BREAKING NEWS

ರಾಜ್ಯದ ಅರ್ಹ ರೈತರಿಗೆ ಬರ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ

ಮೈಸೂರು : ಬರ ಪರಿಹಾರ ಸಂಬಂಧ ಕೇಂದ್ರಕ್ಕೆ ಬರೆದ ಪತ್ರಗಳಿಗೆ ಈ ವರೆಗೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ರಾಜ್ಯದಿಂದ ಮೂವರು ಸಚಿವರು ದೆಹಲಿಗೆ ಹೋದರೂ ಸಕಾರಾತ್ಮಕ ಪ್ರತಿಕ್ರಿಯೆ ಸಿಕ್ಕಿಲ್ಲ. ಕೇಂದ್ರ ಸರ್ಕಾರ ರಾಜ್ಯದ ರೈತರಿಗೆ ಪರಿಹಾರ ಕೊಡಲು ಇನ್ನೂ ಪ್ರಾಥಮಿಕ ಸಭೆಯನ್ನೇ ನಡೆಸದ ಹಿನ್ನೆಲೆಯಲ್ಲಿ ರಾಜ್ಯದಿಂದ ತುರ್ತು ಕ್ರಮ ಕೈಗೊಳ್ಳಲಾಗಿದ್ದು, ಮೊದಲ ಕಂತಿನಲ್ಲಿ ಅರ್ಹ ರೈತರಿಗೆ ತಲಾ ರೂ.2,000 ವರೆಗೆ ಬೆಳೆ ಪರಿಹಾರ ಹಣ ಬಿಡುಗಡೆ ಮಾಡುತ್ತಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.

ಉದ್ಯೋಗ ಖಾತರಿ ಯೋಜನೆಯಡಿ 150 ಮಾನವ ದಿನಗಳ ಉದ್ಯೋಗ ಕೊಡಲು ಕೇಂದ್ರಕ್ಕೆ ಅನುಮತಿ ಕೋರಲಾಗಿತ್ತು. ಆದರೆ ಇನ್ನೂ ಅನುಮತಿ ನೀಡಿಲ್ಲ. ರಾಜ್ಯದ 223 ತಾಲ್ಲೂಕುಗಳನ್ನು ಬರಪೀಡಿತ ಎಂದು ಮೂರು ಹಂತದಲ್ಲಿ ಘೋಷಿಸಿದ್ದೇವೆ‌. ರೂ.18,171 ಕೋಟಿ ಪರಿಹಾರದ ಆರ್ಥಿಕ ನೆರವು ನೀಡಲು ಕೇಂದ್ರಕ್ಕೆ ಪತ್ರ ಬರೆದಿದ್ದೇವೆ. ಕೇಂದ್ರ ನಮ್ಮ ತೆರಿಗೆ ಹಣದ ಪಾಲನ್ನು ನಮಗೆ ವಾಪಾಸ್ ಕೊಟ್ಟರೂ ಸಾಕು ನಮ್ಮ ರೈತರ ಕಷ್ಟಕ್ಕೆ ಸಹಾಯವಾಗುತ್ತಿತ್ತು.

ಸೆಪ್ಟಂಬರ್ 21 ರಂದು ಬರಪರಿಹಾರಕ್ಕಾಗಿ ಕೇಂದ್ರಕ್ಕೆ ಮೊದಲ ಮನವಿ ಮಾಡಿದ್ದೆವು. ಕೇಂದ್ರದ ತಂಡ ಅಕ್ಟೋಬರ್ 4 ರಿಂದ 9ರ ವರೆಗೆ ರಾಜ್ಯ ಪ್ರವಾಸ ಮಾಡಿ ಬರ ಸಮೀಕ್ಷೆ ನಡೆಸಿ, ವರದಿ ನೀಡಿದೆ. ನಾವೆಲ್ಲಾ ಕೇಂದ್ರ ತಂಡವನ್ನು ಭೇಟಿ ಮಾಡಿ ಚರ್ಚಿಸಿ ಬರದ ಸ್ಥಿತಿ ವಿವರಿಸಿದ್ದೇವೆ. 48.19 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ನಷ್ಟ ಆಗಿದೆ. ರೂ.4,663 ಕೋಟಿ ಬೆಳೆ ನಷ್ಟ ಪರಿಹಾರ ಕೇಂದ್ರಕ್ಕೆ ಕೇಳಿದ್ದೆವು. ಕೇಂದ್ರ ಸಚಿವರಿಗೂ ಮನವಿ ಮಾಡಿದ್ದೇವೆ. ಕೇಂದ್ರ ಕೃಷಿ ಮತ್ತು ಗೃಹ ಸಚಿವರನ್ನು ಖುದ್ದು ಭೇಟಿ ಮಾಡಲು ಸಮಯ ಕೊಡಿ ಎಂದು ಪತ್ರ ಬರೆದಿದ್ದೆ. ಇವತ್ತಿನವರೆಗೂ ಸಮಯ ಕೊಟ್ಟಿಲ್ಲ ಎಂದು ವಿವರಿಸಿದರು.

ಇವತ್ತಿನವರೆಗೂ ಕೇಂದ್ರ ಸಭೆಯನ್ನೇ ನಡೆಸಿಲ್ಲ. ಸಮಯ ಕೇಳಿದರೂ ಭೇಟಿಗೆ ಅವಕಾಶ ಕೊಟ್ಟಿಲ್ಲ. ಅಧಿಕಾರಿಗಳನ್ನಾದರೂ ಭೇಟಿ ಮಾಡಿ ಎಂದು ಹೇಳಿ ನಾನು ಮೂವರು ಸಚಿವರನ್ನು ದೆಹಲಿಗೆ ತೆರಳಲು ಹೇಳಿದ್ದೆ. 3 ಜನ‌ ದೆಹಲಿಗೆ ಹೋಗಿ ಅಧಿಕಾರಿಗಳಿಗೆ ವಿವರಿಸಿದ್ದಾರೆ. ವಿತ್ತ ಸಚಿವರನ್ನು ನಮ್ಮ ಮಂತ್ರಿಗಳು ಭೇಟಿ ಮಾಡಿದ್ದಾರೆ. ಆದರೂ ಕೇಂದ್ರ ಸರ್ಕಾರ ಇವತ್ತಿನವರೆಗೆ ಸಭೆ ನಡೆಸಿಲ್ಲ. ಪರಿಹಾರ ನೀಡುವ‌ ಪ್ರಕ್ರಿಯೆಯನ್ನೇ ಶುರು ಮಾಡಿಲ್ಲ ಎಂದರು.

ಬಿತ್ತನೆ ವೈಫಲ್ಯ ಮತ್ತು ಮಧ್ಯಂತರ ವಿಮೆ ಪರಿಹಾರಕ್ಕೆ ರಾಜ್ಯ ಸರ್ಕಾರ ಈಗಾಗಲೇ 6.5 ಲಕ್ಷ ರೈತರಿಗೆ ರೂ.460 ಕೋಟಿ ನಮ್ಮ ಸರ್ಕಾರ ಬಿಡುಗಡೆ ಮಾಡಿದೆ. ಕುಡಿಯುವ ನೀರು, ಮೇವಿಗೆ ರೂ.327 ಕೋಟಿ ಬಿಡುಗಡೆ, ರೂ.780 ಕೋಟಿ DC ಗಳ PD ಖಾತೆಯಲ್ಲಿದೆ. ಅವರೂ ತಹಶೀಲ್ದಾರ್ ಗಳಿಗೆ ಬಿಡುಗಡೆ ಮಾಡಿದ್ದಾರೆ. ಯಾವ ತಾಲ್ಲೂಕುಗಳಲ್ಲೂ ಕುಡಿಯುವ ನೀರಿಗೆ ಸಮಸ್ಯೆ ಇಲ್ಲದಂತೆ ನಿರ್ವಹಿಸಿದ್ದೇವೆ.ವಿವಿಧ ತಾಲ್ಲೂಕುಗಳ 60 ಹಳ್ಳಿಗಳಲ್ಲಿ ಟ್ಯಾಂಕರ್ ನೀರಿನ ವ್ಯವಸ್ಥೆ ಮಾಡಿದ್ದೇವೆ. ಹೊರ ರಾಜ್ಯಕ್ಕೆ ಮೇವು ಹೋಗದಂತೆ ತಡೆದಿದ್ದೇವೆ. ಮೇವಿನ‌ ಬೀಜ ವಿತರಣೆ ಮಾಡಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ತಮ್ಮ ಎಕ್ಸ್‌ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

andolanait

Recent Posts

ತಿ.‌ ನರಸೀಪುರ: ಬೈಕ್ ಡಿಕ್ಕಿ ಚಿರತೆ ಸಾವು

ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…

6 hours ago

ತಿರುಪತಿ ಲಡ್ಡು: ತುಪ್ಪದಲ್ಲಿ ಪ್ರಾಣಿ ಕೊಬ್ಬು ಬಳಕೆ

ಅಮರಾವತಿ: ಜಗತ್‌ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…

8 hours ago

ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ಖಾನ್‌ ತಂದೆಗೆ ಜೀವ ಬೆದರಿಕೆ: ಮಹಿಳೆ ಸೇರಿ ಇಬ್ಬರ ಬಂಧನ

ಮುಂಬೈ:‌ ಬಾಲಿವುಡ್‌ನ ಭಾಯಿಜಾನ್ ಸಲ್ಮಾನ್‌ ಖಾನ್‌ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…

8 hours ago

ಶಾಸಕ ಮುನಿರತ್ನಗೆ ಜಾಮೀನು: ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಬಂಧನ ಸಾಧ್ಯತೆ

ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…

9 hours ago

ನುಡಿ ಹಬ್ಬಕ್ಕೆ ಆಹ್ವಾನಿಸಲು ಸಿದ್ಧವಾಗಿದೆ ಕನ್ನಡ ರಥ

ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…

10 hours ago

ಬಸ್‌ನಲ್ಲಿ ಪ್ರಯಾಣ: ಮಹಿಳೆಯರಿಂದ ಶಕ್ತಿಯೋಜನೆಯ ಅಭಿಪ್ರಾಯ ಪಡೆದ ಪುಷ್ಪ ಅಮರನಾಥ್‌

ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…

10 hours ago