BREAKING NEWS

ಸಂಸತ್‌ ಭವನದ ಭದ್ರತಾ ಲೋಪ ಖಂಡಿಸಿದ ಸಿಎಂ ಸಿದ್ದರಾಮಯ್ಯ

ನೂತನ ಸಂಸತ್ ಭವನದಲ್ಲಿ ಭದ್ರತಾ ಲೋಪವಾಗಿದೆ. ಲೋಕಸಭಾ ಕಲಾಪ ನಡೆಯುತ್ತಿದ್ದ ಸಮಯದಲ್ಲಿ ಅಪರಿಚಿತ ಇಬ್ಬರು ವ್ಯಕ್ತಿಗಳು ನುಗ್ಗಿರುವ ಘಟನೆ ನಡೆದಿತ್ತು. ಇದೀಗ ಆ ಅಪರಿಚಿತ ವ್ಯಕ್ತಿಗಳು ಯಾರೆಂದು ತಿಳಿದುಬಂದಿದ್ದು, ಓರ್ವ ವ್ಯಕ್ತಿ ಮೈಸೂರು ಮೂಲದ ಮನೋರಂಜನ್ ಎಂದು ತಿಳಿದುಬಂದಿದೆ.

ಈ ಘಟನೆ ಬಗ್ಗೆ ಹಲವಾರು ರಾಜಕೀಯ ನಾಯಕರು ಮಾತನಾಡಿ ತಮ್ಮ ಅಭಿಪ್ರಾಯಗಳನ್ನು ತಿಳಿಸಿದ್ದು, ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಸಹ ಪ್ರತಿಕ್ರಿಯಿಸಿದ್ದಾರೆ. ಇಡೀ ದೇಶವನ್ನೇ ಬೆಚ್ಚಿ ಬೀಳಿಸಿರುವ ಸಂಸತ್ ಭವನದ ಮೇಲೆ ಇಂದು ನಡೆದಿರುವ ದಾಳಿ ಖಂಡನೀಯವಾದುದು ಮಾತ್ರವಲ್ಲ ಅತ್ಯಂತ ಆಘಾತಕಾರಿಯಾದುದು. ಸಂಸದರೆಲ್ಲರೂ ಸುರಕ್ಷಿತವಾಗಿದ್ದಾರೆ ಎನ್ನುವುದು ಸಮಾಧಾನದ ಸಂಗತಿ. ಅತ್ಯಂತ ಬಿಗಿಭದ್ರತೆಯ ಹೊರತಾಗಿಯೂ ಇಂತಹದ್ದೊಂದು ಘಟನೆ ನಡೆದಿರುವುದು ಆಘಾತಕಾರಿ ಬೆಳವಣಿಗೆ. ಇದು ಸಂಪೂರ್ಣವಾಗಿ ಭದ್ರತಾ ವ್ಯವಸ್ಥೆಯ ಲೋಪ ಎನ್ನುವುದು ಸ್ಪಷ್ಟವಾಗಿದೆ. ಈ ಬಗ್ಗೆ ನಿಷ್ಪಕ್ಷ ಪಾತ ತನಿಖೆ ನಡೆಸಿ ಘಟನೆಯ ಹಿಂದಿನ ಸಂಪೂರ್ಣ ಸತ್ಯವನ್ನು ದೇಶದ ಮುಂದಿಡುವುದು ಕೇಂದ್ರ ಸರ್ಕಾರ, ಬಹಳ ಪ್ರಮುಖವಾಗಿ ದೇಶದ ಗೃಹ ಸಚಿವರ ಕರ್ತವ್ಯವಾಗಿದೆ.

ಇಪ್ಪತ್ತೆರಡು ವರ್ಷಗಳ ಹಿಂದೆ (13-12-2001) ಸಂಸತ್ ಮೇಲೆ ಭಯೋತ್ಪಾದಕರು ನಡೆಸಿದ್ದ ದಾಳಿಯ ದಿನವನ್ನೇ ಆರಿಸಿಕೊಂಡು ಈ ದಾಳಿ ನಡೆದಿರುವುದನ್ನು ಗಮನಿಸಿದರೆ ಇದರ ಹಿಂದೆ ಬೇರೆ ಹುನ್ನಾರಗಳಿರಬಹುದೆಂಬ ಸಂಶಯವೂ ಮೂಡುತ್ತಿದೆ. 2001ರ ದಾಳಿಯ ಸಮಯದಲ್ಲಿಯೂ ಬಿಜೆಪಿ ನೇತೃತ್ವದ ಎನ್ ಡಿಎ ಸರ್ಕಾರವೇ ಇತ್ತು ಎನ್ನುವುದನ್ನು ಗಮನಿಸಬೇಕಾಗುತ್ತದೆ. ಇದು ದೇಶದ ಸುರಕ್ಷತೆಯ ಬಗ್ಗೆ ಹಲವಾರು ಪ್ರಶ್ನೆಗಳಿಗೆ ಕಾರಣವಾಗಿದೆ.

ಸಂಸತ್ ಭವನದ ಮೇಲೆ ದಾಳಿ ನಡೆಸಿದ ಯುವಕರಿಗೆ ಮೈಸೂರಿನ ಲೋಕಸಭಾ ಸದಸ್ಯ ಪ್ರತಾಪ ಸಿಂಹ ಅವರೇ ಪಾಸ್ ನೀಡಿರುವ ವರದಿಗಳು ಬರುತ್ತಿವೆ. ಈ ಸುದ್ದಿ ನಿಜವಾಗಿದ್ದಲ್ಲಿ ಈ ಸಂಸದರನ್ನು ಕೂಡಾ ವಿಚಾರಣೆಗೆ ಒಳಪಡಿಸಬೇಕಾಗುತ್ತದೆ. ಪಾಸ್ ನೀಡಿರಬೇಕಾಗಿದ್ದರೆ ಯುವಕರು ಸಂಸದರ ಪರಿಚಯಸ್ಥರಾಗಿರಬಹುದು. ಪರಿಚಯಸ್ಥರಲ್ಲದೆ ಇದ್ದರೆ ಅಪರಿಚಿತರಿಗೆ ಪಾಸುಗಳನ್ನು ಹೇಗೆ ನೀಡಲಾಯಿತು ಎನ್ನುವ ಪ್ರಶ್ನೆ ಕೂಡಾ ಹುಟ್ಟುತ್ತದೆ. ಕಾನೂನಿನಲ್ಲಿ ಬೇಜವಾಬ್ದಾರಿಯಿಂದ ನಡೆಯುವ ಅನಾಹುತ ಕೂಡಾ ಶಿಕ್ಷಾರ್ಹ ಎನ್ನುವುದನ್ನು ತಿಳಿದುಕೊಳ್ಳಬೇಕಾಗುತ್ತದೆ.

ದೇಶದ ಹೃದಯದಂತಿರುವ ಸಂಸತ್ ಭವನಕ್ಕೆ ಬೇರೆ ಯಾವುದೇ ಪ್ರದೇಶ ಇಲ್ಲವೆ ಕಟ್ಟಡವನ್ನು ಮೀರಿದ ಬಿಗಿ ಭದ್ರತೆಯನ್ನು ನೀಡಲಾಗಿದೆ. ಹೀಗಿದ್ದರೂ ಈ ಯುವಕರು ಸ್ಮೋಕ್ ಬಾಂಬು ಹಿಡಿದುಕೊಂಡು ಸಂಸತ್ ಒಳಗೆ ಹೇಗೆ ಪ್ರವೇಶಿಸಿದರು? ಈ ಕೃತ್ಯದಲ್ಲಿ ಒಳಗಿನವರೇ ಯಾರಾದರೂ ಭಾಗಿಯಾಗಿದ್ದಾರೆಯೇ? ಈ ಯುವಕರ ಕೃತ್ಯದ ಹಿಂದೆ ಬೇರೆ ಯಾವುದಾದರೂ ಬಾಹ್ಯ ಶಕ್ತಿಗಳ ಕೈವಾಡ ಇದೆಯೇ? ಎಂಬೀತ್ಯಾದಿ ಪ್ರಶ್ನೆಗಳು ಸಹಜವಾಗಿಯೇ ಹುಟ್ಟಿಕೊಳ್ಳುತ್ತದೆ. ದೇಶದ ಸಂಸತ್ ಭವನವೇ ಸುರಕ್ಷಿತವಾಗಿಲ್ಲದಿರುವಾಗ ದೇಶದ ಗಡಿ ಸುರಕ್ಷಿತವಾಗಿರುತ್ತಾ ಎಂಬೀತ್ಯಾದಿ ಪ್ರಶ್ನೆಗಳು ಸಹಜವಾಗಿಯೇ ಹುಟ್ಟಿಕೊಳ್ಳುತ್ತದೆ. ಈ ಪ್ರಶ್ನೆಗಳಿಗೆಲ್ಲ ಉತ್ತರಿಸಬೇಕಾಗಿರುವ ಹೊಣೆ ದೇಶದ ಪ್ರಧಾನಿ ನರೇಂದ್ರ ಮೋದಿಯವರದ್ದಾಗಿದೆ ಎಂದು ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ.

andolana

Recent Posts

ನಿಲ್ಲದ ಚಿನ್ನದ ನಾಗಾಲೋಟ : 1.61ಲಕ್ಷ ರೂ.ತಲುಪಿದ ಬಂಗಾರ

1 ಕೆ.ಜಿ.ಬೆಳ್ಳಿಗೆ 3.30 ಲಕ್ಷ ರೂಪಾಯಿ ಹೈದರಾಬಾದ್ : ಚಿನ್ನ ಮತ್ತು ಬೆಳ್ಳಿ ಬೆಲೆಗಳ ಏರಿಕೆ ನಿಲ್ಲುತ್ತಿಲ್ಲ. ಬುಧವಾರ ಹಳದಿ…

6 hours ago

ಯುವಕನ ಕೊಲೆ ಪ್ರಕರಣ : ಮೂವರು ಆರೋಪಿಗಳ ಬಂಧನ

ಮೈಸೂರು : ಸೋಮವಾರ ತಡರಾತ್ರಿ ಯುವಕನೋರ್ವನನ್ನು ಐವರ ಗುಂಪು ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಉದಯಗಿರಿ…

6 hours ago

ಪಾದಯಾತ್ರೆ ವೇಳೆ ಚಿರತೆ ದಾಳಿಗೆ ವ್ಯಕ್ತಿ ಬಲಿ ಪ್ರಕರಣ : ಚಿರತೆ ಸೆರೆಗೆ ಅರಣ್ಯ ಇಲಾಖೆ ಕ್ರಮ

ಹನೂರು : ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ಚಿರತೆ ದಾಳಿ ಮಾಡಿದ ಪರಿಣಾಮ ವ್ಯಕ್ತಿ ಮೃತಪಟ್ಟಿರುವುದರಿಂದ ಚಿರತೆ…

7 hours ago

ಮುಡಾ ನಿವೇಶನ ಹಂಚಿಕೆ ಅಕ್ರಮ ಪ್ರಕರಣ : ಜಿ.ಟಿ.ದಿನೇಶ್‌ಗೆ ಹೈಕೋರ್ಟ್ ಶಾಕ್

ಇಡಿ ಬಂಧನದಿಂದ ಬಿಡುಗಡೆ ಕೋರಿ ಮಾಜಿ ಆಯುಕ್ತ ಸಲ್ಲಿಸಿದ್ದ ಅರ್ಜಿ ತಿರಸ್ಕಾರ ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿರುವ…

7 hours ago

ಸಮೀಕ್ಷೆ | ಫೆ.10ರೊಳಗೆ ಸರ್ಕಾರಕ್ಕೆ ವರದಿ ಸಲ್ಲಿಕೆ

ಬೆಂಗಳೂರು : ಜನವರಿ ಅಂತ್ಯ ಅಥವಾ ಫೆಬ್ರವರಿ 10ರೊಳಗೆ ಮಧುಸೂದನ್ ನಾಯಕ್ ಅವರ ನೇತೃತ್ವದ ಶಾಶ್ವತ ಹಿಂದುಳಿದ ವರ್ಗಗಳ ಆಯೋಗ…

8 hours ago

ಅಕ್ರಮ ರೆಸಾರ್ಟ್‌ ವಿರುದ್ದದ ಅನಿರ್ದಿಷ್ಟ ಪ್ರತಿಭಟನೆ ಅಂತ್ಯ

ಹೆಚ್.ಡಿ.ಕೋಟೆ : ತಾಲ್ಲೂಕಿನ ಕಬಿನಿ ಹಿನ್ನೀರು ಪ್ರದೇಶ, ನಾಗರಹೊಳೆ-ಬಂಡೀಪುರ ಅರಣ್ಯ ವ್ಯಾಪ್ತಿ ಹಾಗೂ ಪರಿಸರ ಸಂವೇದಿ ವಲಯಗಳಲ್ಲಿ ನಿಯಮಗಳನ್ನು ಉಲ್ಲಂಘಿಸಿ…

8 hours ago