BREAKING NEWS

ರಾಜ್ಯದಲ್ಲಿ ಫ್ಯಾಕ್ಟ್ ಚೆಕ್ ಘಟಕ ರಚನೆಗೆ ಸಿಎಂ ಸಿದ್ದರಾಮಯ್ಯ ಅನುಮೋದನೆ

ಬೆಂಗಳೂರು : ಪ್ರಜಾಪ್ರಭುತ್ವಕ್ಕೆ ಬೆದರಿಕೆ ಹಾಗೂ ಸಮಾಜದ ದೃವೀಕರಣಕ್ಕೆ ಸುಳ್ಳು ಸುದ್ದಿಗಳು ಕಾರಣವಾಗಿದ್ದು, ಇದರ ನಿಯಂತ್ರಣ ಅತ್ಯಗತ್ಯ ಎಂದು ಅಭಿಪ್ರಾಯಪಟ್ಟ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯದಲ್ಲಿ ಫ್ಯಾಕ್ಟ್ ಚೆಕ್ ಘಟಕ ಸ್ಥಾಪನೆ ಸೇರಿದಂತೆ ಅಗತ್ಯ ಇರುವ ಎಲ್ಲ ನಿಯಮ ಮತ್ತು ಕಾನೂನು ರೂಪಿಸುವ ಪ್ರಯತ್ನಕ್ಕೆ ಹಸಿರು ನಿಶಾನೆ ತೋರಿದರು.

ಸೋಮವಾರ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆದ ಸೈಬರ್ ಸುರಕ್ಷತೆಗೆ ಸಂಬಂಧಿಸಿದ ಸಭೆಯಲ್ಲಿ, ಸುಳ್ಳು ಸುದ್ದಿಗಳು ಮತ್ತು ಸುಳ್ಳು ಸುದ್ದಿ ಸೃಷ್ಟಿಸುವ ಸಿಂಡಿಕೇಟ್ ಗಳ ಪತ್ತೆ, ಸುಳ್ಳು ಸುದ್ದಿ ಪ್ರಸಾರಕ್ಕೆ ತಡೆ, ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡುವ ಮೂರು ಹಂತಗಳ ಕ್ರಮಕ್ಕೆ ಅನುಮೋದನೆ ನೀಡಿದರು.

ರಾಜ್ಯದಲ್ಲಿ ಫ್ಯಾಕ್ಟ್ ಚೆಕ್ ಘಟಕ ರಚನೆ: ಫ್ಯಾಕ್ಟ್ ಚೆಕ್ ಘಟಕವು ಮೇಲುಸ್ತುವಾರಿ ಸಮಿತಿ, ಎಸ್‍ಒಪಿಸಿ ಪರಿಶೀಲನೆ, ನೋಡಲ್ ಅಧಿಕಾರಿಗಳ ನೇಮಕ ಸೇರಿದಂತೆ ಸತ್ಯ ತಪಾಸಣೆ ತಂಡ ವಿಶ್ಲೇಷಣ ತಂಡವನ್ನು ಒಳಗೊಳ್ಳಲಿದೆ ಹಾಗೂ ಸಾಮಥ್ರ್ಯ ವರ್ಧನೆ ತಂಡ ರಚನೆ ಮಾಡಿ ವ್ಯವಸ್ಥಿತವಾಗಿ ತಂತ್ರಜ್ಞಾನ ಬಳಕೆ ಮಾಡಬಹುದು ಎಂದು ಸಭೆಯಲ್ಲಿ ವಿವರಿಸಲಾಯಿತು.

ಬೆಂಗಳೂರು ಪೊಲೀಸ್ ಕೂಡ ಸಾಮಾಜಿಕ ಮಾಧ್ಯಮಗಳಲ್ಲಿ ಕ್ರಿಯಾಶೀಲವಾಗಿದ್ದರೂ, ರಾಜ್ಯದಲ್ಲಿ ಫ್ಯಾಕ್ಟ್ ಚೆಕ್ ಘಟಕ ಅಗತ್ಯವಿದೆ. ಎಐ(ಕೃತಕ ಬುದ್ಧಿಮತ್ತೆ) ಬಳಕೆ ಮಾಡಿ ಡೀಪ್ ಫೇಕ್ ಕೂಡ ಉಪಯೋಗ ಮಾಡಲಾಗುತ್ತಿದೆ. ಇದು ಸುಳ್ಳು ಸುದ್ದಿ ಹರಡುವವರಿಗೆ ಅನುಕೂಲ ವಾಗುತ್ತದೆ ಎಂದು ಐಟಿ, ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದರು.

ಫೇಕ್(ಸುಳ್ಳು) ಸುದ್ದಿ ಜಾಲ ಜಾಗತಿಕವಾಗಿ ಬಾಲ್ಯಾವಸ್ಥೆಯಲ್ಲಿದ್ದರೂ ಕಾಲಾಂತರದಲ್ಲಿ ವ್ಯಾಪಕವಾಗಿ ಬಳಕೆಯಾಗುವ ಸಾಧ್ಯತೆಯೂ ಇದೆ. ಸುಳ್ಳು ಸುದ್ದಿ ಬಳಕೆ ಮಾಡುವವರಿಗೆ ಶಿಕ್ಷೆ ಕೂಡ ಆಗಬೇಕು. ಈ ಸಮಿತಿ ಕೂಡಲೆ ರಚಿಸಿ ಸಾಮಥ್ರ್ಯ ಹೆಚ್ಚಿಸುವ ಕೆಲಸ ಆಗಬೇಕು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅಭಿಪ್ರಾಯಪಟ್ಟರು.

ಸುಳ್ಳು ಸುದ್ದಿ ಗುರುತಿಸುವುದು, ಕಾನೂನು ಸುವ್ಯವಸ್ಥೆ ಕಾಪಾಡಲು ಇದು ಅತ್ಯಗತ್ಯ. ಆರಂಭಿಕ ಹಂತದಲ್ಲಿ ಐಟಿ, ಬಿಟಿ ಇಲಾಖೆ ಸಹಕರಿಸುತ್ತದೆ. ಕಾನೂನಿನ ವ್ಯಾಪ್ತಿಯಲ್ಲಿ ತರಲು ಕ್ರಮ ವಹಿಸಬೇಕು ನಂತರ ಘಟಕವು ಗೃಹ ಇಲಾಖೆಯ ವ್ಯಾಪ್ತಿಯಲ್ಲಿಯೆ ಇರುವುದು ಸೂಕ್ತ ಎಂದು ಪ್ರಿಯಾಂಕ್ ಖರ್ಗೆ ಅಭಿಪ್ರಾಯಪಟ್ಟರು.

ಕಂದಾಯ ಸಚಿವ ಕೃಷ್ಣಬೈರೇಗೌಡ ಮಾತನಾಡಿ, ಫ್ಯಾಕ್ಟ್ ಚೆಕ್ ಘಟಕ ಸ್ಥಾಪನೆಯಿಂದ ಸುಳ್ಳುಸುದ್ದಿ ಹರಡುವುದನ್ನು ನಿಯಂತ್ರಿಸಿ ಇದು ಶಿಕ್ಷಾರ್ಹ ಅಪರಾಧ ಎಂದು ಜನರಿಗೆ ಮನವರಿಕೆಯಾಗಬೇಕು ಎಂದರು.

ಸಭೆಯಲ್ಲಿ ಸಿಎಂ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಅಪರ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್ ಗೋಯಲ್, ಪೆÇಲೀಸ್ ಮಹಾನಿರ್ದೇಶಕ ಡಾ.ಅಲೋಕ್ ಮೋಹನ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತ ಹೇಮಂತ್ ನಿಂಬಾಳ್ಕರ್ ಉಪಸ್ಥಿತರಿದ್ದರು.

andolanait

Recent Posts

ʼದಳಪತಿʼ ವಿಜಯ್‌ ಸೆಳೆಯಲು ಬಿಜೆಪಿ ತಂತ್ರ : ಡಿಸಿಎಂ ಸ್ಥಾನದ ಜತೆಗೆ 80 ಸ್ಥಾನದ ಆಫರ್‌!

ಚೆನ್ನೈ : ತಮಿಳುನಾಡು ರಾಜಕಾರಣದಲ್ಲಿ ತಮ್ಮದೇ ಆದ ಕ್ರೇಜ್‌ ಸೃಷ್ಟಿಸಿಕೊಂಡಿರುವ ಟಿವಿಕೆ ಪಕ್ಷದ ಅಧ್ಯಕ್ಷ, ನಟ ʼದಳಪತಿʼ ವಿಜಯ್ ಅವರನ್ನು…

2 hours ago

ತಂಪೆರೆದ ಮಳೆ ; ಕೊಡಗು ಸೇರಿದಂತೆ ರಾಜ್ಯದ ಹಲವೆಡೆ ಮಳೆ

ಮೈಸೂರು : ಜನರು ವಿಪರೀತ ಸೆಕೆಯಿಂದಾಗಿ ತತ್ತರಿಸಿ ಹೋಗಿರುವ ನಡುವೆ ಕೆಲ ಜಿಲ್ಲೆಗಳಲ್ಲಿ ಇಂದು(ಮಾರ್ಚ್.‌15) ಸಂಜೆ ಅಕಾಲಿಕವಾಗಿ ಮಳೆ ಸುರಿದು…

2 hours ago

ಮಂಡ್ಯ | ನಾಲೆ ಅಭಿವೃದ್ಧಿಗೆ 100 ಕೋಟಿ ಅನುದಾನ ; ಶಾಸಕ ರವಿಕುಮಾರ್‌

ಮಂಡ್ಯ : ಮಂಡ್ಯ ವಿಧಾನಸಭಾ ಕ್ಷೇತ್ರ ಅಭಿವೃದ್ಧಿಗೆ ಸಮಗ್ರ ಯೋಜನೆ ರೂಪಿಸಲಾಗಿದ್ದು, ಬಸರಾಳು ಭಾಗದ ಹೇಮಾವತಿ ನಾಲೆ ಅಭಿವೃದ್ಧಿಗೆ 350…

3 hours ago

ಆದಿಚುಂಚನಗಿರಿ ಶ್ರೀಗಳ ನಡೆ ದಾರಿ ತಪ್ಪುತ್ತಿದೆ ಹೇಳಿಕೆ : ಕ್ಷೆಮೆಯಾಚಿಸಿದ ಶಾಸಕ ರಮೇಶ್‌ ಬಂಡಿಸಿದ್ದೇಗೌಡ

ಮಂಡ್ಯ : ನಾನು ಯಾವಾಗ ಮಾತನಾಡಿದರೂ ವಿವಾದ ಆಗುತ್ತೆ. ನನ್ನ ಮಾತಿನಿಂದ ನೋವಾಗಿದ್ದರೆ, ಡಾ.ನಿರ್ಮಲಾನಂದನಾಥ ಸ್ವಾಮೀಜಿ ಅವರ ಕ್ಷಮೆ ಯಾಚಿಸುತ್ತೇನೆ…

3 hours ago

ಎಚ್‌.ಡಿ.ಕೋಟೆ | ಬೈಕುಗಳ ನಡುವೆ ಡಿಕ್ಕಿ : ಓರ್ವ ಸಾವು

ಎಚ್.ಡಿ.ಕೋಟೆ : ಎರಡು ಬೈಕುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸಾವಿಗೀಡಾಗಿರುವ ಘಟನೆ ತಾಲ್ಲೂಕಿನಲ್ಲಿ ನಡೆದಿದೆ. ತಾಲ್ಲೂಕಿನ ಹೆರಿಗೆ…

3 hours ago

ಭೀಕರ ಅಪಘಾತ : ಮೂವರು ಪೊಲೀಸ್ ಅಧಿಕಾರಿಗಳು ಸಾವು ; ಸ್ಥಳಕ್ಕೆ ಗೃಹ ಸಚಿವರ ಭೇಟಿ

ಚಿತ್ರದುರ್ಗ : ಚಳ್ಳಕೆರೆ ಸಮೀಪದ ಹೆಗ್ಗೆರೆ ಗೇಟ್ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಪೊಲೀಸ್ ಅಧಿಕಾರಿಗಳು ಮೃತಪಟ್ಟಿದ್ದಾರೆ. ಇಬ್ಬರು…

3 hours ago