ತಿರುವನಂತಪುರಂ : ಕೇರಳದ ಕಲಮಸ್ಸೆರಿಯಲ್ಲಿ ಕ್ರಿಶ್ಚಿಯನ್ ಧಾರ್ಮಿಕ ಗುಂಪಿನ ಸಮಾವೇಶ ಕೇಂದ್ರದಲ್ಲಿ ನಡೆದ ಸ್ಫೋಟವನ್ನು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ದುರದೃಷ್ಟಕರ ಮತ್ತು ಗಂಭೀರ ಎಂದು ಬಣ್ಣಿಸಿದ್ದಾರೆ.
ಘಟನಾ ಸ್ಥಳಕ್ಕೆ ಬಾಂಬ್ ಸ್ಕ್ವಾಡ್, ಫೊರೆನ್ಸಿಕ್ ತಂಡ, ಕೊಚ್ಚಿ ನಗರ ಪೊಲೀಸ್ ಕಮಿಷನರ್ ಮತ್ತು ಎರ್ನಾಕುಲಂ ಜಿಲ್ಲಾಧಿಕಾರಿಗಳು ಹಾಜರಾಗಿ ಪರಿಶೀಲನೆ ನಡೆಸುತ್ತಿದ್ದಾರೆ.
ಕ್ರಿಶ್ಚಿಯನ್ ಧಾರ್ಮಿಕ ಗುಂಪಾದ ʼಯೆಹೋವನ ಸಾಕ್ಷಿಗಳʼ ಕಾರ್ಯಕ್ರಮವು ಕಲಮಸ್ಸೇರಿಯ ಕನ್ವೆನ್ಷನ್ ಸೆಂಟರ್ ಒಂದರಲ್ಲಿ ನಡೆಯುತ್ತಿತ್ತು. ಕಾರ್ಯಕ್ರಮ ಆರಂಭವಾಗುತ್ತಿದ್ದಂತೆ ಸರಣಿ ಸ್ಫೋಟಗಳು ಸಂಭವಿಸಿದೆ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ
ದಿಲ್ಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪಿಣರಾಯಿ ವಿಜಯನ್, ಇತರ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಸ್ಫೋಟದ ಸ್ಥಳಕ್ಕೆ ತೆರಳಿರುವ ರಾಜ್ಯ ಡಿಜಿಪಿ ಅವರೊಂದಿಗೆ ಮಾತುಕತೆ ನಡೆಸಿದ್ದೇನೆ ಎಂದು ಹೇಳಿದರು.
“ಇದೊಂದು ದುರದೃಷ್ಟಕರ ಘಟನೆ. ಓರ್ವ ವ್ಯಕ್ತಿ ಸಾವನ್ನಪ್ಪಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ. ತನಿಖೆ ಆರಂಭಿಸಲಾಗಿದ್ದು, ಹೆಚ್ಚಿನ ವಿವರಗಳು ನಂತರ ಲಭ್ಯವಾಗಲಿದೆ” ಎಂದು ಪಕ್ಷದ ಕೆಲವು ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ತೆರಳಿದ್ದ ಸಿಎಂ ದೆಹಲಿಯಲ್ಲಿ ಸುದ್ದಿಗಾರರಿಗೆ ತಿಳಿಸಿದರು.
ಘಟನೆಯನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಅವರು ಹೇಳಿದರು.
ಕಠ್ಮಂಡು: ನೇಪಾಳದಲ್ಲಿ ಮತ್ತೆ ಪ್ರವಾಹ, ಭೂಕುಸಿತದ ಆರ್ಭಟ ಮುಂದುವರಿದಿದ್ದು, ಕೇವಲ 8 ಸೆಕೆಂಡ್‌ಗಳಲ್ಲಿ ಪರ್ವತವೇ ಕುಸಿದು ಬಿದ್ದಿದೆ! ವಿವಿಧೆಡೆ ಸಂಭವಿಸಿದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಪಳನಿಮೇಡ್ ಗ್ರಾಮದಲ್ಲಿ ರೈತನ ಮೇಲೆ ಕಾಡುಹಂದಿ ದಾಳಿ ಮಾಡಿದ್ದು,…
ಮೈಸೂರು: ಮುಡಾ 50:50 ಸೈಟ್ ವಿಚಾರದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಮಹತ್ವದ ಮಾಹಿತಿ ನೀಡಿದ್ದಾರೆ. ಶೀಘ್ರದಲ್ಲೇ ಅಕ್ರಮ ಸೈಟ್‌ಗಳ…
ಕೊಪ್ಪಳ: ಮೈಸೂರು ದಸರಾ ಉದ್ಘಾಟನೆ ಕುರಿತು ಹರಿದಾಡುತ್ತಿದ್ದ ವದಂತಿಗಳಿಗೆ ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿ ತೆರೆ ಎಳೆದಿದ್ದಾರೆ. ಮೈಸೂರು ದಸರಾ ಉದ್ಘಾಟನೆಗೆ…
ನವದೆಹಲಿ: ಬ್ಯಾಂಕ್ ಗ್ರಾಹಕರಿಗೆ ಯಾವುದೇ ಆತಂಕ ಬೇಡ. ಇಂದಿನಿಂದ ನಡೆಯಬೇಕಿದ್ದ 3 ದಿನಗಳ ಬ್ಯಾಂಕ್ ಮುಷ್ಕರ ಮುಂದೂಡಿಕೆಯಾಗಿದೆ. ಬ್ಯಾಂಕ್ ಸೇವೆಗಳಲ್ಲಿ…
ಪ್ರಜಾತಂತ್ರ ವ್ಯವಸ್ಥೆಯ ಭಾರತದಲ್ಲಿ ಪ್ರತಿ ಐದು ವರ್ಷಗಳಿಗೊಮ್ಮೆ ಸಂಸತ್ತು ಮತ್ತು ವಿಧಾನಸಭೆಗಳಿಗೆ ಮುಕ್ತ ಮತ್ತು ನಿಷ್ಪಕ್ಷಪಾತ ಚುನಾವಣೆಯನ್ನು ನಡೆಸುವ ಮೂಲಕ…