ಬೆಂಗಳೂರು : ಮುಖ್ಯಮಮತ್ರಿ ಹುದ್ದೆ ಸದ್ಯಕ್ಕೆ ಖಾಲಿ ಇಲ್ಲ. ಹೀಗಾಗಿ ಅದರ ಬಗ್ಗೆ ಚರ್ಚೆ ಅನಗತ್ಯ ಎಂದು ಸಂಸದ ಡಿ.ಕೆ.ಸುರೇಶ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸೇರಿದಂತೆ ಯಾವುದೇ ಅಧಿಕಾರಗಳ ಬಗ್ಗೆ ಹೈಕಮಾಂಡ್ ನಿರ್ಧಾರ ತೆಗೆದುಕೊಳ್ಳುತ್ತದೆ. ರಾಜ್ಯದ ಜನ ಐದು ವರ್ಷ ಆಡಳಿತ ನಡೆಸಲು ಅವಕಾಶ ಮಾಡಿಕೊಟ್ಟಿದ್ದಾರೆ. ಹೀಗಾಗಿ ನಮ್ಮ ಗುರಿ ಸುಭದ್ರ ಸರ್ಕಾರ ಹಾಗೂ ಜನಪರ ಆಡಳಿತದತ್ತ ಇದೆ ಎಂದರು.
ಸಿದ್ದರಾಮಯ್ಯನವರು ನಮ್ಮ ನಾಯಕರು. ಅದರಲ್ಲಿ ಎರಡು ಮಾತಿಲ್ಲ. ಮುಖ್ಯಮಂತ್ರಿ ಹುದ್ದೆ ಖಾಲಿ ಇಲ್ಲದೆ ಇರುವುದರಿಂದ ಆ ಬಗ್ಗೆ ಚರ್ಚೆಯೂ ಅನವಶ್ಯಕ. ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಬೇಕೆಂದು ಹೇಳುತ್ತಾರೆ. ಯಾರ ಅಭಿಪ್ರಾಯಗಳು ಏನೇ ಇದ್ದರೂ ಅಂತಿಮ ತೀರ್ಮಾನ ಮಾತ್ರ ಹೈಕಮಾಂಡ್ ತೆಗೆದುಕೊಳ್ಳುತ್ತದೆ ಎಂದು ಹೇಳಿದರು.
ಜಾತಿಗಣತಿ ವರದಿಯನ್ನು ತಿರಸ್ಕರಿಸಬೇಕು ಎಂದು ನಿನ್ನೆ ನಡೆದ ಒಕ್ಕಲಿಗ ಸಮುದಾಯದ ಜನಪ್ರತಿನಿಗಳು ಹಾಗೂ ಸ್ವಾಮೀಜಿಗಳ ಸಭೆಯಲ್ಲಿ ಕೇಳಿಬಂದ ಅಭಿಪ್ರಾಯ ಕುರಿತಂತೆ ಪ್ರತಿಕ್ರಿಯಿಸಿದ ಅವರು, ಕಾಂತರಾಜ ವರದಿ ಇನ್ನು ಸಚಿವ ಸಂಪುಟದ ಮುಂದೆ ಮನ್ನಣೆಯಾಗಿಲ್ಲ. ಈ ಕುರಿತು ಬಹಳ ದಿನದಿಂದ ಚರ್ಚೆ ವಿವಾದಗಳಿವೆ. ಅವೇನು ಹೊಸದೇನಲ್ಲ. ಮೊದಲು ವರದಿ ಸಂಪುಟದ ಮುಂದೆ ಮಂಡನೆಯಾಗಲಿ. ಆನಂತರ ಅದರ ಕುರಿತು ಪ್ರತಿಕ್ರಿಯೆ ನೀಡುತ್ತೇವೆ ಎಂದರು.
ಒಕ್ಕಲಿಗರ ಸಂಘದ ನೂತನ ಅಧ್ಯಕ್ಷರು ಸಭೆ ಕರೆದಿದ್ದರು. ಅಲ್ಲಿ ಸಮುದಾಯದ ಆಗುಹೋಗುಗಳ ಬಗ್ಗೆ ಚರ್ಚೆಯಾಗಿದೆ. ಸ್ವಾಮೀಜಿಗಳು ತಮ್ಮ ಅಭಿಪ್ರಾಯ ತಿಳಿಸಿದ್ದಾರೆ. ಅದರಲ್ಲಿ ತಪ್ಪಿಲ್ಲ. ಸಮಾಜದ ಹಿತದೃಷ್ಟಿಯಿಂದ ಗುರುಗಳು ಮಾತನಾಡುತ್ತಾರೆ ಎಂದು ಹೇಳಿದರು.
ಸರ್ಕಾರ ಎಲ್ಲ ಸಮುದಾಯದ ಹಿತವನ್ನು ಗಮನದಲ್ಲಿಟ್ಟುಕೊಂಡು ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತದೆ. ವರದಿ ವೈಜ್ಞಾನಿಕವೋ, ಅವೈಜ್ಞಾನಿಕವೋ ಎಂಬುದು ಮಂಡನೆಯಾದ ಬಳಿಕವಷ್ಟೇ ತಿಳಿಯಲು ಸಾಧ್ಯ ಎಂದರು.
ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಇತ್ತೀಚೆಗೆ ನೀಡುತ್ತಿರುವ ಹೇಳಿಕೆಗಳು ಸಮರ್ಥನೀಯವಾಗಿಲ್ಲ. ಹೀಗಾಗಿ ತಾವು ನಿನ್ನೆ ಅವರ ಕುರಿತು ಮಾತನಾಡಿದ್ದಾಗಿ ತಿಳಿಸಿದರು.
ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು, ಕಾಂಗ್ರೆಸ್ ನಾಯಕರು ನಾಯಿ ನರಿಗಳಂತೆ ಕಿತ್ತಾಡುತ್ತಿದ್ದಾರೆಂಬ ಹೇಳಿಕೆಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಅವರು, ಅವರ ಬಗ್ಗೆ ನಮಗೆ ಗೌರವವಿದೆ ಹಾಗಾಗಿ ಈ ಬಗ್ಗೆ ಮಾತನಾಡುವುದಿಲ್ಲ ಎಂದು ಹೇಳಿದರು.
ಕಾಂಗ್ರೆಸ್ ನಾಯಕರು ಕಲೆಕ್ಷನ್‍ಗಾಗಿ ರಾಜ್ಯಕ್ಕೆ ಭೇಟಿ ನೀಡಿದ್ದಾರೆ ಎಂಬ ಬಿಜೆಪಿ ನಾಯಕರ ಹೇಳಿಕೆಗೆ ಪ್ರತಿಕ್ರಿಯಿಸಿ, ಈ ಹಿಂದೆ ಶೇ.40ರಷ್ಟು ಕಮಿಷನ್ ವಸೂಲಿ ದೇಶಾದ್ಯಂತ ಹರಿದಾಡುತ್ತಿದೆ. ಅದಕ್ಕಾಗಿಯೇ ಈ ಅವಾಂತರಗಳು ನಡೆಯುತ್ತಿವೆ ಎಂದು ತಿರುಗೇಟು ನೀಡಿದರು.
ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್‌ಸಿ ಸಿ.ಟಿ…
ಮೈಸೂರು: ನಗರದ ಅಲ್ ಅನ್ಸಾರ್ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…