Mysore
22
overcast clouds
Light
Dark

ʼಪಲ್ಲಕ್ಕಿʼ ಬಸ್​ಗಳಿಗೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ವಿಧಾನಸೌಧದ ಪೂರ್ವದ್ವಾರ ಗ್ರ್ಯಾಂಡ್ ಸ್ಟೆಪ್ಸ್ ಮುಂಭಾಗದಲ್ಲಿ ಬೆಳಗ್ಗೆ 10ಗಂಟೆಗೆ ಸಂಸ್ಥೆ ವತಿಯಿಂದ ಆಯೋಜಿಸಿರುವ ಕಾರ್ಯಕ್ರಮದಲ್ಲಿ 100 ನೂತನ ಕರ್ನಾಟಕ ಸಾರಿಗೆ ಹಾಗೂ 40 ಹವಾ ನಿಯಂತ್ರಣ ರಹಿತ ಸ್ಲೀಪರ್ ಐಷಾರಾಮಿ ‘ಪಲ್ಲಕ್ಕಿ’ ಬಸ್ಸುಗಳಿಗೆ ಮುಖ್ಯಮಂತ್ರಿಗಳು ಚಾಲನೆ ನೀಡಿದರು.

ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗ ರೆಡ್ಡಿ, ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಮುನಿಯಪ್ಪ, ಅರಣ್ಯ ಸಚಿವ ಈಶ್ವರ್ ಖಂಡ್ರೆ, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಮುಖ್ಯಮಂತ್ರಿಗಳ ರಾಜಕೀಯ ಸಲಹೆಗಾರ ಗೋವಿಂದರಾಜು, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಪೊನ್ನಣ್ಣ, ವಿಧಾನ ಪರಿಷತ್ ಸದಸ್ಯ ನಾಗರಾಜ್ ಯಾದವ್, ಸೇರಿದಂತೆ ಇತರೆ ಗಣ್ಯರು ಉಪಸ್ಥಿತರಿದ್ದರು.

ಮಂಗಳೂರು, ಉಡುಪಿ, ಪುತ್ತೂರು, ಶಿವಮೊಗ್ಗ, ಕಾರವಾರ, ಬೆಳಗಾವಿ, ಹುಬ್ಬಳ್ಳಿ, ಬೀದರ್‌, ಕಲಬುರಗಿ, ರಾಯಚೂರು, ಕೊಪ್ಪಳ, ಯಾದಗಿರಿ ಸಹಿತ ರಾಜ್ಯದ ಬೇರೆ ಬೇರೆ ಊರುಗಳಿಗೆ ಸಂಚರಿಸಲಿವೆ. ಜೊತೆಗೆ ಹೊರರಾಜ್ಯಗಳ ಪಾಂಡಿಚೇರಿ, ಚೆನ್ನೈ, ಕೊಯಮತ್ತೂರು, ಮಂತ್ರಾಲಯ, ಕುಂಭಕೋಣಕ್ಕೆ ಪ್ರಯಾಣಿಸುವವರಿಗೂ ‘ಪಲ್ಲಕ್ಕಿ’ ಬಸ್‌ ಸೌಲಭ್ಯ ಸಿಗಲಿದೆ.

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ