BREAKING NEWS

ಸಿಎಂ ಕುರ್ಚಿ ಕದನ ಅಂತ್ಯ : ಸಿದ್ದರಾಮಯ್ಯ ಸಿಎಂ, ಡಿಕೆ ಶಿವಕುಮಾರ್ ಡಿಸಿಎಂ

ನವದೆಹಲಿ : ಕರ್ನಾಟಕ ಸಿಎಂ ಕದನ ಅಂತ್ಯವಾಗಿದ್ದು 5ನೇ ದಿನ ಸಿಎಂ ಬಿಕ್ಕಟ್ಟಿಗೆ ಕಾಂಗ್ರೆಸ್‌ ಹೈಕಮಾಂಡ್‌ ತೆರೆ ಎಳೆದಿದೆ. ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ ಅವರ ಮನವೊಲಿಕೆಯ ನಂತರ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಲು ಡಿಕೆ ಶಿವಕುಮಾರ್‌ ಒಪ್ಪಿಗೆ ನೀಡಿದ್ದಾರೆ.

ಬುಧವಾರ ದಿನಪೂರ್ತಿ ಡಿಕೆಶಿ ಜೊತೆ ಮಾತುಕತೆ ನಡೆಸಿದರೂ ಯಾವುದೇ ಕಾರಣಕ್ಕೂ ತಮ್ಮ ಬೇಡಿಕೆಯಿಂದ ಹಿಂದಕ್ಕೆ ಸರಿದಿರಲಿಲ್ಲ. ತಡರಾತ್ರಿ ಶಿಮ್ಲಾದಲ್ಲಿರುವ ಸೋನಿಯಾ ಗಾಂಧಿ ದೂರವಾಣಿ ಮೂಲಕವೇ ಡಿಕೆಶಿಯನ್ನು ಒಪ್ಪಿಸುವಲ್ಲಿ ಯಶಸ್ವಿಯಾಗಿದ್ದು ಕುರ್ಚಿ ಕಾದಾಟಕ್ಕೆ ಬ್ರೇಕ್‌ ಬಿದ್ದಿದೆ.

ಮೊದಲ ಅವಧಿಗೆ ಸಿದ್ದರಾಮಯ್ಯ ಸಿಎಂ ಆಗಲಿದ್ದರೆ ಎರಡನೇ ಅವಧಿಗೆ ಡಿ.ಕೆ ಶಿವಕುಮಾರ್ ಸಿಎಂ ಪಟ್ಟ ಅಲಂಕರಿಸಲಿದ್ದಾರೆ. ಡಿಕೆ ಶಿವಕುಮಾರ್‌ ಡಿಸಿಎಂ, ಎರಡು ಪ್ರಬಲ ಖಾತೆಯನ್ನು ನೀಡುವುದಾಗಿ ಹೈಕಮಾಂಡ್‌ ಭರವಸೆ ನೀಡಿದೆ. ಅಷ್ಟೇ ಅಲ್ಲದೇ ಲೋಕಸಭಾ ಚುನಾವಣೆ ಮುಗಿಯುವರೆಗೂ ಕೆಪಿಸಿಸಿ ಅಧ್ಯಕ್ಷರಾಗಿ ಮುಂದುವರಿಯಲಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.

ಇಂದು ಸಂಜೆ 7 ಗಂಟೆಗೆ ಬೆಂಗಳೂರಿನಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯಲಿದ್ದು ಈ ಸಭೆಯಲ್ಲಿ ಸಿಎಂ ಹೆಸರನ್ನು ಅಧಿಕೃತವಾಗಿ ಘೋಷಣೆ ಮಾಡಲಾಗುತ್ತದೆ.

ಕರ್ನಾಟಕದ ಜನರು ಕಾಂಗ್ರೆಸ್‍ಗೆ ಅತಿದೊಡ್ಡ ಸಂಖ್ಯೆ ನೀಡಿದ್ದಾರೆ. ಸಿಎಂ ಹುದ್ದೆಯ ಕಾದಾಟದಿಂದ ಪಕ್ಷಕ್ಕೆ ಡ್ಯಾಮೇಜ್‌ ಆಗುವುದು ಬೇಡ. ಈಗ ಒಮ್ಮೆ ಸಹಕರಿಸಿದರೆ ಭವಿಷ್ಯದಲ್ಲಿ ಸಿಎಂ ಸ್ಥಾನ ನೀಡಲಾಗುವುದು. ಪಕ್ಷಕ್ಕಾಗಿ ಮತ್ತೊಮ್ಮೆ ತ್ಯಾಗ ಮಾಡಲು ಸೋನಿಯಾ ಗಾಂಧಿ ಸೂಚಿಸಿದ್ದಾರೆ. ಸೋನಿಯಾ ಗಾಂಧಿ ನೀಡಿದ ಭರವಸೆ ಮೇಲೆ ಡಿಸಿಎಂ ಸ್ಥಾನಕ್ಕೆ ಡಿಕೆಶಿ ತೃಪ್ತರಾಗಿದ್ದಾರೆ.

lokesh

Recent Posts

ಎಲ್‌ಪಿಜಿ ಸಿಲಿಂಡರ್‌ ಸಿಗುತ್ತದೆ, ಜನರಲ್ಲಿ ಭೀತಿ ಬೇಡ : ಕೇಂದ್ರ

ಹೊಸದಿಲ್ಲಿ : ಮಧ್ಯಪ್ರಾಚ್ಯದ ಸಂಘರ್ಷದಿಂದ ಉಂಟಾಗಿರುವ ಎಲ್‌ಪಿಜಿ ಸಿಲಿಂಡರ್ ಕೊರತೆ ಬಗ್ಗೆ ಸಾರ್ವಜನಿಕರಲ್ಲಿ ಉದಿಸಿದ ಆತಂಕದ ನಡುವೆ, ಕೇಂದ್ರ ಸರ್ಕಾರವು…

2 hours ago

IPL 2026 | ಮಾ.28ರಿಂದ ಪಂದ್ಯ ಆರಂಭ, ಬೆಂಗಳೂರಿನಲ್ಲಿ ಉದ್ಘಾಟನೆ, ಹೀಗಿದೆ ವೇಳಾಪಟ್ಟಿ

ಬೆಂಗಳೂರು : ಬಹುನಿರೀಕ್ಷಿತ 2026ನೇ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟಿ-20 ಕ್ರಿಕೆಟ್ ಟೂರ್ನಿಯ ಮೊದಲ ಹಂತದ ವೇಳಾಪಟ್ಟಿಯನ್ನು…

3 hours ago

“ಸಂಶೋಧನೆಗೆ AI ನಿಂದಲ್ಲ, ಸ್ವಂತಿಕೆಯಿಂದ ಕೂಡಿರಲಿ” : ಕುಲಪತಿ ಶರಣಪ್ಪ ಹಲಸೆ ಸಲಹೆ

ಮೈಸೂರು : ಸಂಶೋಧನೆ ಮಾಡುವಾಗ ವಿದ್ಯಾರ್ಥಿಗಳು ತಮ್ಮ ಸಂಪೂರ್ಣ ಪರಿಶ್ರಮದಿಂದ ಸಂಶೋಧನೆಗಳನ್ನು ಸಿದ್ಧಪಡಿಸಬೇಕು, AI ತಂತ್ರಜ್ಞಾನದ ಕಡೆ ಮೊರೆಹೋಗುವುದನ್ನು ಕಡಿಮೆ…

3 hours ago

ಖಾತೆ ಮಾಡಿಕೊಡದ ಅಧಿಕಾರಿಗಳು : ರೈತನಿಂದ ವಿಷ ಸೇವನೆ ಯತ್ನ

ಸಾಲಿಗ್ರಾಮ : ತನ್ನ ಜಮೀನಿಗೆ ಸಂಬಂಧಿಸಿದ ಖಾತೆಯನ್ನು ಮಾಡಿಕೊಡದೆ ಸಾಲಿಗ್ರಾಮ ನಾಡಕಚೇರಿ ಅವರು ಸತಾಯಿಸುತ್ತಿದ್ದಾರೆ ಎಂದು ಮನನೊಂದು ಸಾಲಿಗ್ರಾಮದ ನಾಡ…

3 hours ago

ಹಡುಗುಗಳ ಮೇಲೆ ದಾಳಿ : ಇಬ್ಬರು ಭಾರತೀಯರ ಸಾವು

ಹೊಸದಿಲ್ಲಿ : ಪಶ್ಚಿಮ ಏಷ್ಯಾದ ಸಂಘರ್ಷ ಪೀಡಿತ ಸಮುದ್ರ ವಲಯದಲ್ಲಿ ವ್ಯಾಪಾರಿ ಹಡಗುಗಳ ಮೇಲೆ ನಡೆದ ದಾಳಿಯಲ್ಲಿ ಇಬ್ಬರು ಭಾರತೀಯರು…

4 hours ago

ಗುಂಡ್ಲುಪೇಟೆ | ಕತ್ತು ಕೂಯ್ದು ವ್ಯಕ್ತಿಯ ಬರ್ಬರ ಹತ್ಯೆ

ಗುಂಡ್ಲುಪೇಟೆ : ಪಟ್ಟಣದ ಹೊರವಲಯದ ವಿಜಯಪುರ ಅಮಾನಿ ಕೆರೆಯ ಬಳಿ ವ್ಯಕ್ತಿಯೊಬ್ಬ ಬರ್ಬರವಾಗಿ ಕೊಲೆಯಾಗಿರುವ ಘಟನೆ ನಡೆದಿದೆ. ತಾಲ್ಲೂಕಿನ ಮೂಖಹಳ್ಳಿ…

4 hours ago