Mysore
30
light rain

Social Media

ಗುರುವಾರ, 03 ಅಕ್ಟೋಬರ್ 2024
Light
Dark

ಪಂಚರತ್ನ ರಥಯಾತ್ರೆಯ ಸಮಾರೋಪ ಸಮಾರಂಭಕ್ಕೆ ಆಗಮಿಸುವಂತೆ ಕೋರಿ ಪತ್ರ ಬರೆದ ಸಿ.ಎಂ.ಇಬ್ರಾಹಿಂ

ಬೆಂಗಳೂರು : ಮೈಸೂರಿನಲ್ಲಿ ಮಾ.26ರಂದು ನಡೆಯಲಿರುವ ಪಂಚರತ್ನ ರಥಯಾತ್ರೆಯ ಸಮಾರೋಪ ಸಮಾರಂಭಕ್ಕೆ ಕಾರ್ಯಕರ್ತರೊಂದಿಗೆ ಆಗಮಿಸುವಂತೆ ಪಕ್ಷದ ಜಿಲ್ಲಾಧ್ಯಕ್ಷರು, ಶಾಸಕರು, ಸಂಸದರು, ಮಾಜಿ ಸಚಿವರು, ಮುಖಂಡರಿಗೆ ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಪತ್ರ ಬರೆದಿದ್ದಾರೆ.
ಮೈಸೂರಿನ ವರ್ತುಲ ರಸ್ತೆ ಬಳಿ ಜ್ವಾಲಾಮುಖಿ ತ್ರಿಪುರಸುಂದರಿಯಮ್ಮ ದೇವಸ್ಥಾನ ಪಕ್ಕದ ಮೈದಾನದಲ್ಲಿ ಪಕ್ಷದ ಪಂಚರತ್ನ ಸಮಾರೋಪ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಈ ಸಮಾವೇಶಕ್ಕೆ ತಮ್ಮ ಜಿಲ್ಲೆಯ ಪಕ್ಷದ ಮುಖಂಡರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರೊಂದಿಗೆ ಆಗಮಿಸಿ ಸಮಾವೇಶವನ್ನು ಯಶಸ್ವಿಗೊಳಸಲು ಕೋರಿ ಅವರುಸಿ.ಎಂ.ಇಬ್ರಾಹಿಂ ಪತ್ರ ಬರೆದಿದ್ದಾರೆ.

ಈ ಸಮಾವೇಶದಲ್ಲಿ ಮಾಜಿ ಪ್ರಧಾನ ಮಂತ್ರಿ ಹಾಗೂ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಹೆಚ್.ಡಿ. ದೇವೇಗೌಡರು ಉಪಸ್ಥಿತರಿದ್ದು, ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರಾದ ಕುಮಾರಸ್ವಾಮಿ, ಪಕ್ಷದ ಮುಖಂಡರುಗಳು, ಹಾಲಿ ಹಾಗೂ ಮಾಜಿ ಲೋಕಸಭಾ ಸದಸ್ಯರು, ರಾಜ್ಯಸಭಾ ಸದಸ್ಯರು, ಮಾಜಿ ಸಚಿವರು, ಹಾಲಿ ಹಾಗೂ ಮಾಜಿ ವಿಧಾನಸಭೆ ಮತ್ತು ವಿಧಾನ ಪರಿಷತ್ತು ಸದಸ್ಯರುಗಳು,ಜಿಲ್ಲಾಧ್ಯಕ್ಷರುಗಳು,ಮುಂದಿನ ವಿಧಾನಸಭಾ ಚುನಾವಣೆಯ ಪಕ್ಷದ ಅಭ್ಯರ್ಥಿಗಳು, ರಾಜ್ಯ ಪದಾಕಾರಿಗಳು, ವಿವಿಧ ವಿಭಾಗಗಳ ಅಧ್ಯಕ್ಷರು, ನಗರ ಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ, ತಾಲ್ಲೂಕು, ಜಿಲ್ಲಾ ಪಂಚಾಯತಿ ಹಾಲಿ ಹಾಗೂ ಮಾಜಿ ಸದಸ್ಯರು, ಪಕ್ಷದ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ