ಬೆಂಗಳೂರು: ಎನ್‌ಸಿಪಿ ಮುಖ್ಯಸ್ಥ ಮತ್ತು ರಾಜ್ಯಸಭಾ ಸದಸ್ಯ ಶರದ್ ಪವಾರ್ ನೇತೃತ್ವದಲ್ಲಿ ಧಂಗರ್ ಸಮುದಾಯವು ಭಾನುವಾರ ಪುಣೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸನ್ಮಾನಿಸಲಿದೆ ಎಂದು ಸಿಎಂ ಕಚೇರಿ ಅಧಿಕೃತ ಪ್ರಕಟಣೆ ತಿಳಿಸಿದೆ. ದೊರೆ ಅಹಲ್ಯಾದೇವಿ ಜನ್ಮದಿನದ ಸಂದರ್ಭದಲ್ಲಿ ಈ ಸನ್ಮಾನ ನಡೆಯಲಿದೆ.
ಪವಾರ್ ಅವರು ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು ಆಹ್ವಾನ ನೀಡಿದ್ದು, ಕರ್ನಾಟಕದಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಿದ್ದಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ. ಇತ್ತೀಚಿನ ಕರ್ನಾಟಕ ವಿಧಾನಸಭೆ ಚುನಾವಣೆಯ ಫಲಿತಾಂಶಗಳು ಜಾತ್ಯತೀತ ಶಕ್ತಿಗಳ ಬಲವನ್ನು ಪ್ರದರ್ಶಿಸಿವೆ ಮತ್ತು ರಾಷ್ಟ್ರದ ರಾಜಕೀಯ ಚಲನವಲನದಲ್ಲಿ ಬದಲಾವಣೆಗೆ ದಾರಿ ಮಾಡಿಕೊಟ್ಟಿವೆ ಎಂದು ಅವರು ಹೇಳಿದ್ದಾರೆ.
“ಚುನಾವಣೆ ಪ್ರತಿಧ್ವನಿಯು ಮಹಾರಾಷ್ಟ್ರಕ್ಕೂ ವ್ಯಾಪಿಸಿದ್ದು, ಅಲ್ಲಿನ ಜನರು ತಮ್ಮನ್ನು ಸನ್ಮಾನಿಸುವ ಉತ್ಸಾಹದಲ್ಲಿದ್ದಾರೆ. ಪುಣೆ ಜಿಲ್ಲೆಯ ಮಾಜಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಮತ್ತು ಅಹಲ್ಯಾದೇವಿ ವಿಕಾಸ ಪ್ರತಿಷ್ಠಾನದ ಅಧ್ಯಕ್ಷ ವಿಶ್ವಾಸ್ ಡಿಯೋಕಾಟೆ ನೇತೃತ್ವದ ನಿಯೋಗ ಅಹಲ್ಯಾದೇವಿ ಜನ್ಮ ದಿನಾಚರಣೆಯ ಆಹ್ವಾನ ನೀಡಲಿದೆ ಎಂದು ಅವರು ತಿಳಿಸಿದ್ದಾರೆ.
ಎಚ್.ಡಿ.ಕೋಟೆ : ತಾಲೂಕಿನ ಚೌಡಹಳ್ಳಿ ಗ್ರಾಮದ ಪಕ್ಕದಲ್ಲೇ ಇರುವ ಜಮೀನೊಂದರಲ್ಲಿ ಹಸುವಿನ ಮೇಲೆ ದಾಳಿ ನಡೆಸಿರುವ ಹುಲಿ ಹಸುವನ್ನು ಕೊಂದು…
ಮೈಸೂರು : ಮೈಸೂರು ಮೂಲದ ಗೃಹಿಣಿಯೊಬ್ಬಳು ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಉತ್ತರ ಕರ್ನಾಟಕ ಮೂಲದ ಪೊಲೀಸ್ ಕಾನ್ಸ್ ಟೇಬಲ್ ನೊಂದಿಗೆ…
ಮೈಸೂರು : ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ ಹನುಮ ಜಯಂತ್ಯೋತ್ಸವ ಸಮಿತಿ ವತಿಯಿಂದ ಶನಿವಾರ ನಡೆದ ಏಳನೇ ವರ್ಷದ ಹನುಮೋತ್ಸವ ಮೆರವಣಿಗೆಯು…
ಮನೆಯಲ್ಲಿ ರಾತ್ರಿಯಿಡೀ ಕೂಡಿಹಾಕಿ ಹಲ್ಲೆ ನಡೆಸಿದ ಮೂವರು ಆರೋಪಿಗಳು; ಹನಿಟ್ರ್ಯಾಪ್ ಶಂಕೆ, ತನಿಖೆ ಚುರುಕು ಮಡಿಕೇರಿ : ಸಾಮಾಜಿಕ ಜಾಲತಾಣದಲ್ಲಿ…
ಮೈಸೂರು : ನಗರದಲ್ಲಿ ಯುನಿಟಿ ಮಾಲ್ ನಿರ್ಮಿಸಲು ನಮ್ಮ ವಿರೋಧ ಇಲ್ಲ. ಆದರೆ, ಸರ್ಕಾರ ಗೊಂದಲವಿಲ್ಲದ ಸ್ಥಳ ನೀಡದೆ ದಿಕ್ಕು…
ಮೈಸೂರು : ಚುಮು ಚುಮು ಚಳಿಯ ನಡುವೆ ನಗರದ ನಂಜರಾಜ ಬಹದ್ದೂರ್ ಛತ್ರದಲ್ಲಿ ಗ್ರಾಹಕರ ಆಕರ್ಷಿಸುವ ಹಾಗೂ ಗ್ರಾಮೀಣ ಸೊಗಡಿನ…