ಬೆಂಗಳೂರು : ನೈತಿಕ ಪೊಲೀಸ್ ಗಿರಿ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಇಲ್ಲವಾದರೆ ಪ್ರಕರಣಕ್ಕೆ ಆಯಾ ವಿಭಾಗದ ಡಿಸಿಪಿ ಹಾಗೂ ಎಸ್‌ಪಿ ಅವರನ್ನೇ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪೊಲೀಸರಿಗೆ ಎಚ್ಚರಿಕೆ ನೀಡಿದ್ದಾರೆ. ಇಂದು ನಡೆದ ಹಿರಿಯ ಪೊಲೀಸ್ ಅಧಿಕಾರಿಗಳ ಸಭೆಯಲ್ಲಿ ಈ ಸೂಚನೆ ನೀಡಲಾಗಿದೆ.
ನಾಲ್ಕು ವರ್ಷ ಬಿಜೆಪಿ ಅಧಿಕಾರದಲ್ಲಿದ್ದಾಗ ಏನು ಮಾಡಿದ್ದೀರಿ ಅಂತಾ ಗೊತ್ತಿದೆ.
ಆ ತಪ್ಪು ಮರುಕಳಿಸಬಾರದು ಎಂದು ಸೂಚಿಸಿದ ಸಿಎಂ ಸಿದ್ದರಾಮಯ್ಯ, ರೌಡಿಸಂ ಸೇರಿ ಕಾನೂನು ಬಾಹಿರ ಚಟುವಟಿಕೆ ನಿಯಂತ್ರಣ ಅಗಬೇಕು. ಇಲ್ಲಿಗಲ್ ಕ್ಲಬ್ ನಡೆಸಲು ಅವಕಾಶ ನೀಡಬಾರದು. ನೈತಿಕ ಪೊಲೀಸ್ ಗಿರಿ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ ಆಯಾ ವಿಭಾಗದ ಡಿಸಿಪಿ ಹಾಗೂ ಎಸ್‌ಪಿ ಅವರನ್ನೇ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದರು.
ಯಾರಿಗೂ ತಾರತಮ್ಯ ಮಾಡದೆ ಕಾನೂನು ಪ್ರಕಾರ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಿ. ಯಾವುದೇ ಕಾರಣಕ್ಕೂ ಕಾನೂನು ಸುವ್ಯವಸ್ಥೆ ಹದಗೆಡಬಾರದು. ಚುನಾವಣೆಯಲ್ಲಿ ಯಾವ ರೀತಿ ಕೆಲಸ ಮಾಡಿದ್ದೀರಾ ಅಂತಾ ಗೊತ್ತಿದೆ. ಮುಂದೆ ಯಾರಿಗೂ ತಾರತಮ್ಯ ಮಾಡಬೇಡಿ. ಮುಂದೆ ಜಿಲ್ಲಾ ಎಸ್ಪಿಗಳ ಜೊತೆ ಸಭೆ ಮಾಡುತ್ತೇವೆ ಎಂದರು.
ಅಕ್ರಮ ನೈಟ್ ಕ್ಲಬ್ಗಳ ಮೇಲೂ ಪೊಲೀಸರು ನಿಗಾ ಇಡಬೇಕು. ಡ್ರಗ್ಸ್, ಅಕ್ರಮ ಚಟುವಟಿಕೆ ವಿರುದ್ಧ ಮುಲಾಜಿಲ್ಲದೆ ಕ್ರಮ ಕೈಗೊಳ್ಳಿ. ಸಾಮಾಜಿಕ ಜಾಲತಾಣಗಳ ಮೇಲೆ ಹೆಚ್ಚು ನಿಗಾ ಇಡಬೇಕು. ಸಾಮಾಜಿಕ ಜಾಲತಾಣದಲ್ಲಿ ತೇಜೋವಧೆ ಮಾಡಿದರೆ ಸುಮೋಟೋ ಕೇಸ್ ದಾಖಲಿಸಿ ಕ್ರಮ ಪ್ರಕರಣ ಹಾಕಿರುವ ಬಗ್ಗೆ ಹಾಗೂ ಬಿಜೆಪಿ ವಿರುದ್ಧ ಪ್ರಕರಣ ದಾಖಲಿಸದೇ ಇರುವ ವಿಚಾರವೂ ಸಭೆಯಲ್ಲಿ ಚರ್ಚೆ ನಡೆಯಿತು.
ಸಭೆಯಲ್ಲಿ ಡಿಜಿ ಐಜಿಪಿ ಅಲೋಕ್ ಮೋಹನ್, ಬೆಂಗಳೂರು ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ, ಸಚಿವರಾದ ಮುನಿಯಪ್ಪ, ಜಮೀರ್ ಅಹಮದ್ ಖಾನ್, ಎಂ.ಬಿ.ಪಾಟೀಲ್, ಕೆ.ಜೆ.ಜಾರ್ಜ್, ಸಿಎಂ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್ ಉಪಸ್ಥಿತರಿದ್ದರು.
ಬಳ್ಳಾರಿ : ಬಿಜೆಪಿ ನಾಯಕ ಜನಾರ್ದನ ರೆಡ್ಡಿ ಮನೆ ಮುಂದೆ ವಾಲ್ಮೀಕಿ ಬ್ಯಾನರ್ ಅಳವಡಿಕೆ ವಿಚಾರದಲ್ಲಿ ಎರಡು ಗುಂಪುಗಳ ನಡುವೆ…
ಬಳ್ಳಾರಿ : ಜನಾರ್ಧನ ರೆಡ್ಡಿ ಮನೆ ಮುಂದೆ ವಾಲ್ಮೀಕಿ ಬ್ಯಾನರ್ ಅಳವಡಿಕೆ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದ್ದು,…
ಚಾಮರಾಜನಗರ : ತಾಲ್ಲೂಕಿನ ನಂಜೇದೇವಪುರ ಬಳಿ ನಾಲ್ಕು ಮರಿಗಳ ಜೊತೆ ತಾಯಿ ಹುಲಿ ಕಾಣಿಸಿಕೊಂಡಿದ್ದ ಹಿನ್ನೆಲೆಯಲ್ಲಿ ಅವುಗಳ ಸೆರೆಗಾಗಿ ಕೂಂಬಿಂಗ್…
ಮೈಸೂರು : ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಮಲ್ಲಿಕಾರ್ಜುನ ಬಾಲದಂಡಿ ಗುರುವಾರ ಅಧಿಕಾರ ಸ್ವೀಕಾರ ಮಾಡಿದರು. ಮಂಡ್ಯ ಜಿಲ್ಲೆಯ ಎಸ್‌ಪಿ…
ಗುಂಡ್ಲುಪೇಟೆ: ತಾಲ್ಲೂಕಿನ ಅಭಿವೃದ್ಧಿಗೆ ಶ್ರಮಿಸಿ ಏಳು ಬಾರಿ ಶಾಸಕಿ ,ಸಚಿವೆಯಾಗಿ ಮೊದಲ ಮಹಿಳಾ ಸ್ಪೀಕರ್ ಆದಂತಹ ಗಟ್ಟಿಗಿತ್ತಿ ಕೆ.ಎಸ್.ನಾಗರತ್ನಮ್ಮ ಅವರ…
ಗುಂಡ್ಲುಪೇಟೆ: ಪಟ್ಟಣದ ಕೂತನೂರು ಗುಡ್ಡ ಹಾಗೂ ತೆರಕಣಾಂಬಿ ಭಾಗದಿಂದ ಅಧಿಕ ಭಾರಹೊತ್ತು ಸಾಗುವ ಟಿಪ್ಪರ್ ಗಳ ಸಂಚಾರ ನಡೆಸುತಿದ್ದರು ಆರ್…