ಬೆಂಗಳೂರು: ರಾಜ್ಯದಲ್ಲಿ ಪ್ರತಿದಿನ ಸರಾಸರಿ 72 ಲಕ್ಷ ಲೀಟರ್ ಉತ್ಪಾದನೆಯಾಗುತ್ತಿದ್ದ ಹಾಲು ಇಂದು ಒಂದು ಕೋಟಿ ಲೀಟರ್ ಗೆ ತಲುಪಿದೆ ಎಂದು ಸಿಎಂ ಸಿದ್ದರಾಮಯ್ಯ ಸಂತಸ ವ್ಯಕ್ತಪಡಿಸಿದ್ದಾರೆ.
ಈ ಕುರಿತು ತಮ್ಮ ಅಧಿಕೃತ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿರುವ ಸಿಎಂ, ಈ ಶ್ರೇಯ ನಾಡಿನ ಪ್ರತಿಯೊಬ್ಬ ಶ್ರಮಜೀವಿ ಹೈನುಗಾರನಿಗೂ ಸಲ್ಲಬೇಕು ಎಂದು ತಿಳಿಸಿದ್ದಾರೆ.
ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಹೈನುಗಾರರಿಂದ ಖರೀದಿಸುವ ಹಾಲಿಗೆ ರೂ.3 ಹೆಚ್ಚಳ ನೀಡುತ್ತಿರುವುದು, ಉತ್ತಮ ಮುಂಗಾರಿನಿಂದಾಗಿ ಜಾನುವಾರುಗಳಿಗೆ ಹಸಿರು ಮೇವು ಲಭ್ಯವಾಗುತ್ತಿರುವುದು ಈ ಎಲ್ಲಾ ಕಾರಣದಿಂದಾಗಿ ಕಳೆದ ವರ್ಷ ನಿತ್ಯ ಸರಾಸರಿ 72 ಲಕ್ಷ ಲೀಟರ್ ಉತ್ಪಾದನೆಯಾಗುತ್ತಿದ್ದ ಹಾಲು ಇಂದು ಒಂದು ಕೋಟಿ ಲೀಟರ್ ಗೆ ತಲುಪಿದೆ.
ಯಾವ ಕೆಎಂಎಫ್ ಸಂಸ್ಥೆಯನ್ನು ಹಿಂದಿನ ಬಿಜೆಪಿ ಸರ್ಕಾರ ನಷ್ಟದ ಹಾದಿಗೆ ತಳ್ಳಿ ಗುಜರಾತ್‌ನ ಅಮೂಲ್ ಜೊತೆ ವಿನೀಲ ಮಾಡುವ ಕುತಂತ್ರ ನಡೆಸಿತ್ತೋ, ಕನ್ನಡಿಗ ರೈತರು ದಶಕಗಳ ಕಾಲ ಶ್ರಮದಿಂದ ಕಟ್ಟಿದ ಸಂಸ್ಥೆಯನ್ನು ಯಾರದೋ ಮರ್ಜಿಗೆ ಒಳಗಾಗಿ ವಿಲೀನದ ಹೆಸರಲ್ಲಿ ಮುಳುಗಿಸಲು ಹೊರಟಿತ್ತೋ, ಅದೇ ಕೆಎಂಎಫ್ ಇಂದು ಒಂದು ಕೋಟಿ ಲೀಟರ್ ಹಾಲನ್ನು ಸಂಗ್ರಹಿಸಿ, ಇತಿಹಾಸದಲ್ಲೇ ಹೊಸದೊಂದು ದಾಖಲೆ ಬರೆದಿದೆ ಎಂದು ಬಿಜೆಪಿಯನ್ನು ಟೀಕಿಸುವುದರ ಜೊತೆಗೆ ಕೆಎಂಎಫ್‌ನ ಸಾಧನೆಯನ್ನು ಸಿಎಂ ಸಿದ್ದರಾಮಯ್ಯ ಕೊಂಡಾಡಿದ್ದಾರೆ.
ಬೆಂಗಳೂರು: ತಮ್ಮ ವಿರುದ್ಧವೂ ಸ್ಟಿಂಗ್ ಆಪರೇಷನ್ ನಡೆಸಲು ಸಂಚು ರೂಪಿಸಲಾಗಿತ್ತು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.…
ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ…
ಬೆಂಗಳೂರು: ದೇಶಾದ್ಯಂತ ತೀವ್ರ ವಿವಾದ ಸೃಷ್ಟಿಸಿರುವ ಮತದಾರರ ಪಟ್ಟಿ ಪರಿಷ್ಕರಣೆ(ಎಸ್‍ಐಆರ್) ಸಂಬಂಧ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‍ಕುಮಾರ್ ವಜಾ ಮತ್ತು…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಭೀಕರ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ಗೆ ಕಾನೂನು ಸಂಕಷ್ಟಗಳು ಮತ್ತಷ್ಟು ಬಿಗಿಯಾಗುತ್ತಿವೆ.…
ಮುಂಬೈ: ಬಾಲಿವುಡ್ ಚಿತ್ರರಂಗಕ್ಕೆ ಆಘಾತಕಾರಿ ಸುದ್ದಿ. ಹಿರಿಯ ನಟ ನಾನಾ ಪಾಟೇಕರ್ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು. ಗೋವಾದ…
ಮೈಸೂರು ಜಿ ಎಚ್.ಡಿ.ಕೋಟೆ ತಾಲ್ಲೂಕಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಶುಗರ್ ಮತ್ತು ಬಿಪಿಗೆ ಹಾಗೂ ಇತರೆ ಕಾಯಿಲೆಗಳಿಗೆ ಸಂಬಂಧಪಟ್ಟ…