ಮೈಸೂರು: ಇಲ್ಲಿನ ಯರಗನ ಹಳ್ಳಿಯಲ್ಲಿ ಅನಿಲ ಸೋರಿಕೆಯಿಂದ ಸಂಭವಿಸಿದ ಅನಾಹುತದಲ್ಲಿ ಮೃತರಾದ ಇಡೀ ಕುಟುಂಬದವರ ಮನೆಗೆ ಇಂದು (ಗುರುವಾರ, ಮೇ.23) ಭೇಟಿ ನೀಡಿದ ಸಿಎಂ ಸಿದ್ದರಾಮಯ್ಯ ಪರಿಶೀಲನೆ ನಡೆಸಿದರು.
ಬಳಿಕ ಮೃತರ ಸಂಬಂಧಿಗಳಿಗೆ ಸಾಂತ್ವನ ಹೇಳಿ ಮೃತ ಕುಟುಂಬಕ್ಕೆ ಸಂತಾಪ ಸಲ್ಲಿಸಿದರು. ಬಳಿಕ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿ ಮೃತರಿಗೆ ತಲಾ 3 ಲಕ್ಷ ರೂನಂತೆ ಕುಟುಂಬಕ್ಕೆ 12 ಲಕ್ಷ ರೂ. ಪರಿಹಾರ ಘೋಷಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.
ಮಾಧ್ಯಮಗಳ ಜತೆ ಮಾತನಾಡುತ್ತಾ ಸಿಎಂ ಸಿದ್ದರಾಮಯ್ಯ, ಅನಿಲ ಸೋರಿಕೆಯಿಂದ ಕುಮಾರಸ್ವಾಮಿ ಎಂಬುವವರ ಇಡೀ ಕುಟುಂಬ ಸಾವನ್ನಪ್ಪಿದೆ. ಅವರ ಹೆಂಡತಿ ಇಬ್ಬರು ಮಕ್ಕಳು ಮೃತರಾಗಿದ್ದಾರೆ. ಅವರ ತಂದೆ ತಿಮ್ಮಯ್ಯ ಕಡೂರು ತಾಲೂಕಿನವರು. ಇಲ್ಲಿಗೆ 20 ವರ್ಷಗಳ ಹಿಂದೆಯೇ ಬಂದು ನೆಲಸಿದ್ದಾರೆ. ಕಡು ಬಡತನದಿಂದ ಬಂದವರಾಗಿದ್ದಾರೆ. ಹಾಗಾಗಿ ಅವರೆಲ್ಲರಿಗೂ ಸಾಂತ್ವಾನ ಹೇಳಿ ಪರಿಹಾರ ಘೋಷಣೆ ಮಾಡಿದ್ದೇನೆ. ಈ ಸಂಬಂಧ ಜಿಲ್ಲಾ ಉಸ್ತುವಾರಿ ಸಚಿವರು ಘೋಷಿಸಿದ್ದು, ಅದನ್ನು ನಾನು ಅನುಮೋದಿಸಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಮಾಧ್ಯಮಳಿಗೆ ಮಾಹಿತಿ ನೀಡಿದರು.
ಮೈಸೂರು : ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಹೋರಾಟದ ಬದುಕು ಮತ್ತು ಅವರು ಪ್ರತಿಪಾದಿಸಿದ ಸಮಾನತೆಯ ತತ್ವಗಳನ್ನು ಪ್ರತಿಯೊಬ್ಬರೂ ತಮ್ಮ…
ಚಾಮರಾಜನಗರ : ತಾಲ್ಲೂಕಿನ ವಿ.ಸಿ.ಹೊಸೂರು ಗ್ರಾಮಸ್ಥರು ತಮ್ಮ ಊರಿಗೆ ಇನ್ನೂ ಪೂರ್ವ ಮುಂಗಾರು ಮಳೆ ಪ್ರವೇಶ ಆಗದ ಹಿನ್ನೆಲೆಯಲ್ಲಿ ಮಳೆಗಾಗಿ…
ಬೆಂಗಳೂರು : ರಾಜ್ಯದಲ್ಲಿ ನಿರುದ್ಯೋಗ ತಾಂಡವವಾಡುತ್ತಿದೆ. ಪಾರದರ್ಶಕ ನೇಮಕಾತಿ ಮಾಡಬೇಕಾದ ಕರ್ನಾಟಕ ಲೋಕಸೇವಾ ಆಯೋಗ ಅಕ್ರಮಗಳಲ್ಲಿ ಮುಳುಗಿದೆ. ಸರ್ಕಾರ ಒಂದೇ…
ಶ್ರೀರಂಗಪಟ್ಟಣ : ಶ್ರೀರಂಗಪಟ್ಟಣದ ಟೌನ್‌ನಲ್ಲಿ ನಡೆದ ಮುತ್ತು ಮಾರಮ್ಮ ದೇವಿ ಕರಗದ ವೇಳೆ ಕೊಂಡದಲ್ಲಿ ಬಿದ್ದು ಇಬ್ಬರು ಗಾಯಗೊಂಡ ಘಟನೆ…
ಮಂಡ್ಯ : ಆಧುನಿಕ ಜಗತ್ತಿನಲ್ಲಿ ಪುರುಷರ ಮೇಲಿನ ದೌರ್ಜನ್ಯ ಮತ್ತು ದಬ್ಬಾಳಿಗೆ ಹತ್ತಿಕ್ಕಲು ರಾಜ್ಯ ಮಾನವ ಹಕ್ಕುಗಳ ಪುರುಷರ ಹಿತರಕ್ಷಣಾ…
ಬೆಂಗಳೂರು : ಬಾಬಾಸಾಹೇಬ್ ಅಂಬೇಡ್ಕರ್ ಅವರು ನೀಡಿದ ಸಂವಿಧಾನದ ಶಕ್ತಿಯಿಂದಲೇ ನಾನಿಂದು ಮುಖ್ಯಮಂತ್ರಿಯಾಗಿ ಜನಸೇವೆ ಸಲ್ಲಿಸಲು ಸಾಧ್ಯವಾಗಿದೆ ಎಂದು ಮುಖ್ಯಮಂತ್ರಿ…