ಹಾವೇರಿ : ವಿಧಾನಸಭೆ ಚುನಾವಣೆ ಹಿನ್ನಲೆ ಕಾಂಗ್ರೆಸ್ ತನ್ನ ಪ್ರಣಾಳಿಕೆ ಬಿಡುಗಡೆ ಮಾಡಿದ್ದು, ಅದರಲ್ಲಿ ಭಜರಂಗದಳ ನಿಷೇಧಿಸುವ ವಿಚಾರವಾಗಿ ಹಾನಗಲ್ ತಾಲೂಕಿನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರು ರೋಷಾವೇಶದ ಭಾಷಣ ಮಾಡಿದ್ದು, ಜೈ ಶ್ರೀರಾಮ್, ಜೈ ಭಜರಂಗಬಲಿ ಎಂದು ಘೋಷಣೆ ಕೂಗಿದ್ದಾರೆ. ಇದೇ ವೇಳೆ ಕೇಸರಿ ವಸ್ತ್ರವನ್ನ ಬೀಸುವ ಮೂಲಕ ಕಾಂಗ್ರೆಸ್ಗೆ ತಿರುಗೇಟು ಕೊಟ್ಟಿದ್ದಾರೆ. ಹಾನಗಲ್ ತಾಲೂಕಿನ ತಿಳುವಳ್ಳಿ ಗ್ರಾಮದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಮಾತನಾಡಿ ಕರ್ನಾಟಕದಲ್ಲಿ ಬಿಜೆಪಿಯ ಸುನಾಮಿ ಅಲೆ ಇದೆ ಎಂದರು.