BREAKING NEWS

ಮಣಿಪುರದ ಕ್ರೀಡಾಪಟುಗಳನ್ನು ತಮಿಳುನಾಡಿಗೆ ಆಹ್ವಾನಿಸಿದ ಸಿಎಂ ಎಂಕೆ ಸ್ಟಾಲಿನ್

ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಭಾನುವಾರ ಹಿಂಸಾಚಾರ ಪೀಡಿತ ಮಣಿಪುರದ ಕ್ರೀಡಾಪಟುಗಳನ್ನು ಆಹ್ವಾನಿಸಿದ್ದು, ರಾಜ್ಯದಲ್ಲಿಯೇ ಅವರಿಗೆ ತರಬೇತಿ ನೀಡುವುದಾಗಿ ತಿಳಿಸಿದ್ದಾರೆ.

ಅಲ್ಲದೆ, ಅವರ ಮಗ ಮತ್ತು ಕ್ರೀಡಾ ಸಚಿವ ಉದಯನಿಧಿ ಈ ಸಂಬಂಧ ಮಣಿಪುರದ ಕ್ರೀಡಾಪಟುಗಳಿಗೆ ಅಗತ್ಯವಿರುವ ಎಲ್ಲಾ ಸೌಲಭ್ಯಗಳನ್ನು ಒದಗಿಸುವ ಭರವಸೆ ನೀಡಿರುವುದಾಗಿ ತಿಳಿಸಿದ್ದಾರೆ.

ಖೇಲೋ ಇಂಡಿಯಾ ಮತ್ತು ಏಷ್ಯನ್ ಗೇಮ್ಸ್‌ನಂತಹ ಕ್ರೀಡಾಕೂಟಗಳಿಗೆ ತರಬೇತಿ ನೀಡಲು ಮಣಿಪುರದ ಸದ್ಯದ ಪರಿಸ್ಥಿತಿ ಅಲ್ಲಿನ ಕ್ರೀಡಾಪಟುಗಳಿಗೆ ಅನುಕೂಲಕರವಾಗಿಲ್ಲ ಎಂದು ಸ್ಟಾಲಿನ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

‘ಮಣಿಪುರದ ಕ್ರೀಡಾ ಪಟುಗಳಿಗೆ ತಮಿಳುನಾಡಿನಲ್ಲಿಯೇ ವ್ಯವಸ್ಥೆ ಕಲ್ಪಿಸುವಂತೆ ಯುವ ಕಲ್ಯಾಣ ಮತ್ತು ಕ್ರೀಡಾ ಅಭಿವೃದ್ಧಿ ಸಚಿವ ಉದಯನಿಧಿ ಸ್ಟಾಲಿನ್ ಅವರಿಗೆ ಸೂಚಿಸಿದ್ದೇನೆ. ಕ್ರೀಡಾ ಇಲಾಖೆಯ ಪರವಾಗಿ ‘ಉತ್ತಮ ಗುಣಮಟ್ಟದ’ ಸೌಲಭ್ಯಗಳನ್ನು ಒದಗಿಸುವುದಾಗಿ ಉದಯನಿಧಿ ಭರವಸೆ ನೀಡಿದ್ದಾರೆ’ ಎಂದು ತಿಳಿಸಿದ್ದಾರೆ.

2024ರ ಆವೃತ್ತಿಯ ಖೇಲೋ ಇಂಡಿಯಾ ಗೇಮ್ಸ್‌ಗೆ ತಮಿಳುನಾಡು ಈ ಭಾರಿ ಆತಿಥ್ಯ ವಹಿಸಲಿದೆ.

‘ಮಣಿಪುರ ರಾಜ್ಯವು ಕ್ರೀಡಾ ರಂಗಕ್ಕೆ ‘ಚಾಂಪಿಯನ್‌ಗಳನ್ನು, ವಿಶೇಷವಾಗಿ ಮಹಿಳಾ ಚಾಂಪಿಯನ್‌ಗಳನ್ನು’ ನೀಡುವಲ್ಲಿ ಹೆಸರುವಾಸಿಯಾಗಿದೆ. ಸದ್ಯದ ಮಣಿಪುರದಲ್ಲಿನ ಪರಿಸ್ಥಿತಿ ಬಗ್ಗೆ ತಮಿಳುನಾಡು ರಾಜ್ಯ ‘ಆಳವಾದ ದುಃಖ’ ವ್ಯಕ್ತಪಡಿಸಿದೆ. ಪರಿಸ್ಥಿತಿ ತಿಳಿಯಾಗಲೆಂದು ಎದುರು ನೋಡುತ್ತಿದೆ’ ಎಂದು ಸ್ಟಾಲಿನ್ ಹೇಳಿದರು.

ಎಮ್‌ಸಿ ಮೇರಿ ಕೋಮ್, ಕುಂಜರಾಣಿ ದೇವಿ, ಮೀರಾಬಾಯಿ ಚಾನು, ಖುಮುಚ್ಚಮ್ ಸಂಜಿತಾ ಚಾನು, ಟಿಂಗೊನ್ಲೀಮಾ ಚಾನು ಮತ್ತು ಅನೇಕ ವರ್ಷಗಳಿಂದ ಹಲವಾರು ಶ್ರೇಷ್ಠ ಕ್ರೀಡಾಪಟುಗಳು ಮಣಿಪುರದಿಂದಲೇ ಬಂದವರಾಗಿದ್ದಾರೆ.

‘ತಮಿಳು ಸಂಸ್ಕೃತಿ ಪ್ರೀತಿ ಮತ್ತು ಕಾಳಜಿಯಿಂದ ಬದುಕುತ್ತಿದೆ ಎಂದು ಹೇಳಿದ ಸಿಎಂ, ‘ಎಲ್ಲವೂ ನನ್ನದು, ಎಲ್ಲ ಜನರು ನನ್ನ ಸಂಬಂಧಿಕರು’ ಎಂಬ ಮಾತಿನಂತೆ ನಡೆದುಕೊಳ್ಳುತ್ತಿದೆ ಎಂದು ಅವರು ಹೇಳಿದರು.

ಈ ಪ್ರಯೋಜನವನ್ನು ಪಡೆಯಲು ಇಚ್ಛಿಸುವವ ಮಣಿಪುರದ ಕ್ರೀಡಾಪಟುಗಳು +91-8925903047 ಅನ್ನು ಸಂಪರ್ಕಿಸಬಹುದು ಅಥವಾ ID ಪುರಾವೆ ಮತ್ತು ತರಬೇತಿ ಅಗತ್ಯತೆಗಳು ಸೇರಿದಂತೆ ವಿವರಗಳನ್ನು sportstn2023@gmail.com ಗೆ ಇಮೇಲ್ ಮಾಡಬಹುದು.

andolanait

Recent Posts

ಭಾರೀ ಮಳೆಗೆ ಕೊಚ್ಚಿ ಹೋದ ಚೆಕ್ ಡ್ಯಾಂ: 15 ಅಡಿಗೂ ಹೆಚ್ಚು ಪ್ರವಾಹ

ಹನೂರು: ತಾಲ್ಲೂಕಿನ ಶಾಗ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಲಾಜರ್ ದೊಡ್ಡಿ ಗ್ರಾಮದಲ್ಲಿ ಒಡಿಪಿ ಸಂಸ್ಥೆಯಿಂದ ನಿರ್ಮಾಣ ಮಾಡಿದ್ದ ಚೆಕ್ ಡ್ಯಾಂ…

12 hours ago

ಭಾರೀ ಮಳೆಗೆ ಮನೆ ಕುಸಿತ: ಲಕ್ಷಾಂತರ ರೂ. ನಷ್ಟ

ಹನೂರು: ತಾಲ್ಲೂಕಿನ ಎಲ್ಲೇಮಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವೈಶಂಪಾಳ್ಯ ಗ್ರಾಮದಲ್ಲಿ ಭಾನುವಾರ ರಾತ್ರಿ ಸುರಿದ ಭಾರೀ ಮಳೆಗೆ ಮನೆ ಸಂಪೂರ್ಣ…

12 hours ago

ಧರ್ಮಸ್ಥಳ ಸೌಜನ್ಯ ಪ್ರಕರಣ: ಮರು ತನಿಖೆಗೆ ಸುಪ್ರೀಂಕೋರ್ಟ್ ಮಹತ್ವದ ಆದೇಶ

ನವದೆಹಲಿ: ಧರ್ಮಸ್ಥಳ ಸೌಜನ್ಯ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ನವದೆಹಲಿಯಲ್ಲಿ ನಡೆದ ವಿಚಾರಣೆಯಲ್ಲಿ, ಹಲವು…

14 hours ago

ಕಾಡಾನೆ ದಾಳಿ: ವ್ಯಕ್ತಿ ಸಾವು

ಸರಗೂರು: ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸರಗೂರು ತಾಲ್ಲೂಕಿನ ಕಾಡಗೆರೆ ಗ್ರಾಮದ…

16 hours ago

ಗಣೇಶ ವಿಸರ್ಜನೆ ಮೆರವಣಿಗೆ ರಾಜಕೀಯ ದಾಳವಾಗದಿರಲಿ…

ಬ್ರಿಟೀಷರ ವಿರುದ್ಧ ಸಮಾಜವನ್ನು ಅದರಲ್ಲೂ ಯುವಜನರನ್ನು ಸಂಘಟಿಸಿ, ದೇಶಭಕ್ತಿಯನ್ನು ಜಾಗೃತಿಗೊಳಿಸುವ ಮೂಲಕ ಅವರನ್ನು ಸ್ವಾತಂತ್ರ್ಯಸಂಗ್ರಾಮಕ್ಕೆ ಸಜ್ಜುಗೊಳಿಸುವ ಉದ್ದೇಶದಿಂದ ಆರಂಭವಾದ ಸಾರ್ವಜನಿಕ…

19 hours ago

ಕಾಂಗ್ರೆಸ್‌ನಲ್ಲೀಗ ಆತಂಕದ ಕಾರ್ಮೋಡ…

ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕಳೆದ ಮೂರು ವರ್ಷಗಳಿಂದ ಅಧಿಕಾರ ಹಂಚಿಕೆಯ ಸಂಘರ್ಷದಲ್ಲಿ ಮುಳುಗಿದ್ದ ಆಡಳಿತಾರೂಢ ಕಾಂಗ್ರೆಸ್…

19 hours ago