ಮುಖ್ಯಮಂತ್ರಿ ಬೊಮ್ಮಾಯಿ ದಿಢೀರ್‌ ದೆಹಲಿ ಭೇಟಿ: ಮೂಡಿದ ಕುತೂಹಲ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭಾನುವಾರ ರಾತ್ರಿ ದಿಢೀರ್‌ ದೆಹಲಿಗೆ ತೆರಳಿರುವುದು ಕುತೂಹಲ ಮೂಡಿದೆ.

ಸಂಪುಟ ವಿಸ್ತರಣೆ ಪ್ರಕ್ರಿಯೆ ಒಂದೆರಡು ದಿನಗಳಲ್ಲಿ ನಡೆಯುವ ಸಾಧ್ಯತೆ ಇದೆ. ಯಾರಿಗೆಲ್ಲಾ ಸಂಪುಟದಲ್ಲಿ ಅವಕಾಶ ದೊರಕಬಹುದು ಎಂಬ ಕುತೂಹಲ ಗರಿಗೆದರಿದೆ.

ಪಕ್ಷದ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಸೋಮವಾರ ಬೆಳಿಗ್ಗೆ ಭೇಟಿ ಮಾಡಿ, ಸಚಿವರ ಪಟ್ಟಿಗೆ ಒಪ್ಪಿಗೆ ಪಡೆದು ಬೊಮ್ಮಾಯಿ ಅವರು ಸಂಜೆ ವಾಪಸ್ಸಾಗುವ ಸಾಧ್ಯತೆ ಇದೆ. ಶಾಸಕರಾದ ಗೋವಿಂದ ಕಾರಜೋಳ, ಆರ್‌.ಅಶೋಕ ಮತ್ತು ಬಿ.ಶ್ರೀರಾಮುಲು ಅವರಿಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡಲಾಗುತ್ತದೆ ಎಂಬ ಮಾಹಿತಿಯೂ ಇದೆ.

× Chat with us