Mysore
29
overcast clouds

Social Media

ಮಂಗಳವಾರ, 30 ಜೂನ್ 2026
Light
Dark

ಕೇರಳದಲ್ಲಿ ಸರಣಿ ಸ್ಫೋಟದ ಬಗ್ಗೆ ಸಿಎಂ ಪಿಣರಾಯಿ ವಿಜಯನ್ ಪ್ರತಿಕ್ರಿಯೆ

ತಿರುವನಂತಪುರಂ : ಕೇರಳದ ಕಲಮಸ್ಸೆರಿಯಲ್ಲಿ ಕ್ರಿಶ್ಚಿಯನ್ ಧಾರ್ಮಿಕ ಗುಂಪಿನ ಸಮಾವೇಶ ಕೇಂದ್ರದಲ್ಲಿ ನಡೆದ ಸ್ಫೋಟವನ್ನು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ದುರದೃಷ್ಟಕರ ಮತ್ತು ಗಂಭೀರ ಎಂದು ಬಣ್ಣಿಸಿದ್ದಾರೆ.

ಘಟನಾ ಸ್ಥಳಕ್ಕೆ ಬಾಂಬ್ ಸ್ಕ್ವಾಡ್, ಫೊರೆನ್ಸಿಕ್ ತಂಡ, ಕೊಚ್ಚಿ ನಗರ ಪೊಲೀಸ್ ಕಮಿಷನರ್ ಮತ್ತು ಎರ್ನಾಕುಲಂ ಜಿಲ್ಲಾಧಿಕಾರಿಗಳು ಹಾಜರಾಗಿ ಪರಿಶೀಲನೆ ನಡೆಸುತ್ತಿದ್ದಾರೆ.

ಕ್ರಿಶ್ಚಿಯನ್ ಧಾರ್ಮಿಕ ಗುಂಪಾದ ʼಯೆಹೋವನ ಸಾಕ್ಷಿಗಳʼ ಕಾರ್ಯಕ್ರಮವು ಕಲಮಸ್ಸೇರಿಯ ಕನ್ವೆನ್ಷನ್‌ ಸೆಂಟರ್‌ ಒಂದರಲ್ಲಿ ನಡೆಯುತ್ತಿತ್ತು. ಕಾರ್ಯಕ್ರಮ ಆರಂಭವಾಗುತ್ತಿದ್ದಂತೆ ಸರಣಿ ಸ್ಫೋಟಗಳು ಸಂಭವಿಸಿದೆ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ

ದಿಲ್ಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ‌ ಪಿಣರಾಯಿ ವಿಜಯನ್, ಇತರ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಸ್ಫೋಟದ ಸ್ಥಳಕ್ಕೆ ತೆರಳಿರುವ ರಾಜ್ಯ ಡಿಜಿಪಿ ಅವರೊಂದಿಗೆ ಮಾತುಕತೆ ನಡೆಸಿದ್ದೇನೆ ಎಂದು ಹೇಳಿದರು.

“ಇದೊಂದು ದುರದೃಷ್ಟಕರ ಘಟನೆ. ಓರ್ವ ವ್ಯಕ್ತಿ ಸಾವನ್ನಪ್ಪಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ. ತನಿಖೆ ಆರಂಭಿಸಲಾಗಿದ್ದು, ಹೆಚ್ಚಿನ ವಿವರಗಳು ನಂತರ ಲಭ್ಯವಾಗಲಿದೆ” ಎಂದು ಪಕ್ಷದ ಕೆಲವು ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ತೆರಳಿದ್ದ ಸಿಎಂ ದೆಹಲಿಯಲ್ಲಿ ಸುದ್ದಿಗಾರರಿಗೆ ತಿಳಿಸಿದರು.

ಘಟನೆಯನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಅವರು ಹೇಳಿದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!