ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ 50:50 ಅನುಪಾತದಲ್ಲಿ ನಡೆದಿರುವ ಅಕ್ರಮದಲ್ಲಿ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿಗೂ ಜಮೀನು ಮಂಜೂರಾಗಿದೆ ಎಂದು ಬಿಜೆಪಿ ಆರೋಪಿಸಿದೆ.
ಬಿಜೆಪಿ ಅವರ ಕಾಲದಲ್ಲಿ ಸಿಎಂ ಪತ್ನಿ ಹೆಸರಲ್ಲಿ ಒಂದು ಎಕರೆ ಹದಿನೈದು ಗುಂಟೆ ಪಡೆದಿದ್ದಾರೆ ಎಂದಬಿತ್ಯಾದಿ ಆರೋಪಗಳಿಗೆಲ್ಲಾ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.
ಮುಡಾದಲ್ಲಿ ನನ್ನ ಬಾಮೈದ ಜಮೀನು ಖರೀದಿಸಿ ಅರಿಶಿನ-ಕುಂಕುಮ ರೀತಿಯಲ್ಲಿ ನನ್ನ ಮಡದಿಗೆ ಉಡುಗೊರೆ ರೂಪದಲ್ಲಿ ನೀಡಿದ್ದಾರೆ ಎಂದು ಎಲ್ಲಾ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ.
ಈ ಸಂಬಂಧ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾನೂನಿನ ಪ್ರಕಾರ 50:50 ಅನುಪಾತದಲ್ಲಿ ಜಮೀನು ಕೊಡುವುದಾಗಿ ಮುಡಾ ಹೇಳಿದೆ. ಆದರೆ ಮುಡಾದವರು ಜಮೀನನ್ನು ಸೈಟುಗಳನ್ನಾಗಿ ಮಾಡಿ ಹಂಚಿಬಿಟ್ಟರು. ಬಳಿಕ ಜಮೀನಿಲ್ಲದೇ ಹಾಗೇ ಕೊಡುವುದಾಗಿ ಹೇಳಿದರು. ಅದಕ್ಕೆ ಕಾನೂನಿನ ಪ್ರಕಾರ ಬೇರೆ ಕಡೆ ಜಮೀನು ಕೊಟ್ಟಿದ್ದಾರೆ. ಇದು ತಪ್ಪಾ? ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದರು.





