BREAKING NEWS

ವಿವಿ ಗಳ ಎಸ್ ಸಿ-ಎಸ್ ಟಿ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ವಿತರಣೆಗೆ ಸಿಎಂ ಸೂಚನೆ

ಬೆಂಗಳೂರು : ವಿಶ್ವವಿದ್ಯಾಲಯಗಳ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಲ್ಯಾಪ್‌ ಟಾಪ್‌ ಅನ್ನು ಎಸ್‌.ಪಿ.ಎಸ್.ಪಿ. / ಟಿ.ಎಸ್.ಪಿ. ಅಡಿ ವಿತರಿಸಲು ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ರಾಜ್ಯ ಸರ್ಕಾರದ ವ್ಯಾಪ್ತಿಗೆ ಬರುವ ವಿಶ್ವ ವಿದ್ಯಾಲಯಗಳ ಕುಲಪತಿಗಳು ಹಾಗೂ ಉನ್ನತ ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಗಳ ಸಭೆಯಲ್ಲಿ ಈ ತೀರ್ಮಾನಕ್ಕೆ ಬರಲಾಯಿತು.

ಲ್ಯಾಪ್ ಟಾಪ್ ವಿತರಿಸುವ ಸಂಬಂಧ ಎಸ್.ಸಿ.ಎಸ್.ಪಿ/ ಟಿ.ಎಸ್.ಪಿ. ಅಡಿ 230 ಕೋಟಿ ರೂ. ಒದಗಿಸುವಂತೆ ಸಮಾಜ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಮಣಿವಣ್ಣನ್ ಅವರಿಗೆ ಸಭೆ ನಡೆಯುವಾಗಲೇ ದೂರವಾಣಿ ಮೂಲಕ ಸೂಚನೆ ನೀಡಿದರು.

ವಿವಿಗಳಲ್ಲಿರುವ ಎಲ್ಲಾ ಸಮುದಾಯಗಳ ಪ್ರತಿ ವಿದ್ಯಾರ್ಥಿಗಳಿಗೂ ಲ್ಯಾಪ್ ಟಾಪ್ ವಿತರಿಸಬೇಕಿದೆ. ಮುಂದಿನ ದಿನಗಳಲ್ಲಿ ಇದಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.

ರಾಜ್ಯದ ವಿವಿಗಳಲ್ಲಿ ಮಂಜೂರಾದ ಹುದ್ದೆಗಳ ಶೇ. 50 ಕ್ಕೂ ಹೆಚ್ಚು ಖಾಲಿ ಇದ್ದು, 1882 ಹುದ್ದೆಗಳಷ್ಟೇ ಭರ್ತಿಯಾಗಿವೆ. ವಿಶ್ವವಿದ್ಯಾಲಯಗಳ ಸಂಪನ್ಮೂಲದಿಂದಲೇ 2865 ಅತಿಥಿ ಉಪನ್ಯಾಸಕರಿಗೆ ವೇತನ ಭರಿಸುವ ಕಾರಣ, ಅವರಿಗೆ ಆರ್ಥಿಕ ಹೊರೆಯಾಗಿದೆ ಎಂಬುದನ್ನು ಕುಲಪತಿಗಳು ಮತ್ತು ಅಧಿಕಾರಿಗಳು ಮುಖ್ಯಮಂತ್ರಿಯವರ ಗಮನಕ್ಕೆ ತಂದರು.

ನಿವೃತ್ತಿ ವೇತನ ವಿತರಣೆಯಲ್ಲಿ ಹಳೆಯ ವಿವಿಗಳು ವಿಭಜನೆಯಾದರೂ ಹಳೆಯ ವಿವಿಗಳು ಮಾತ್ರ ನಿವೃತ್ತಿ ವೇತನ ಪಾವತಿಸುತ್ತಿದ್ದಾರೆ. ಇದರಿಂದ ಹಳೆಯ ವಿವಿಗಳ ಆರ್ಥಿಕ ಹೊರೆ ಹೆಚ್ಚಾಗಿದೆ. ಪ್ರಸಕ್ತ ಆಯವ್ಯಯದಲ್ಲಿ ಒಟ್ಟಾರೆಯಾಗಿ ಉನ್ನತ ಶಿಕ್ಷಣ ಕ್ಷೇತ್ರಕ್ಕೆ 5470 ಕೋಟಿ ರೂ. ಹಂಚಿಕೆ ಮಾಡಲಾಗಿದ್ದು, 2474 ಕೋಟಿ ರೂ. ಹೆಚ್ಚುವರಿ ಅನುದಾನದ ಅಗತ್ಯವಿದೆ ಎಂದು ಕುಲಪತಿಗಳು ಮುಖ್ಯಮಂತ್ರಿಗಳಿಗೆ ಸಮಸ್ಯೆ ಹೇಳಿಕೊಂಡರು.

ಆಯವ್ಯಯ ಹಂಚಿಕೆ ಕಡಿಮೆಯಾಗುತ್ತಿದೆ. ಇನ್ನೊಂದೆಡೆ ವೆಚ್ಚ ಹೆಚ್ಚಾಗುತ್ತಿದೆ. ಇದರಿಂದ ನಾವು ಗುಣಮಟ್ಟದ ಶಿಕ್ಷಣವನ್ನು ನಿರೀಕ್ಷಿಸಲು ಹೇಗೆ ಸಾಧ್ಯ? ಇದಲ್ಲದೆ ಉನ್ನತ ಶಿಕ್ಷಣ ಇಲಾಖೆಯ ಆಯವ್ಯಯದಲ್ಲಿ ಶೇ. 88 ರಷ್ಟು ಅನುದಾನ ವೇತನಕ್ಕೆ ಬಳಕೆಯಾಗುತ್ತಿದೆ.

ವಿಶ್ವೇಶ್ವರಯ್ಯ ತಾಂತ್ರಿಕ ವಿವಿಯು ಕೈಗಾರಿಕೋದ್ಯಮಗಳ ಬೇಡಿಕೆಗೆ ಅನುಗುಣವಾದ ಪಠ್ಯಕ್ರಮ ರೂಪಿಸಿ, ಎಂಜಿನಿಯರಿಂಗ್‌ ಪದವೀಧರರಿಗೆ ಹೆಚ್ಚಿನ ಉದ್ಯೋಗಾವಕಾಶ ಒದಗಿಸಲು ಅನುವಾಗುವಂತಹ ಶಿಕ್ಷಣಕ್ಕೆ ಒತ್ತು ನೀಡಬೇಕೆಂದು ಮುಖ್ಯಮಂತ್ರಿಗಳು ಸೂಚಿಸಿದರು.

andolanait

Recent Posts

ಹನೂರಿನಲ್ಲಿ ಮೇವು-ನೀರಿಲ್ಲದೆ ಜಾನುವಾರುಗಳ ಪರದಾಟ: ಕಸ, ಪೇಪರ್ ತಿಂದು ಜೀವ ಉಳಿಸಿಕೊಳ್ಳುತ್ತಿರುವ ಮೂಕ ಪ್ರಾಣಿಗಳು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಹಲವು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಲವು ಗ್ರಾಮಗಳಲ್ಲಿ ಮಳೆಯ…

9 hours ago

ಬಂಡೀಪುರ ಸಫಾರಿ ವಾಹನಗಳಿಗೆ ಜಿಪಿಎಸ್ ಡ್ಯಾಶ್ ಕ್ಯಾಮರಾ ಅಳವಡಿಕೆ

ಗುಂಡ್ಲುಪೇಟೆ: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮೇಲುಕಾಮನಹಳ್ಳಿ ಸಫಾರಿ ಕೇಂದ್ರದ ವಾಹನಗಳಿಗೆ ಜಿಪಿಎಸ್ ಹಾಗೂ ಡ್ಯಾಶ್ ಕ್ಯಾಮ್‌ಗಳನ್ನು ಅಳವಡಿಸಲಾಗಿದೆ ಎಂದು…

9 hours ago

ಮೈಸೂರಿನಲ್ಲಿ ಯತೀಂದ್ರ ಮಹಾರಾಜನ ಏಕಚಕ್ರಾಧಿಪತ್ಯವಿದೆ: ಎಚ್.ವಿಶ್ವನಾಥ್ ವಾಗ್ದಾಳಿ

ಮೈಸೂರು: ಮೈಸೂರು ಜಿಲ್ಲೆಯಲ್ಲಿ ಸಚಿವ ಯತೀಂದ್ರ ಅವರ ಏಕಚಕ್ರಾಧಿಪತ್ಯ ನಡೆಯುತ್ತಿದೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಎಚ್. ವಿಶ್ವನಾಥ್…

9 hours ago

ಜೈಲಿನಲ್ಲಿ ಮೊಬೈಲ್ ಬಳಕೆ ಆರೋಪ: ಪ್ರಜ್ವಲ್ ರೇವಣ್ಣ 2 ದಿನ ಪೊಲೀಸ್ ಕಸ್ಟಡಿಗೆ

ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಅಕ್ರಮವಾಗಿ ಮೊಬೈಲ್ ಫೋನ್ ಬಳಸಿದ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ…

10 hours ago

ತಮಿಳುನಾಡಿಗೆ ಪ್ರತಿದಿನ 6 ಸಾವಿರ ಕ್ಯೂಸೆಕ್ಸ್ ನೀರು ಹರಿಸುವಂತೆ CWRC ಶಿಫಾರಸು

ನವದೆಹಲಿ: ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಹಿನ್ನಡೆಯಾಗಿದೆ. ತಮಿಳುನಾಡಿಗೆ ಪ್ರತಿದಿನ 6 ಸಾವಿರ ಕ್ಯೂಸೆಕ್ಸ್‌ ಕಾವೇರಿ…

10 hours ago

ಓದುಗರ ಪತ್ರ: ಮನವಿಗೆ ಸ್ಪಂದಿಸಿದಕ್ಕಾಗಿ ಅಭಿನಂದನೆಗಳು

ಮೈಸೂರಿನ ವಿ.ವಿ.ಮೊಹಲ್ಲದ ೨ನೇ ಮುಖ್ಯರಸ್ತೆಯಲ್ಲಿರುವ (ಕ್ಲಬ್ ಹಿಂಭಾಗ) ವಾರ್ಡ್ ಸಂಖ್ಯೆ ೧೯ರ ವ್ಯಾಪ್ತಿಗೆ ಒಳಪಡುವ ಕನ್ಸರ್‌ವೆನ್ಸಿಯಲ್ಲಿ ಗಿಡ ಗಂಟಿಗಳು ಬೃಹದಾಕಾರವಾಗಿ…

18 hours ago