BREAKING NEWS

ಏಷ್ಯನ್ ಗೇಮ್ಸ್​ನಲ್ಲಿ ಪದಕ ಗೆದ್ದ ರಾಜ್ಯದ ಕ್ರೀಡಾಪಟುಗಳಿಗೆ ಸಿಎಂ ಸಿದ್ದರಾಮಯ್ಯ ಸನ್ಮಾನ

ಬೆಂಗಳೂರು : ಇತ್ತೀಚೆಗೆ ಚೀನಾದಲ್ಲಿ ನಡೆದ 19ನೇ ಏಷ್ಯನ್‌ ಗೇಮ್ಸ್‌ನಲ್ಲಿ ಪದಕ ಪಡೆದ ರಾಜ್ಯದ ಕ್ರೀಡಾಪಟುಗಳು ಮತ್ತು ತರಬೇತುದಾರರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಸನ್ಮಾನಿಸಿ, ನಗದು ಪುರಸ್ಕಾರ ನೀಡಿ ಗೌರವಿಸಿದರು.

ಬಳಿಕ ಮಾತನಾಡಿದ ಅವರು, ʻʻಪೊಲೀಸ್‌ ಮತ್ತು ಅರಣ್ಯ ಇಲಾಖೆಗಳಲ್ಲಿ ಕ್ರೀಡಾಪಟುಗಳಿಗೆ ನೇಮಕಾತಿಯಲ್ಲಿ ಶೇ.3 ರಷ್ಟು ಮೀಸಲಾತಿ ನೀಡಲಾಗುತ್ತಿದ್ದು, ಇತರ ಇಲಾಖೆಗಳಲ್ಲಿಯೂ ಶೇ.2 ರಷ್ಟು ಮೀಸಲಾತಿ ನೀಡುವ ಕುರಿತು ಸಕಾರಾತ್ಮಕವಾಗಿ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದುʻʻ ಎಂದು ಭರವಸೆ ನೀಡಿದರು.

ʻʻಈ ಬಾರಿ ಚೀನಾದಲ್ಲಿ ನಡೆದ ಏಷ್ಯನ್‌ ಗೇಮ್ಸ್‌ನಲ್ಲಿ ಭಾರತೀಯ ಕ್ರೀಡಾಪಟುಗಳು ಅತ್ಯಧಿಕ ಪದಕಗಳನ್ನು ಗೆದ್ದಿದ್ದಾರೆ. ಕಳೆದ ಬಾರಿ 70, ಈ ಬಾರಿ 107 ಪದಕ ಗೆದ್ದಿದ್ದಾರೆ. ದೇಶದ ಕ್ರೀಡಾಪಟುಗಳ ಸಾಧನೆ ದೇಶ ಮತ್ತು ರಾಜ್ಯದ ಗೌರವ ಹೆಚ್ಚಿಸಿದೆ. ಸಮಸ್ತ ಕನ್ನಡಿಗರಿಗೆ ಇದು ಹೆಮ್ಮೆಯ ವಿಷಯ. ಇಡೀ ಜಗತ್ತಿನಲ್ಲಿ ಜನಸಂಖ್ಯೆಯಲ್ಲಿ ಭಾರತ ಮೊದಲ ಸ್ಥಾನದಲ್ಲಿದೆ. ಏಷ್ಯನ್‌ ಗೇಮ್ಸ್‌ನಲ್ಲಿಯೂ ಮೊದಲ-ಎರಡನೇ ಸ್ಥಾನ ಬಂದರೆ ಇನ್ನಷ್ಟು ಗೌರವ ಹೆಚ್ಚಲಿದೆʻʻ ಎಂದು ನುಡಿದರು.

ʻʻರಾಜ್ಯ ಸರ್ಕಾರ ಕ್ರೀಡೆಗೆ ಉತ್ತೇಜನ ನೀಡಲು ಬದ್ಧವಾಗಿದ್ದು, ಹಿಂದೆ ನಾನು ಮುಖ್ಯಮಂತ್ರಿಯಾಗಿದ್ದಾಗ ಏಷ್ಯನ್‌ ಗೇಮ್ಸ್‌, ಒಲಿಂಪಿಕ್ಸ್‌ ಕ್ರೀಡಾಕೂಟದಲ್ಲಿ ಬಹುಮಾನ ಮೊತ್ತ ನೀಡುವ ಕುರಿತು ಘೋಷಿಸಿದ್ದೆ. ಅತಿ ಹೆಚ್ಚು ಮೊತ್ತದ ಬಹುಮಾನ ಘೋಷಿಸಿದ ಮೊದಲ ರಾಜ್ಯ ನಮ್ಮದುʻʻ ಎಂದು ತಿಳಿಸಿದರು.

ʻʻಈಗ ನಮ್ಮ ರಾಜ್ಯದಿಂದ 8 ಜನ ಪದಕ ಪಡೆದಿದ್ದಾರೆ, ಸರ್ಕಾರ ಮತ್ತು ಏಳು ಕೋಟಿ ಕನ್ನಡಿಗರ ವತಿಯಿಂದ ಅಭಿನಂದನೆಗಳು. ಅಂತರರಾಷ್ಟ್ರೀಯ ಮಟ್ಟದಲ್ಲಿ ಪದಕ ಗೆಲ್ಲುವುದು ಸಣ್ಣ ವಿಷಯವಲ್ಲ. ಇದಕ್ಕೆ ಅಪಾರ ಪರಿಶ್ರಮದ ಅಗತ್ಯವಿದೆ. ಇದು ಅದ್ಭುತ ಸಾಧನೆ. ಭಾರತೀಯ ಕ್ರೀಡಾಪಟುಗಳು ಒಲಿಂಪಿಕ್ಸ್‌ನಲ್ಲಿಯೂ ಹೆಚ್ಚೆಚ್ಚು ಪದಕ ಗೆಲ್ಲುವಂತಾಗಲಿ ಎಂದು ಶುಭ ಹಾರೈಸುತ್ತೇನೆʻʻ ಎಂದು ಅವರು ಹಾರೈಸಿದರು.

ಈ ಸಂದರ್ಭದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ನಾಗೇಂದ್ರ, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಕೆ.ಗೋವಿಂದರಾಜು ಮತ್ತು ನಸೀರ್‌ ಅಹ್ಮದ್‌ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.

andolanait

Recent Posts

ಓದುಗರ ಪತ್ರ: ವಿದ್ಯುತ್ ಕಡಿತ ಮುಂಚಿತವಾಗಿ ಪ್ರಕಟಿಸಿ

ಮಳೆ ಸರಿಯಾಗಿ ಆಗದೆ ಜಲವಿದ್ಯುತ್ ಉತ್ಪಾದನೆ ಕಡಿಮೆಯಾಗಿ ವಿದ್ಯುತ್ ಅಭಾವ ಎದುರಾಗಿರುವುದು ನಿಜ. ಆದರೆ ಯಾವುದೇ ಮುನ್ಸೂಚನೆ ಇಲ್ಲದೆ ಇದ್ದಕ್ಕಿದ್ದಂತೆ…

5 hours ago

ಓದುಗರ ಪತ್ರ: ಖುಷಿ ಕೊಡುವ ಮಾತುಗಳಷ್ಟೇ ಸ್ಪಂದನೆಯೂ ಮುಖ್ಯ

ಮೈಸೂರು ಮಹಾ ನಗರಪಾಲಿಕೆ ವತಿಯಿಂದ ಕಲಾಮಂದಿರದಲ್ಲಿ ಆಯೋಜಿಸಿದ್ದ ಪೌರ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ, ಮೈಸೂರು ಸ್ವಚ್ಛ ನಗರಿಯಾಗಲು ಪೌರ ಕಾರ್ಮಿಕರ…

5 hours ago

ಓದುಗರ ಪತ್ರ: ಬ್ಯಾಂಕ್ ಒಕ್ಕೂಟಗಳಿಗೆ ಜವಾಬ್ದಾರಿ ಇರಲಿ

ಸೆಪ್ಟೆಂಬರ್ ಕೊನೆಯಲ್ಲಿ ಆರ್ಥಿಕ ವರ್ಷದ ಅರ್ಧವಾರ್ಷಿಕ ಲೆಕ್ಕಪತ್ರ ಮುಕ್ತಾಯಗೊಳಿಸುವ ಅತ್ಯಂತ ನಿರ್ಣಾಯಕ ಸಮಯದಲ್ಲಿ ಬ್ಯಾಂಕ್ ಒಕ್ಕೂಟಗಳು (ಯುಎಫ್ಬಿ) ಮೂರು ದಿನಗಳ…

5 hours ago

ಪ್ರಶಸ್ತಿ ಪ್ರದಾನದಿಂದ ಚಿತ್ರೋತ್ಸವವರೆಗೆ ಹೊಸ ಪಯಣ

ವೈಡ್‌ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ದೆಹಲಿ ಸಹಜ ವಿಳಾಸವಾಗಿತ್ತು. ದೇಶದ…

5 hours ago

ಜಂಬೂಸವಾರಿಯಲ್ಲಿ ಸ್ತಬ್ಧ ಚಿತ್ರಗಳ ‘ತ್ರಿಸಂಗಮ’

ಕೆ.ಬಿ.ರಮೇಶನಾಯಕ ಕರ್ನಾಟಕ ರಾಜ್ಯದ ಗತವೈಭವ, ದೇಶದ ಅಖಂಡತೆ ಬಿಂಬಿಸುವ ಮಾದರಿಗಳ ಸವಾರಿ ೩೧ ಜಿಲ್ಲೆಗಳ ಬದಲಿಗೆ ಆಯ್ದ ೧೫ ಜಿಲ್ಲೆಗಳ…

5 hours ago