BREAKING NEWS

ಹಿಮಾಚಲ ಪ್ರದೇಶದಲ್ಲಿ ಮೇಘಸ್ಫೋಟ : 7 ಮಂದಿ ಸಾವು

ಶಿಮ್ಲಾ : ಹಿಮಾಚಲ ಪ್ರದೇಶದ ಸೋಲನ್ ಜಿಲ್ಲೆಯಲ್ಲಿ ಮೇಘಸ್ಫೋಟ ಸಂಭವಿಸಿದ್ದು, 7 ಜನರು ಬಲಿಯಾಗಿರುವ ಘಟನೆ ನಡೆದಿದೆ.

ಸೋಲನ್‌ನ ಕಂದಘಾಟ್‌ನ ಜಾಡೋನ್ ಗ್ರಾಮದಲ್ಲಿ ಮೇಘಸ್ಫೋಟ ಸಂಭವಿಸಿದ ನಂತರ ಐವರನ್ನು ರಕ್ಷಿಸಲಾಗಿದೆ. ಘಟನೆಯಲ್ಲಿ ಒಬ್ಬರು ಕಾಣೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 2 ಮನೆಗಳು ಹಾಗೂ ಒಂದು ದನದ ಕೊಟ್ಟಿಗೆ ಕೊಚ್ಚಿಕೊಂಡು ಹೋಗಿರುವುದಾಗಿ ವರದಿಯಾಗಿದೆ.

ದುರ್ಘಟನೆ ಬಳಿಕ ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು ಅವರು ಟ್ವಿಟ್ಟರ್‌ನಲ್ಲಿ ಸಂತಾಪ ಸೂಚಿಸಿದ್ದಾರೆ. ಸಂತ್ರಸ್ತ ಕುಟುಂಬಗಳಿಗೆ ಸಾಧ್ಯವಿರುವ ಎಲ್ಲಾ ನೆರವು ಹಾಗೂ ಬೆಂಬಲವನ್ನು ನೀಡಲು ಅಧಿಕಾರಿಗಳಿಗೆ ಸೂಚನೆ ನೀಡುವುದಾಗಿ ತಿಳಿಸಿದ್ದಾರೆ.

ಭಾರೀ ಮೆಳೆಯ ಹಿನ್ನೆಲೆ ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಗುಡ್ಡಗಾಡಿನ ಎಲ್ಲಾ ಶಿಕ್ಷಣ ಸಂಸ್ಥೆಗಳನ್ನು ಮುಚ್ಚಲಾಗುವುದು. ಹಾನಿಯ ಕುರಿತು ಪ್ರತಿಕ್ರಿಯೆಗಾಗಿ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳೊಂದಿಗೆ ಮಾತನಾಡಿದ್ದೇನೆ ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.

lokesh

Recent Posts

ಕೋವಿಡ್‌ ಹಗರಣ: ಸರ್ಕಾರಕ್ಕೆ ಅಂತಿಮ ವರದಿ ಸಲ್ಲಿಕೆ

ಬೆಂಗಳೂರು: ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾದ ಕೋವಿಡ್ ಹಗರಣದ ತನಿಖೆಯ ಅಂತಿಮ ವರದಿಯನ್ನು ನಿವೃತ್ತ ನ್ಯಾಯಮೂರ್ತಿ ಮೈಕೆಲ್‌…

48 mins ago

ಚಾಮುಂಡಿಬೆಟ್ಟಕ್ಕೆ ನಟ ದರ್ಶನ್‌ ಪತ್ನಿ ವಿಜಯಲಕ್ಷ್ಮೀ ಭೇಟಿ

ಮೈಸೂರು: ಹೊಸ ವರ್ಷದ ಹಿನ್ನೆಲೆಯಲ್ಲಿ ಇಂದು ನಟ ದರ್ಶನ್‌ ಪತ್ನಿ ವಿಜಯಲಕ್ಷ್ಮೀ ಅವರು ಮೈಸೂರಿನ ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ ದೇವಿಯ…

1 hour ago

ಹೊಸ ವರ್ಷದ ಸಂಭ್ರಮ: ಚಾಮುಂಡಿಬೆಟ್ಟಕ್ಕೆ ಹರಿದು ಬಂದ ಭಕ್ತಸಾಗರ

ಮೈಸೂರು: 2026ರ ಮೊದಲ ದಿನವಾದ ಇಂದು ನಾಡಿನ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಭಕ್ತಸಾಗರವೇ ಹರಿದುಬರುತ್ತಿದೆ. ಹೊಸ ವರ್ಷದ ಅಂಗವಾಗಿ…

2 hours ago

ಮೈಸೂರು: ನಿರಾಶ್ರಿತರಿಗೆ ಹೊದಿಕೆ ನೀಡುವ ಮೂಲಕ ಹೊಸ ವರ್ಷಾಚರಣೆ

ಮೈಸೂರು: ಹೊಸ ವರ್ಷ ಎಂದು ಮೋಜು ಮಸ್ತಿ ಮಾಡದೇ ರಸ್ತೆ ಬದಿಯ ನಿರಾಶ್ರಿತರಿಗೆ ಹೂದಿಕೆಗಳನ್ನು ನೀಡುವ ಮೂಲಕ ಯುವಕರ ತಂಡ…

2 hours ago

ಹೊಸ ವರ್ಷದ ಸಂಭ್ರಮ: ಯೋಗನರಸಿಂಹಸ್ವಾಮಿ ದೇವಸ್ಥಾನದಲ್ಲಿ ಭಕ್ತರಿಗೆ ಲಡ್ಡು ವಿತರಣೆ

ಮೈಸೂರು: ನೂತನ ವರ್ಷವನ್ನು ಮೈಸೂರಿನ ವಿಜಯನಗರದಲ್ಲಿರುವ ಯೋಗ ನರಸಿಂಹಸ್ವಾಮಿ ದೇವಾಲಯದಲ್ಲಿ ಭಕ್ತರಿಗೆ ತಿರುಪತಿ ಮಾದರಿ ಲಡ್ಡು ವಿತರಿಸುವ ಮೂಲಕ ಸ್ವಾಗತಿಸಲಾಯಿತು.…

3 hours ago

ದೇಶದ ಜನತೆಗೆ ಹೊಸ ವರ್ಷದ ಶುಭಾಶಯ ಕೋರಿದ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು, ದೇಶ ಹಾಗೂ ವಿಶ್ವದ ಜನತೆಗೆ ಹೊಸ ವರ್ಷದ ಶುಭಾಶಯ ಕೋರಿದ್ದಾರೆ. ಅಷ್ಟೇ ಅಲ್ಲದೇ…

3 hours ago