ಬೆಂಗಳೂರು : ಇತ್ತೀಚೆಗೆ ಚೀನಾದಲ್ಲಿ ನಡೆದ 19ನೇ ಏಷ್ಯನ್ ಗೇಮ್ಸ್‌ನಲ್ಲಿ ಪದಕ ಪಡೆದ ರಾಜ್ಯದ ಕ್ರೀಡಾಪಟುಗಳು ಮತ್ತು ತರಬೇತುದಾರರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಸನ್ಮಾನಿಸಿ, ನಗದು ಪುರಸ್ಕಾರ ನೀಡಿ ಗೌರವಿಸಿದರು.
ಬಳಿಕ ಮಾತನಾಡಿದ ಅವರು, ʻʻಪೊಲೀಸ್ ಮತ್ತು ಅರಣ್ಯ ಇಲಾಖೆಗಳಲ್ಲಿ ಕ್ರೀಡಾಪಟುಗಳಿಗೆ ನೇಮಕಾತಿಯಲ್ಲಿ ಶೇ.3 ರಷ್ಟು ಮೀಸಲಾತಿ ನೀಡಲಾಗುತ್ತಿದ್ದು, ಇತರ ಇಲಾಖೆಗಳಲ್ಲಿಯೂ ಶೇ.2 ರಷ್ಟು ಮೀಸಲಾತಿ ನೀಡುವ ಕುರಿತು ಸಕಾರಾತ್ಮಕವಾಗಿ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದುʻʻ ಎಂದು ಭರವಸೆ ನೀಡಿದರು.
ʻʻಈ ಬಾರಿ ಚೀನಾದಲ್ಲಿ ನಡೆದ ಏಷ್ಯನ್ ಗೇಮ್ಸ್‌ನಲ್ಲಿ ಭಾರತೀಯ ಕ್ರೀಡಾಪಟುಗಳು ಅತ್ಯಧಿಕ ಪದಕಗಳನ್ನು ಗೆದ್ದಿದ್ದಾರೆ. ಕಳೆದ ಬಾರಿ 70, ಈ ಬಾರಿ 107 ಪದಕ ಗೆದ್ದಿದ್ದಾರೆ. ದೇಶದ ಕ್ರೀಡಾಪಟುಗಳ ಸಾಧನೆ ದೇಶ ಮತ್ತು ರಾಜ್ಯದ ಗೌರವ ಹೆಚ್ಚಿಸಿದೆ. ಸಮಸ್ತ ಕನ್ನಡಿಗರಿಗೆ ಇದು ಹೆಮ್ಮೆಯ ವಿಷಯ. ಇಡೀ ಜಗತ್ತಿನಲ್ಲಿ ಜನಸಂಖ್ಯೆಯಲ್ಲಿ ಭಾರತ ಮೊದಲ ಸ್ಥಾನದಲ್ಲಿದೆ. ಏಷ್ಯನ್ ಗೇಮ್ಸ್‌ನಲ್ಲಿಯೂ ಮೊದಲ-ಎರಡನೇ ಸ್ಥಾನ ಬಂದರೆ ಇನ್ನಷ್ಟು ಗೌರವ ಹೆಚ್ಚಲಿದೆʻʻ ಎಂದು ನುಡಿದರು.
ʻʻರಾಜ್ಯ ಸರ್ಕಾರ ಕ್ರೀಡೆಗೆ ಉತ್ತೇಜನ ನೀಡಲು ಬದ್ಧವಾಗಿದ್ದು, ಹಿಂದೆ ನಾನು ಮುಖ್ಯಮಂತ್ರಿಯಾಗಿದ್ದಾಗ ಏಷ್ಯನ್ ಗೇಮ್ಸ್, ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಬಹುಮಾನ ಮೊತ್ತ ನೀಡುವ ಕುರಿತು ಘೋಷಿಸಿದ್ದೆ. ಅತಿ ಹೆಚ್ಚು ಮೊತ್ತದ ಬಹುಮಾನ ಘೋಷಿಸಿದ ಮೊದಲ ರಾಜ್ಯ ನಮ್ಮದುʻʻ ಎಂದು ತಿಳಿಸಿದರು.
ʻʻಈಗ ನಮ್ಮ ರಾಜ್ಯದಿಂದ 8 ಜನ ಪದಕ ಪಡೆದಿದ್ದಾರೆ, ಸರ್ಕಾರ ಮತ್ತು ಏಳು ಕೋಟಿ ಕನ್ನಡಿಗರ ವತಿಯಿಂದ ಅಭಿನಂದನೆಗಳು. ಅಂತರರಾಷ್ಟ್ರೀಯ ಮಟ್ಟದಲ್ಲಿ ಪದಕ ಗೆಲ್ಲುವುದು ಸಣ್ಣ ವಿಷಯವಲ್ಲ. ಇದಕ್ಕೆ ಅಪಾರ ಪರಿಶ್ರಮದ ಅಗತ್ಯವಿದೆ. ಇದು ಅದ್ಭುತ ಸಾಧನೆ. ಭಾರತೀಯ ಕ್ರೀಡಾಪಟುಗಳು ಒಲಿಂಪಿಕ್ಸ್‌ನಲ್ಲಿಯೂ ಹೆಚ್ಚೆಚ್ಚು ಪದಕ ಗೆಲ್ಲುವಂತಾಗಲಿ ಎಂದು ಶುಭ ಹಾರೈಸುತ್ತೇನೆʻʻ ಎಂದು ಅವರು ಹಾರೈಸಿದರು.
ಈ ಸಂದರ್ಭದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ನಾಗೇಂದ್ರ, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಕೆ.ಗೋವಿಂದರಾಜು ಮತ್ತು ನಸೀರ್ ಅಹ್ಮದ್ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.
ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಬಗ್ಗೆ ಬಿಜೆಪಿ ಎಂಎಲ್‌ಸಿ ಸಿ.ಟಿ. ರವಿ…
ಬೆಳಗಾವಿ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಕ್ಷೇಪಾರ್ಹ ಹೇಳಿಕೆ ಖಂಡಿಸಿ ಕಾಂಗ್ರೆಸ್…
ಮೈಸೂರು: ಸ್ನೇಹಮಯಿ ಕೃಷ್ಣಗೆ ಫಂಡಿಂಗ್ ಮಾಡುತ್ತಿರುವವರು ಯಾರು ಅನ್ನೋದು ಗೊತ್ತಿದೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಕಿಡಿಕಾರಿದ್ದಾರೆ. ಮುಡಾ ಪ್ರಕರಣಕ್ಕೆ…
ನವದೆಹಲಿ: ಸಂಸತ್ ಭವನದ ಸಂಕೀರ್ಣದಲ್ಲಿ ಬಿಜೆಪಿ ಸಂಸದರು ನನ್ನನ್ನು ತಳ್ಳಿದ್ದಾರೆ ಎಂದು ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ…
ಬೆಳಗಾವಿ: ಕೇಂದ್ರ ಗ್ರಹ ಸಚಿವ ಅಮಿತ್ ಶಾ ಅವರು ಡಾ.ಬಿ.ಆರ್. ಅಂಬೇಡ್ಕರ್ ಕುರಿತು ನೀಡಿರುವ ಹೇಳಿಕೆ ವಿರುದ್ಧ ದೇಶಾದ್ಯಂತ ವ್ಯಾಪಕ…
ಬೆಳಗಾವಿ: ಸಂಸತ್ತಿನಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ನೀಡಿರುವ ಹೇಳಿಕೆಗೆ ಸಂಬಂಧಿಸಿದಂತೆ ಕರ್ನಾಟಕ…