BREAKING NEWS

ಜೆಡಿಎಸ್‌ ರಾಷ್ಟ್ರಾಧ್ಯಕ್ಷನಾಗಿ ಸಿ.ಕೆ.ನಾನು ನೇಮಕ: ಹೆಚ್‌ಡಿಡಿಗೆ ಸೆಡ್ಡು ಹೊಡೆದ ಇಬ್ರಾಹಿಂ

ಬೆಂಗಳೂರು: ಜೆ.ಡಿ.ಎಸ್. ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ಸಿ.ಕೆ.ನಾನು ಆಯ್ಕೆ ಮಾಡಲಾಗಿದೆ. ಈ ಮೂಲಕ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ.ದೇವೇಗೌಡರಿಗೆ ಸಿ.ಎಂ ಇಬ್ರಾಹಿಂ ಸೆಡ್ಡು ಹೊಡೆದಿದ್ದಾರೆ.

ಇಂದು ಬೆಂಗಳೂರಿನ ಕಾಡುಕೊಂಡನಹಳ್ಳಿಯ ಖಾಸಗಿ ಸಭಾ ಭವನದಲ್ಲಿ ಮಹತ್ವದ ಜೆಡಿಎಸ್ ರಾಷ್ಟ್ರೀಯ ಸಭೆಯನ್ನು ಉಚ್ಚಾಟಿತ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ನೇತೃತ್ವದಲ್ಲಿ ನಡೆಸಲಾಯಿತು. ಈ ಸಭೆಯಲ್ಲಿ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರನ್ನಾಗಿ ಕೇರಳದ ಸಿ.ಕೆ ನಾನು ಅವರನ್ನು ಆಯ್ಕೆ ಮಾಡಲಾಯಿತು. ಈ ಮೂಲಕ ದಳಪತಿಗಳಿಗೆ ಸಿಎಂ ಇಬ್ರಾಹಿಂ ಸೆಡ್ಡುಹೊಡೆದಿದ್ದಾರೆ.

ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾಗಿ ಆಯ್ಕೆಯಾದ ಬಳಿಕ ಸಿ.ಕೆ ನಾನು ಮಾತನಾಡಿ, ಜಾತ್ಯತೀತ ಗುಣವೇ ನಮ್ಮ‌ ಪಕ್ಷದ ಆತ್ಮವಿದ್ದಂತೆ. ಹೀಗಾಗಿ ಯಾರು ಏನೇ ಹೇಳಲಿ ನಾವು ಪಕ್ಷವನ್ನು ಬೇರೆಯವರಿಗೆ ಅಡ ಇಡುವುದಿಲ್ಲ ಮತ್ತು ಅದಕ್ಕೆ ಅವಕಾಶವನ್ನು ಕೊಡುವುದಿಲ್ಲ ಎಂದು ಆಕ್ರೋಶ ವ್ಯಕ್ತ ಪಡಿಸಿದರು.

ಹಿಂದಿನ ಸಭೆಗಳಲ್ಲಿ ಮಾಜಿ ಪ್ರಧಾನಿ ದೇವೇಗೌಡ ಅವರೊಂದಿಗೆ ನಾನು ಭಾಗಿಯಾಗಿದ್ದೇನೆ. ನಾನು ಕಳೆದ ಅನೇಕ ವರ್ಷಗಳಿಂದ ಜನತಾ ದಳದಲ್ಲಿ ಇದ್ದೇನೆ. ಜನತಾ ದಳ ಜಾತ್ಯಾತೀತ ಸಿದ್ಧಾಂತದ ಮೇಲೆ ನಿಂತಿರುವ ಪಕ್ಷ. ಅದು ಮಹಾತ್ಮಾ ಗಾಂಧೀಜಿಯವರ ತತ್ವಗಳನ್ನು ಪಾಲಿಸುವ ಪಕ್ಷ. ಆದರೆ, ಗಾಂಧೀಜಿಯವರನ್ನು‌ ವಿರೋಧಿಸುವವರೊಂದಿಗೆ ಜೆಡಿಎಸ್ ಸಂಖ್ಯ ಬೆಳೆಸುವುದು ಸರಿಯೆ? ಎಂದು ನನ್ನನ್ನು ಜನತಾದಳದಿಂದ ಉಚ್ಚಾಟಿಸಿದ ದೇವೇಗೌಡರನ್ನು ಕೇಳ ಬಯಸುತ್ತೇನೆ ಎಂದರು.

ಮುಂದುವರೆದು ಮಾತನಾಡಿದ ಅವರು, ನೀವು ಪಕ್ಷದಲ್ಲಿನ ಇತರರ ಅಭಿಪ್ರಾಯಕ್ಕೆ ಮನ್ನಣೆ ಕೊಡದೇ ಬಿಜೆಪಿಯೊಂದಿಗೆ ಹೆಜ್ಜೆ ಹಾಕಿದರೆ ಇದನ್ನು ಪ್ರಶ್ನಿಸುವ ಅಧಿಕಾರ ಪಕ್ಷದಲ್ಲಿರುವ ನಾನೂ ಸೇರಿದಂತೆ ಇತರರಿಗೂ ಇದೆ ಎಂದರು.

ಗಾಂಧೀಜಿಯವರ ತತ್ವಗಳನ್ನು ಬಲಿಕೊಟ್ಟು ಬರೀ ಚುನಾವಣೆಯ ಗೆಲುವಿಗಾಗಿ ಬಿಜೆಪಿಯೊಂದಿಗೆ ಹೊಂದಾಣಿಕೆ ಮಾಡಿಕೊಂಡ ಹೆಚ್.ಡಿ.ದೇವೇಗೌಡರ ವರ್ತನೆಯನ್ನು ಇಂದಿನ ಸಭೆಯಲ್ಲಿ ನಾವು ಖಂಡಿಸುತ್ತೇವೆ ಎಂದರು.

ಸಿ.ಕೆ.ನಾನು, ಗಾಂಧೀಜಿಯವರ ತತ್ವ ಸಿಂದ್ಧಾಗಳನ್ನು ಬಿಟ್ಟುಕೊಡದೇ ಅದೇ ಜಾತ್ಯತೀತ ಸಿದ್ಧಾಂತವನ್ನು ಮೈಗೂಡಿಸಿಕೊಂಡಿರುವ ನಮ್ಮ ನೇತೃತ್ವದ ಪಕ್ಷವೇ ನಿಜವಾದ ಜನತಾದಳ ಎಂದರು.

andolanait

Recent Posts

ಪೊಲೀಸರ ಮೇಲೆ ಹಲ್ಲೆ: 20 ಜನರ ವಿರುದ್ಧ ಕೇಸ್‌ ದಾಖಲು

ನವದೆಹಲಿ: ಮುಖ್ಯ ಚುನಾವಾಣಾ ಆಯುಕ್ತ ಜ್ಞಾನೇಶ್‌ ಕುಮಾರ್‌ ರಾಜೀನಾಮೆಗೆ ಆಗ್ರಹಿಸಿ ಸಿಜೆಪಿ ನಿನ್ನೆ ಬೃಹತ್‌ ಪ್ರತಿಭಟನೆಗೆ ಕರೆ ನೀಡಿತ್ತು. ಈ…

2 hours ago

ದೇವಿ ಕೃಪೆ ಜನರ ಮೇಲಿರಲಿ, ಜನರ ಕೃಪೆ ನಮ್ಮ ಸರ್ಕಾರದ ಮೇಲಿರಲಿ: ಸಿಎಂ ಡಿಕೆಶಿ

ಮೈಸೂರು:  ಮೈಸೂರು ದಸರಾ ಮಹೋತ್ಸವಕ್ಕೆ ಅದ್ಧೂರಿ ಚಾಲನೆ ಸಿಕ್ಕಿದೆ. ಈ ಹಿನ್ನೆಲೆಯಲ್ಲಿ ಮಾತನಾಡಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌, ದೇವಿಯ ಕೃಪೆ…

4 hours ago

ದಸರಾ ಉದ್ಘಾಟಿಸುವಷ್ಟು ದೊಡ್ಡವನು ನಾನಲ್ಲ: ಗವಿಸಿದ್ದೇಶ್ವರ ಶ್ರೀ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನಾ ಕಾರ್ಯಕ್ರಮದಲ್ಲಿ ಕೊಪ್ಪಳದ ಗವಿಮಠದ ಶ್ರೀ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ವಿನಮ್ರ ಮಾತುಗಳನ್ನಾಡಿದ್ದಾರೆ. “ದಸರಾ…

4 hours ago

ಮನಸೆಳೆವ ಫಲ ಪುಷ್ಪ ಪ್ರದರ್ಶನ

ಪ್ರಕೃತಿಯೊಂದಿಗೆ ನಂಟನ್ನು ನೆನಪಿಸುವ ಒಂದು ಸುಂದರ ಪಯಣ. 15 ಎಕರೆ ವಿಸ್ತೀರ್ಣ, 70 ಸಸ್ಯಶಾಸ್ತ್ರೀಯ ಜಾತಿಯ 327ಕ್ಕೂ ಹೆಚ್ಚಿನ ವೈವಿಧ್ಯಮಯ…

5 hours ago

ಮೈಸೂರು ದಸರಾ ಮಹೋತ್ಸವಕ್ಕೆ ಅಧಿಕೃತ ಚಾಲನೆ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಅದ್ಧೂರಿ ಚಾಲನೆ ಸಿಕ್ಕಿದೆ. ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಡೆಯುತ್ತಿರುವ 416ನೇ ನಾಡಹಬ್ಬ ದಸರಾ…

6 hours ago

ಓದುಗರ ಪತ್ರ: ಬಳಸಿದ ಅಡುಗೆ ಎಣ್ಣೆ: ಯೋಜನೆ ಪ್ರಶಂಸನೀಯ

ಬಳಸಿದ ಅಡುಗೆ ಎಣ್ಣೆಯನ್ನು ಸರಕಾರವೇ ಸಂಗ್ರಹಿಸಿ ಜೈವಿಕ ಇಂಧನವಾಗಿ (ಬಯೋಡೀಸೆಲ) ಪರಿವರ್ತಿಸುವ ಯೋಜನೆ ಪ್ರಶಂಸನೀಯ. ಪುನರಾವರ್ತಿತ ಎಣ್ಣೆ ಬಳಕೆಯಿಂದ ಹೊರಹೊಮ್ಮುವ…

7 hours ago