BREAKING NEWS

ಪ್ರವಾಹ, ಬರಗಾಲ ಬಂದಾಗ ಬರಲಿಲ್ಲ; ಚುನಾವಣೆ ಬಂತು ಓಡಿ ಬಂದ್ರಿ-ಸುಳ್ಳು ಹೇಳಿ ಹೋದ್ರಿ: ಸಿಎಂ ವ್ಯಂಗ್ಯ!

ಮೈಸೂರು : ಮೋದಿಯವರೇ ಚುನಾವಣೆ ಟೈಮಲ್ಲಿ ಬಿಟ್ರೆ ಬೇರೆ ಟೈಮಲ್ಲಿ ಕರ್ನಾಟಕ ನೆನಪಾಗಲ್ವಾ ನಿಮಗೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಖಾರವಾಗಿ ಪ್ರಶ್ನಿಸಿದರು.

ಮೈಸೂರು ಕೊಡಗು ಲೋಕಸಭಾ ಕ್ಷೇತ್ರದ ಎನ್.ಆರ್.ಮೊಹಲ್ಲಾದಲ್ಲಿ ನಡೆದ ‘ಪ್ರಜಾಧ್ವನಿ-2’ ಜನ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು.

ರಾಜ್ಯಕ್ಕೆ ಪ್ರವಾಹ ಬಂದಾಗಲೂ ಬರಲಿಲ್ಲ, ಬರಗಾಲ ಬಂದಾಗಲೂ ಬರಲಿಲ್ಲ. ಚುನಾವಣೆ ಬಂತು ಓಡಿ ಬಂದ್ರಿ. ಸುಳ್ಳು ಹೇಳಿ ಹೋದ್ರಿ. ಯಾವ‌ ಮುಖ ಹೊತ್ತುಕೊಂಡು ರಾಜ್ಯಕ್ಕೆ ಬಂದ್ರಿ? ಇಷ್ಟೊಂದು ಸುಳ್ಳು ಹೇಳೋಕೇ ಬಂದ್ರಾ ಇಲ್ಲಿಗೆ ಎಂದು ಪ್ರಶ್ನಿಸಿದರು.

ಬಾಂಡ್ ಗಳ ಮೂಲಕ ಸಂಗ್ರಹಿಸಿದ 7600 ಕೋಟಿಗೆ ನೀವು ತೆರಿಗೆ ಕಟ್ಟಿಲ್ಲ? ಇದು ಕ್ರೈಂ ಅಲ್ವೇ? ಈ ಕ್ರೈಂನ ಹೊಣೆ ಹೊರುವವರು ಯಾರು? ಉತ್ತರ ಕೊಡಿ ಮೋದಿಯವರೇ ಎಂದು ಸಿ.ಎಂ.ಆಗ್ರಹಿಸಿದರು.

ನಮ್ಮ ರಾಜ್ಯದ ಜನ ಬರಗಾಲದಲ್ಲಿ ಬೆಂದಿದ್ದಾರೆ. ನಮ್ಮ ರೈತರು ಕಷ್ಟದಲ್ಲಿದ್ದಾರೆ. ನಮ್ಮ ಪಾಲಿನ ಹಣ ಕೊಡಿ ಎಂದು ಕೇಳಿಕೊಂಡಿದ್ದೆವು. ನಾನೇ ಬಂದು ನಿಮ್ಮನ್ನು ಮತ್ತು ಅಮಿತ್ ಶಾ ಇಬ್ಬರನ್ನೂ ಭೇಟಿ ಮಾಡಿ ಮನವಿ ಕೊಟ್ಟಿದ್ದೆನ್ನೆಲ್ಲಾ, ಇವತ್ತಿನವರೆಗೂ ಒಂದೇ ಒಂದು ರೂಪಾಯಿಯನ್ನೂ ರಾಜ್ಯಕ್ಜೆ ಕೊಡಲಿಲ್ಲವಲ್ಲಾ? ಯಾವ ಮುಖ ಹೊತ್ತುಕೊಂಡು ರಾಜ್ಯಕ್ಕೆ ಬಂದು ಮತ ಕೇಳ್ತಾ ಇದೀರಿ ಎಂದು ಖಾರವಾಗಿ ಪ್ರಶ್ನಿಸಿದರು.

ಮೋದಿ ಸುಳ್ಳು ಹೇಳುವುದರಲ್ಲಿ ನಿಸ್ಸೀಮರು. ಸ್ವತಂತ್ರ ಭಾರತದಲ್ಲಿ ಮೋದಿಯಷ್ಟು ಸುಳ್ಳು ಹೇಳುವ ಪ್ರಧಾನಿ ಯಾರೂ ಬಂದಿಲ್ಲ. ಅಪರೂಪಕ್ಕಾದರೂ ಸತ್ಯ ಹೇಳಿ ಎಂದು ವ್ಯಂಗ್ಯವಾಡಿದರು.

40% ಸರ್ಕಾರ ಅಂತ ಗುತ್ತಿಗೆದಾರರಿಂದಲೇ ಕರೆಸಿಕೊಂಡ ಏಕೈಕ ಸರ್ಕಾರ ನಿಮ್ಮ ಬಿಜೆಪಿ ಸರ್ಕಾರ. ಈಗ ನಾವು ನಾಗಮೋಹನ್ ದಾಸ್ ನೇತೃತ್ವದಲ್ಲಿ ಇರುವ ತನಿಖಾ ಆಯೋಗ ರಚನೆಯಾಗಿದೆ. ನಮ್ಮ ಭ್ರಷ್ಟಾಚಾರದ ಬಗ್ಗೆ ದಾಖಲೆಗಳಿದ್ದರೆ ತೋರಿಸಿ, ದಾಖಲೆ ತಂದು ಒಪ್ಪಿಸಿ ಎಂದು ಸವಾಲು ಹಾಕಿದರು.

ಹತ್ತತ್ತು ವರ್ಷ ಪ್ರಧಾನಿ ಆಗಿ ಈ ದೇಶದ ರೈತರು, ಕಾರ್ಮಿಕರು, ಮಹಿಳೆಯರು, ಬಡವರ ಪರವಾಗಿ ಒಂದೇ ಒಂದು ಕಾರ್ಯಕ್ರಮ ಮಾಡಿದ್ದರೆ ತೋರಿಸಿ. ವಿದೇಶದಿಂದ ಕಪ್ಪು ಹಣ ತಂದು ಭಾರತೀಯರ ಖಾತೆಗೆ 15 ಲಕ್ಷ ಹಾಕ್ತೀನಿ ಅಂದ್ರಲ್ಲಾ 15 ರೂಪಾಯಿನಾದ್ರೂ ಹಾಕಿದ್ರಾ ಎಂದು ಪ್ರಶ್ನಿಸಿದರು.

ಅಚ್ಛೇ ದಿನ್ ಆಯೆಗಾ ಅಂದ್ರಲ್ಲಾ ಮೋದಿಜಿ, ಎಲ್ಲಿದೆ ತೋರ್ಸಿ ಅಚ್ಚೆ ದಿನ್ ?

*ಡೀಸೆಲ್ ಬೆಲೆ ಕಡಿಮೆ ಆಗಿದೆಯಾ?
*ಪೆಟ್ರೋಲ್ ಬೆಲೆ ಕಡಿಮೆ ಆಗಿದೆಯಾ?
*ಗ್ಯಾಸ್ ಬೆಲೆ ಕಡಿಮೆ ಆಗಿದೆಯಾ?
*ಗೊಬ್ಬರದ ಬೆಲೆ ಕಡಿಮೆ ಆಗಿದೆಯಾ?
*ಬೇಳೆಕಾಳು ಬೆಲೆ ಕಡಿಮೆ ಆಗಿದೆಯಾ?
*ಅಡುಗೆ ಎಣ್ಣೆ ಬೆಲೆ ಕಡಿಮೆ ಆಗಿದೆಯಾ?
*ನಿರುದ್ಯೋಗ ಸಮಸ್ಯೆ ಬಗೆಹರಿಸಿದ್ರಾ?
*ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿ ಮಾಡಿದ್ರಾ?
*ರೈತರ ಆದಾಯ ದುಪ್ಪಟ್ಟು ಮಾಡಿದ್ರಾ?
*ವಿದೇಶದಿಂದ ಕಪ್ಪು ಹಣ ತಂದ್ರಾ?
*ಮತೆ ಎಲ್ಲಿದೆ ನಿಮ್ಮ ಅಚ್ಚೆ ದಿನ್? ಬನ್ನಿ ಸ್ಚಾಮಿ ತೋರ್ಸಿ ಎಂದು ವ್ಯಂಗ್ಯವಾಡಿದರು.

ರಾಜ್ಯದಲ್ಲಿರುವ ಪರಿಶಿಷ್ಟ ಜಾತಿ, ವರ್ಗದ ಜನ ಸಮುದಾಯಗಳಿಗೆ ನಾವು ಅನುದಾನ ಮೀಸಲಿಡಲು ಕಾನೂನು ಮಾಡಿದ್ದು ನಮ್ಮ ಸರ್ಕಾರ. ನೀವು ಹತ್ತತ್ತು ವರ್ಷ ಪ್ರಧಾನಿಯಾಗಿ ದಲಿತ ಸಮುದಾಯದ , ಹಿಂದುಳಿದ ಜಾತಿ ಸಮುದಾಯಗಳ ಪ್ರಗತಿಗೆ ಒಂದೇ ಒಂದು ಕಾರ್ಯಕ್ರಮವನ್ನಾದರೂ ರೂಪಿಸಿದ್ದೀರಾ ಎಂದು ಪ್ರಶ್ನಿಸಿದರು.

ನಾನು ಮೊದಲ ಮುಖ್ಯಮಂತ್ರಿಯಾಗಿ ಕೊಟ್ಟ ಆಶ್ವಾಸನೆಗಳಲ್ಲಿ ಶೇ95 ರಷ್ಟು ಈಡೇರಿಸಿದೆ. ಈ ಬಾರಿ ನಾವು ಹೇಳಿದ್ದ ಐದೂ ಗ್ಯಾರಂಟಿಗಳನ್ನೂ ಜಾರಿ ಮಾಡಿದ್ದೇವೆ. ನುಡಿದಂತೆ ನಡೆದಿದ್ದೇವೆ. ನೀವು ನಮ್ಮ ರಾಜ್ಯದ ಜನತೆಗೆ ಏನಾದ್ರೂ ಮಾಡಿದ್ರೆ ಬನ್ನಿ ತೋರ್ಸಿ ಸ್ವಾಮಿ ಎಂದು ಸವಾಲು ಹಾಕಿದರು.

ರಾಹುಲ್ ಗಾಂಧಿ ನ್ಯಾಯಪತ್ರ ನಿಮ್ಮ ಮನೆ ಬಾಗಿಲಿಗೆ ಬರತ್ತೆ : ರಾಜ್ಯ ಸರ್ಕಾರದ ಐದು ಗ್ಯಾರಂಟಿಗಳ ಜತೆಗೆ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿಯವರು 25 ಗ್ಯಾರಂಟಿಗಳನ್ನು ಘೋಷಿಸಿದ್ದಾರೆ. ಕೇಂದ್ರದಲ್ಲಿ ನಮ್ಮ ಸರ್ಕಾರ ಬಂದ ತಕ್ಷಣ ಎಲ್ಲಾ 25 ಗ್ಯಾರಂಟಿಗಳು ಜಾರಿ ಆಗುತ್ತವೆ ಎಂದರು.

ಎಚ್‌ಡಿಕೆ ವಿರುದ್ಧ ಕಿಡಿಕಾರಿದ ಸಿಎಂ, ರಾಜ್ಯ ಸರ್ಕಾರದ ಗ್ಯಾರಂಟಿಗಳಿಂದ ಮಹಿಳೆಯರು ಹಾದಿ ತಪ್ಪಿದ್ದಾರೆ ಎಂದು ಎಚ್.ಡಿ.ಕುಮಾರಸ್ವಾಮಿಯವರು ನೀಡಿದ ಹೇಳಿಕೆ ಇಡೀ ಮಹಿಳಾ ಸಮುದಾಯದ ಸ್ವಾಭಿಮಾನವನ್ನು ಕೆಣಕಿದೆ. ಮಹಿಳೆಯರಿಗೆ ಈ ಮಟ್ಟದ ಅವಮಾನ ಖಂಡನೀಯ ಎಂದರು.

ಇನ್ನು ಬ್ರಿಟೀಷರ ವಿರುದ್ಧದ ಭಾರತೀಯರ ಸ್ವಾತಂತ್ರ್ಯ ಹೋರಾಟದಲ್ಲಿ ಬಿಜೆಪಿ, RSS ನ ಒಬ್ಬೇ ಒಬ್ಬನೂ ಹುತಾತ್ಮ ಆಗಲಿಲ್ಲ. ಬ್ರಿಟೀಷರೇ ಭಾರತ ಬಿಟ್ಟು ತೊಲಗಿ ಎನ್ನುವ ಸ್ವತಂತ್ರ ಹೋರಾಟದಲ್ಲಿ ಇಡೀ ಭಾರತೀಯರು ದುಮುಕಿದರು. ಆದರೆ 1925 ರಲ್ಲೇ ಹುಟ್ಟಿದ್ದ BJP ಯ ಮಾತೃಸಂಸ್ಥೆ RSS ನ ಒಬ್ಬೇ ಒಬ್ಬರೂ ಏಕೆ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಲಿಲ್ಲ ಎನ್ನುವುದಕ್ಕೆ ಇಡಿ ದೇಶದ ಜನರಿಗೆ ಉತ್ತರಿಸಬೇಕು ಎಂದು ಆಗ್ರಹಿಸಿದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಉಪಸಭಾಪತಿಗೆ ಚಿತ್ರಹಿಂಸೆ ಆರೋಪ : ಐಪಿಎಸ್‌ ಅಧಿಕಾರಿ ಬಂಧನ

ಅಮರಾವತಿ : ಹಿಂದಿನ ವೈಎಸ್‍ಆರ್‍ಸಿಪಿ ಆಡಳಿತದ ಅವಧಿಯಲ್ಲಿ ಆಂಧ್ರ ವಿಧಾನಸಭೆಯ ಪ್ರಸ್ತುತ ಉಪಸಭಾಪತಿ ಕೆ. ರಘುರಾಮ ಕೃಷ್ಣ ರಾಜು ಅವರ…

6 hours ago

ಮಾರ್ಚ್‌ 11ರಿಂದ ವೈದ್ಯಾಧಿಕಾರಿಗಳ ಮುಷ್ಕರ : ಆರೋಗ್ಯ ಸೇವೆಯಲ್ಲಿ ವ್ಯತ್ಯಯ ಸಾಧ್ಯತೆ

ಬೆಂಗಳೂರು : ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ಸರ್ಕಾರಿ ವೈದ್ಯಾಧಿಕಾರಿಗಳ ಸಂಘವು ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಮಾರ್ಚ್ 11ರಿಂದ…

6 hours ago

ಟ್ರಂಪ್‌ ಜಾಗತಿಕ ಸುಂಕ ರದ್ದು : ವರದಿ

ವಾಷಿಂಗ್ಟನ್ : ಕಾನೂನುಬಾಹಿರವಾಗಿ ಟ್ರಂಪ್ ವಿಧಿಸಿದ್ದ ಆಮದು ಸುಂಕ ಸಂಗ್ರಹವನ್ನ ಅಮೆರಿಕ ನಿಲ್ಲಿಸಲಿದೆ ಎಂದು ಯುಎಸ್ ಕಸ್ಟಮ್ಸ್ ಮತ್ತು ಗಡಿ…

6 hours ago

ಸಫಾರಿ ಆದಾಯದ ಶೇ.35 ಭಾಗ ಕಾಡಿನಂಚಿನ ಜನಕಲ್ಯಾಣಕ್ಕೆ ಬಳಕೆ : ಖಂಡ್ರೆ

ಬೆಂಗಳೂರು : ಸಫಾರಿಯಿಂದ ಬರುವ ಆದಾಯದಲ್ಲಿ ಶೇ.35ರಷ್ಟನ್ನು ಕಾಡಿನಂಚಿನ ಗ್ರಾಮದ ಜನರ ಕಲ್ಯಾಣಕ್ಕಾಗಿ ಬಳಸಲು ರಾಜ್ಯ ಸರ್ಕಾರ ತೀರ್ಮಾನಿಸಿದ್ದು, ಗ್ರಾಮಗಳಲ್ಲಿ…

7 hours ago

ವನ್ಯಜೀವಿ ಸಂಚಾರ | ಕಾಡಂಚಿನ ಗ್ರಾಮದ ಮುಖಂಡರಿಗೆ ಮಾಹಿತಿ ರವಾನಿಸಲು ಖಂಡ್ರೆ ಸೂಚನೆ

ಬೆಂಗಳೂರು : ಅರಣ್ಯದಂಚಿನ ಜಮೀನುಗಳಲ್ಲಿ ವನ್ಯಜೀವಿಗಳ ಸಂಚಾರದ ಬಗ್ಗೆ ಕಮಾಂಡ್ ಕೇಂದ್ರಕ್ಕೆ ಮಾಹಿತಿ ಬಂದ ಕೂಡಲೇ ತೋಟದ ಬೆಳೆಗಾರರ ಸಂಘಟನೆ…

7 hours ago

ಮನರೇಗಾ ನಾಶ | ಜನರ ಅನ್ನ ಕಿತ್ತುಕೊಳ್ಳುತ್ತಿರುವ ಕೇಂದ್ರ ; ಸಿಎಂ ಸಿದ್ದರಾಮಯ್ಯ

ಚಿಕ್ಕಬಳ್ಳಾಪುರ : ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್…

7 hours ago