ಬೆಂಗಳೂರು: ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣದಲ್ಲಿ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರಿಗೆ ರಿಲೀಫ್ ಸಿಕ್ಕಿದೆ. ಜನಪ್ರತಿನಿಧಿಗಳ ನ್ಯಾಯಾಲಯ ಬಿ ರಿಪೋರ್ಟ್ ಅಂಗೀಕರಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಕೆಎಸ್ ಈಶ್ವರಪ್ಪ ಅವರ ಮೇಲಿನ ಆರೋಪಕ್ಕೆ ಸೂಕ್ತ ಸಾಕ್ಷಾಧಾರಗಳು ಇಲ್ಲವೆಂದು ಬಿ ರಿಪೋರ್ಟ್ ಸಲ್ಲಿಕೆ ಮಾಡಿದ್ದರು.
ರಾಜ್ಯದಲ್ಲಿ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೆ.ಎಸ್. ಈಶ್ವರಪ್ಪ ಅವರು ಗ್ರಾಮೀಣ ಮತ್ತು ಪಂಚಾಯತ್‌ರಾಜ್ ಇಲಾಖೆ ಸಚಿವರಾಗಿದ್ದಾಗ ಉಡುಪಿಯ ಶಾಂಭವಿ ಲಾಡ್ಜ್ ನಲ್ಲಿ 2022ರ ಏಪ್ರಿಲ್ 12 ರಂದು ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಮಾಡಿಕೊಂಡಿದ್ದರು. ಮೃತ ಗುತ್ತಿಗೆದಾರ ಸಂತೋಷ್ ಪಾಟೀಲ್ ಕಮೀಷನ್ ಕಿರುಕುಳದಿಂದ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಕೆಎಸ್ ಈಶ್ವರಪ್ಪ ಅವರ ವಿರುದ್ಧ ಆರೋಪ ಕೇಳಿಬಂದಿತ್ತು. ಇದು ಸಾಕಷ್ಟು ಚರ್ಚೆಗೆ ಕಾರಣವಾಗಿತ್ತು. ಈ ಬಳಿಕ ಕೆಎಸ್ ಈಶ್ವರಪ್ಪ ಅವರು ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡಿದ್ದರು.
ಪ್ರಕರಣದ ತನಿಖೆ ನಡೆಸಿದ್ದ ಉಡುಪಿ ಪೊಲೀಸರು ಮಾಜಿ ಸಚಿವ ಕೆಎಸ್ ಈಶ್ವರಪ್ಪ ಅವರ ಮೇಲಿನ ಆರೋಪಕ್ಕೆ ಸೂಕ್ತ ಸಾಕ್ಷಾಧಾರಗಳು ಇಲ್ಲವೆಂದು ಬಿ ರಿಪೋರ್ಟ್ ಸಲ್ಲಿಕೆ ಮಾಡಿದ್ದರು. ಈ ಬಿ ರಿಪೋರ್ಟ್ ಸಲ್ಲಿಕೆಯನ್ನು ಪ್ರಶ್ನಿಸಿ ಮೃತ ಗುತ್ತಿಗೆದಾರ ಸಂತೋಷ್ ಪಾಟೀಲ್ ಸಹೋದರ ಪ್ರಶಾಂತ್ ಪಾಟೀಲ್ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಕೋರ್ಟ್ ವಾದ-ಪ್ರತಿವಾದ ಆಲಿಸಿ ಇಂದು (ಜು.15) ಬಿ ರಿಪೋರ್ಟ್ ಅಂಗೀಕರಿಸಿದೆ.
ಬೆಂಗಳೂರು : ಬೆಂಗಳೂರಿನಲ್ಲಿ ಕನಿಷ್ಠ 15 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಟ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ವರೆಗೆ ಇರುತ್ತದೆ…
ಬೆಳಗಾವಿ : ಸರ್ಕಾರದಿಂದ ಪಡೆದ ಸಿಎ ನಿವೇಶನಗಳಲ್ಲಿ ಕಟ್ಟಡ ನಿರ್ಮಾಣ ಮಾಡಲು ಈಗಿರುವ ಮೂರು ವರ್ಷಗಳ ಮಿತಿಯನ್ನು ಐದು ವರ್ಷಗಳಿಗೆ…
ಮೈಸೂರು : ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರ(ಟ್ರಾಯ್) ಹಾಗೂ ಮುಂಬೈನ ಬಾಂಧ್ರಾ ಪೊಲೀಸ್ ಅಧಿಕಾರಿ ಸೋಗಿನಲ್ಲಿ ನಗರದ ವೈದ್ಯರೊಬ್ಬರಿಗೆ…
ಮೈಸೂರು : ಜಾತಿ ನಿಂದನೆ, ಅಸ್ಪೃಶ್ಯತೆ ಆಚರಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ ದೂರು ದಾಖಲು ಹಾಗೂ ತನಿಖೆ ನಡೆಸುವ ಉದ್ದೇಶದಿಂದ ಆರಂಭಗೊಂಡಿರುವ…
ಮೈಸೂರು : ಕರ್ನಾಟಕ ಪೊಲೀಸ್ ಅಕಾಡೆಮಿ ಮತ್ತು ಸಾವಿತ್ರಿಬಾಯಿ ಫುಲೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥೆಯ ನಡುವೆ ಒಡಂಬಡಿಕೆಗೆ…
ಬೆಳಗಾವಿ (ಸುವರ್ಣಸೌಧ) : ಇತ್ತೀಚೆಗೆ ನಿಧನರಾದ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಸ್ಮಾರಕವನ್ನು ಮೈಸೂರಿನಲ್ಲಿ ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…