Mysore
26
few clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

ನೈತಿಕ ಪೊಲೀಸ್ ಗಿರಿ ವಿರುದ್ಧ ಕಠಿಣ ಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಸೂಚನೆ

ಬೆಂಗಳೂರು : ನೈತಿಕ ಪೊಲೀಸ್ ಗಿರಿ ಮಾಡುವವರ‌ ವಿರುದ್ಧ ಕ್ರಮ ಕೈಗೊಳ್ಳಬೇಕು. ಇಲ್ಲವಾದರೆ ಪ್ರಕರಣಕ್ಕೆ ಆಯಾ ವಿಭಾಗದ ಡಿಸಿಪಿ ಹಾಗೂ ಎಸ್​ಪಿ ಅವರನ್ನೇ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪೊಲೀಸರಿಗೆ ಎಚ್ಚರಿಕೆ ನೀಡಿದ್ದಾರೆ. ಇಂದು ನಡೆದ ಹಿರಿಯ ಪೊಲೀಸ್ ಅಧಿಕಾರಿಗಳ ಸಭೆಯಲ್ಲಿ ಈ ಸೂಚನೆ ನೀಡಲಾಗಿದೆ.
ನಾಲ್ಕು ವರ್ಷ ಬಿಜೆಪಿ ಅಧಿಕಾರದಲ್ಲಿದ್ದಾಗ ಏನು ಮಾಡಿದ್ದೀರಿ ಅಂತಾ ಗೊತ್ತಿದೆ. ‌

ಆ ತಪ್ಪು ಮರುಕಳಿಸಬಾರದು ಎಂದು ಸೂಚಿಸಿದ ಸಿಎಂ ಸಿದ್ದರಾಮಯ್ಯ, ರೌಡಿಸಂ ಸೇರಿ ಕಾನೂನು ಬಾಹಿರ ಚಟುವಟಿಕೆ ನಿಯಂತ್ರಣ ಅಗಬೇಕು. ಇಲ್ಲಿಗಲ್ ಕ್ಲಬ್ ನಡೆಸಲು ಅವಕಾಶ ನೀಡಬಾರದು. ನೈತಿಕ ಪೊಲೀಸ್ ಗಿರಿ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ ಆಯಾ ವಿಭಾಗದ ಡಿಸಿಪಿ ಹಾಗೂ ಎಸ್​ಪಿ ಅವರನ್ನೇ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದರು.
ಯಾರಿಗೂ ತಾರತಮ್ಯ ಮಾಡದೆ ಕಾನೂನು ಪ್ರಕಾರ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಿ. ಯಾವುದೇ ಕಾರಣಕ್ಕೂ ಕಾನೂನು ಸುವ್ಯವಸ್ಥೆ ಹದಗೆಡಬಾರದು. ಚುನಾವಣೆಯಲ್ಲಿ ಯಾವ ರೀತಿ ಕೆಲಸ ಮಾಡಿದ್ದೀರಾ ಅಂತಾ ಗೊತ್ತಿದೆ. ಮುಂದೆ ಯಾರಿಗೂ ತಾರತಮ್ಯ ಮಾಡಬೇಡಿ. ಮುಂದೆ ಜಿಲ್ಲಾ ಎಸ್​​ಪಿಗಳ ಜೊತೆ ಸಭೆ ಮಾಡುತ್ತೇವೆ ಎಂದರು.

ಅಕ್ರಮ ನೈಟ್ ಕ್ಲಬ್​​ಗಳ ಮೇಲೂ ಪೊಲೀಸರು ನಿಗಾ ಇಡಬೇಕು. ಡ್ರಗ್ಸ್​​, ಅಕ್ರಮ ಚಟುವಟಿಕೆ ವಿರುದ್ಧ ಮುಲಾಜಿಲ್ಲದೆ ಕ್ರಮ ಕೈಗೊಳ್ಳಿ. ಸಾಮಾಜಿಕ ಜಾಲತಾಣಗಳ ಮೇಲೆ ಹೆಚ್ಚು ನಿಗಾ ಇಡಬೇಕು. ಸಾಮಾಜಿಕ ಜಾಲತಾಣದಲ್ಲಿ ತೇಜೋವಧೆ ಮಾಡಿದರೆ ಸುಮೋಟೋ ಕೇಸ್ ದಾಖಲಿಸಿ ಕ್ರಮ ಪ್ರಕರಣ ಹಾಕಿರುವ ಬಗ್ಗೆ ಹಾಗೂ ಬಿಜೆಪಿ ವಿರುದ್ಧ ಪ್ರಕರಣ ದಾಖಲಿಸದೇ ಇರುವ ವಿಚಾರವೂ ಸಭೆಯಲ್ಲಿ ಚರ್ಚೆ‌ ನಡೆಯಿತು.

ಸಭೆಯಲ್ಲಿ ಡಿಜಿ ಐಜಿಪಿ ಅಲೋಕ್ ಮೋಹನ್, ಬೆಂಗಳೂರು ನಗರ ಪೊಲೀಸ್ ಆಯುಕ್ತ​​ ಪ್ರತಾಪ್ ರೆಡ್ಡಿ, ಸಚಿವರಾದ ಮುನಿಯಪ್ಪ, ಜಮೀರ್ ಅಹಮದ್ ಖಾನ್, ಎಂ.ಬಿ.ಪಾಟೀಲ್, ಕೆ.ಜೆ.ಜಾರ್ಜ್​​, ಸಿಎಂ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್​ ಉಪಸ್ಥಿತರಿದ್ದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ