ಇಂದು ( ಡಿಸೆಂಬರ್ 21 ) ಜೆಡಿಎಸ್ ವರಿಷ್ಠ ಹೆಚ್‌ಡಿಡಿ ದೇವೇಗೌಡರು ತಮ್ಮ ಇಬ್ಬರು ಮಕ್ಕಳಾದ ಹೆಚ್‌ಡಿ ಕುಮಾರಸ್ವಾಮಿ ಹಾಗೂ ಹೆಚ್‌ಡಿ ರೇವಣ್ಣ ಅವರ ಜತೆ ದೆಹಲಿಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಮುಂಬರುವ ಲೋಕಸಭೆ ಚುನಾವಣೆ ಸಲುವಾಗಿ ಮಾಡಿಕೊಂಡಿರುವ ಮೈತ್ರಿ ಸೀಟು ಹಂಚಿಕೆ ಕುರಿತಾಗಿ ಚರ್ಚೆ ನಡೆಸಿದ್ದಾರೆ.
ಈ ಬೆಳವಣಿಗೆಗಳ ಬೆನ್ನಲ್ಲೇ ಜೆಡಿಎಸ್ ಉಚ್ಛಾಟಿತ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಹೆಚ್ ಡಿ ದೇವೇಗೌಡ ಹಾಗೂ ಹೆಚ್ ಡಿ ಕುಮಾರಸ್ವಾಮಿ ವಿರುದ್ಧ ಬೆಂಗಳೂರು ಸಿಟಿ ಸಿವಿಲ್ ಕೋರ್ಟ್ ಮೆಟ್ಟೇಲೇರಿದ್ದು, ತಮ್ಮನ್ನು ಕಾನೂನು ಬಾಹಿರವಾಗಿ ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನದಿಂದ ಉಚ್ಛಾಟನೆ ಮಾಡಲಾಗಿದೆ ಎಂದು ಆರೋಪ ಮಾಡಿದ್ದಾರೆ. ವಕೀಲ ಶತಬೀಶ್ ಹಾಗೂ ಶಿವಣ್ಣ ಮೂಲಕ ಸಿಎಂ ಇಬ್ರಾಹಿಂ ಈ ಅರ್ಜಿಯನ್ನು ಸಲ್ಲಿಕೆ ಮಾಡಿದ್ದಾರೆ.





