸುತ್ತೇನೆ ಎಂದರು.
ಮುಂದುವರೆದು ಮಾತನಾಡಿದ ಅವರು, ನೀವು ಪಕ್ಷದಲ್ಲಿನ ಇತರರ ಅಭಿಪ್ರಾಯಕ್ಕೆ ಮನ್ನಣೆ ಕೊಡದೇ ಬಿಜೆಪಿಯೊಂದಿಗೆ ಹೆಜ್ಜೆ ಹಾಕಿದರೆ ಇದನ್ನು ಪ್ರಶ್ನಿಸುವ ಅಧಿಕಾರ ಪಕ್ಷದಲ್ಲಿರುವ ನಾನೂ ಸೇರಿದಂತೆ ಇತರರಿಗೂ ಇದೆ ಎಂದರು.
ಗಾಂಧೀಜಿಯವರ ತತ್ವಗಳನ್ನು ಬಲಿಕೊಟ್ಟು ಬರೀ ಚುನಾವಣೆಯ ಗೆಲುವಿಗಾಗಿ ಬಿಜೆಪಿಯೊಂದಿಗೆ ಹೊಂದಾಣಿಕೆ ಮಾಡಿಕೊಂಡ ಹೆಚ್.ಡಿ.ದೇವೇಗೌಡರ ವರ್ತನೆಯನ್ನು ಇಂದಿನ ಸಭೆಯಲ್ಲಿ ನಾವು ಖಂಡಿಸುತ್ತೇವೆ ಎಂದರು.
ಸಿ.ಕೆ.ನಾನು, ಗಾಂಧೀಜಿಯವರ ತತ್ವ ಸಿಂದ್ಧಾಗಳನ್ನು ಬಿಟ್ಟುಕೊಡದೇ ಅದೇ ಜಾತ್ಯತೀತ ಸಿದ್ಧಾಂತವನ್ನು ಮೈಗೂಡಿಸಿಕೊಂಡಿರುವ ನಮ್ಮ ನೇತೃತ್ವದ ಪಕ್ಷವೇ ನಿಜವಾದ ಜನತಾದಳ ಎಂದರು.
ಚಾಮರಾಜನಗರ : ತಾಲ್ಲೂಕಿನ ಬೇಡರಪುರ ಗ್ರಾಮದಲ್ಲಿ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಇನ್ನೂ ಒಂದು ಚಿರತೆ ಸೆರೆಯಾಗಿದೆ. ಗ್ರಾಮದ ಮಲ್ಲಣ್ಣ…
ಬೆಂಗಳೂರು : 2026-27ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ದಾಖಲಾತಿ ಅಭಿಯಾನ ಯಶಸ್ವಿಯಾಗಿ ನಡೆಸುವಂತೆ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು…
ಸಿದ್ದಾಪುರ : ಎರಡು ಬೈಕ್‌ಗಳು ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟಿರುವ…
ಹೊಸದಿಲ್ಲಿ : ಎಲ್‌ಪಿಜಿ ಕೊರತೆಯಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದ ಹೋಟೆಲ್, ರೆಸ್ಟೋರೆಂಟ್ ಮತ್ತು ಆಹಾರ ಸಂಸ್ಕರಣಾ ಘಟಕಗಳಿಗೆ ಕೇಂದ್ರ ಪೆಟ್ರೋಲಿಯಂ ಮತ್ತು…
ಟೆಹ್ರಾನ್ : ಇರಾನ್‌ನ ಡ್ರೋನ್ ಉತ್ಪಾದನಾ ಘಟಕದ ಮೇಲೆ ಅಮೆರಿಕ ಸೇನೆ ನಡೆಸಿದ ನಿಖರ ದಾಳಿಗೆ ಸಂಬಂಧಿಸಿದಂತೆ ಮಹತ್ವದ ಉಪಗ್ರಹ…
ಮೈಸೂರು : ರಾಜ್ಯ ಸರ್ಕಾರವು ಜಾರಿಗೆ ತರಲು ಮುಂದಾಗಿರುವ ʻಕರ್ನಾಟಕ ಜಾಹೀರಾತು ನೀತಿ-2026ʼ ವಾರ್ತಾ ಇಲಾಖೆ ಅಧಿಕಾರಿಗಳ ವಕ್ರ ದೃಷ್ಟಿಯ…