Mysore
30
few clouds

Social Media

ಮಂಗಳವಾರ, 27 ಜನವರಿ 2026
Light
Dark

ನಮ್ಮ ಮೆಟ್ರೋ ವಿಸ್ತೃತ ಮಾರ್ಗ ಉದ್ಘಾಟಿಸಿದ ಪ್ರಧಾನಿಗೆ ಧನ್ಯವಾದ ತಿಳಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕೆಆರ್ ಪುರ-ಬೈಯಪ್ಪನಹಳ್ಳಿ ಹಾಗೂ ಕೆಂಗೇರಿ-ಚಲ್ಲಘಟ್ಟದವರೆಗೆ ನಮ್ಮ ಮೆಟ್ರೋ ವಿಸ್ತ್ರತ ಮಾರ್ಗವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಶುಕ್ರವಾರ ಉದ್ಘಾಟಿಸಿದರು.

ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಧಾನಿ  ಮೋದಿಯವರು ನಮ್ಮ ಮೆಟ್ರೋ ವಿಸ್ತೃತ ಮಾರ್ಗಕ್ಕೆ ಚಾಲನೆ ನೀಡಿದರು.

ಕಾರ್ಯಕ್ರಮದ ವೇಳೆ ಸಿಎಂ ಸಿದ್ದರಾಮಯ್ಯ, ಡಿ.ಕೆ ಶಿವಕುಮಾರ್, ಯಶವಂತಪುರ ಶಾಸಕ ಎಸ್.ಟಿ ಸೋಮಶೇಖರ್, ಸಿಎಸ್ ವಂದಿತಾ ಶರ್ಮಾ, ಮೆಟ್ರೋ ಎಂಡಿ ಅಂಜುಮ್ ಪರ್ವೇಜ್ ಉಪಸ್ಥಿತರಿದ್ದರು.

ಈ ವೇಳೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ನಾನು ಕನ್ನಡದಲ್ಲೇ ಮಾತನಾಡುತ್ತೇನೆಂದು ಹೇಳಿ, ಪ್ರಧಾನಿ ಮೋದಿಯವರಿಗೆ ಧನ್ಯವಾದ ತಿಳಿಸಿದರು.

ಬೆಂಗಳೂರು ನಗರ ಪರವಾಗಿ ಪ್ರಧಾನಿ ಮೋದಿಯವರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಟ್ರಾಫಿಕ್ ಸಮಸ್ಯೆ ಹೆಚ್ಚಾಗಿರುವುದರಿಂದ ಮೆಟ್ರೋ ಸೇವೆ ಅತ್ಯಗತ್ಯ. ಮೆಟ್ರೋ ಯೋಜನೆ ಕೇಂದ್ರ ಮತ್ತು ರಾಜ್ಯ ಸರ್ಕಾರ ಸೇರಿ ಯೋಜನೆ ಮಾಡಲಾಗುತ್ತಿದೆ. ರೂ.5,600 ಕೋಟಿ ಹಣ ರಾಜ್ಯ ಸರ್ಕಾರ ಮೆಟ್ರೋ ಯೋಜನೆ ನೀಡಲಾಗಿದೆ ಎಂದು ಹೇಳಿದರು. ಇದೇ ವೇಳೆ ಮಾಜಿ ರಾಷ್ಟ್ರಪತಿ ದಿವಂಗತ ಪ್ರಣಬ್ ಮುಖರ್ಜಿಯವರನ್ನು ಸ್ಮರಿಸಿದರು.

ಕೆಆರ್ ಪುರದಿಂದ ಬೈಯಪ್ಪನಳ್ಳಿ, ಕೆಂಗೇರಿ ಯಿಂದ ಚಲ್ಲಗಟ್ಟದವರೆಗೆ ಮೆಟ್ರೋ ಸೇವೆಯನ್ನು ರಾಷ್ಟ್ರಕ್ಕೆ ಸಮರ್ಪಣೆ ಮಾಡಲಾಗಿದೆ. ಕೇಂದ್ರ, ರಾಜ್ಯ ಸರ್ಕಾರ ಜಂಟಿಯಾಗಿ ಮೆಟ್ರೋ ಯೋಜನೆ ಜಾರಿಗೊಳಿಸುತ್ತಿದೆ. ಮೊದಲ ಹಂತದಲ್ಲಿ ಸು. 42.3 ಉದ್ದದ ಯೋಜನೆ ಜಾರಿ ಮಾಡಲಾಗಿದೆ. ಇದಕ್ಕೆ‌ 5630 ಕೋಟಿ ರಾಜ್ಯ ಸರ್ಕಾರ ಖರ್ಚು ಮಾಡಿದೆ. ಕೇಂದ್ರ ರಾಜ್ಯ ಎರಡೂ ಸರ್ಕಾರಗಳು ಜಂಟಿಯಾಗಿ ಮೆಟ್ರೋ ಯೋಜನೆ ಮಾಡಲಾಗುತ್ತಿದೆ. ಎರಡೂ ಹಂತ ಸೇರಿ ಸುಮಾರು 74 ಕಿ.ಲೋ ವಿಸ್ತರಣೆ ಆಗಿದೆ ಎಂದು ಮಾಹಿತಿ ನೀಡಿದರು.

ಸೆಂಟ್ರಲ್ ಸಿಲ್ಕ್ ಬೋರ್ಡ್ ನಿಂದ ಹೆಬ್ಬಾಳ ಜೆಂಕ್ಷನ್ ಮೂಲಕ ಅಂತರಾಷ್ಟ್ರೀಯ ಏರ್ ಪೋರ್ಟ್ ಗೆ 2ಎ ಹಾಗೂ 2ಬಿ ಯೋಜನೆಯನ್ನು ಅಂದಾಜು 14,788 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗುತ್ತಿದೆ. 2026ರ ಒಳಗೆ ಪೂರ್ಣಗೊಳಿಸಲು ಯೋಜಿಸಲಾಗಿದೆ. ಕರ್ನಾಟಕದಿಂದ 4775.36 ಕೋಟಿ ಬಿಡುಗಡೆ ಮಾಡಲಾಗಿದೆ. ಯೋಜನೆ ಪೂರ್ಣಗೊಂಡ ನಂತರ 176 ಕಿಲೋಮೀಟರ್ ಆಗಲಿದೆ. ಪ್ರತಿದಿನ 20 ಲಕ್ಷ ಪ್ರಯಾಣಿಕರು ಸಂಚರಿಸಬಹುದಾಗಿದೆ. ಈ ಯೋಜನೆಗೆ ಶೀಘ್ರವಾಗಿ ಅನುಮೋದನೆ ನೀಡುವಂತೆ ಮಾನ್ಯ ಪ್ರಧಾನಿ ಮಂತ್ರಿ ನರೇಂದ್ರ ಮೋದಿ ಅವರನ್ನು ಕೊರುತ್ತೇನೆ. ಸರ್ಜಾಪುರದಿಂದ ಹೆಬ್ಬಾಳದವರೆಗೂ 37 ಕಿಲೋ ಮೀಟರ್ ಉದ್ದದ ಹಂತ 3ಎ ಗೆ ಡಿಪಿಆರ್ ತಯಾರಿಸಲಾಗುತ್ತಿದೆ. 257 ಕಿಲೋಮಟರ್ ಯೋಜನೆ ಹಂತದಲ್ಲಿ ಇದೆ. 67 ಕಿಲೋ ಮೀಟರ್ ಮೆಟ್ರೋ ಮಾರ್ಗಗಳ ಸಮೀಕ್ಷೆ ಶೀಘ್ರದಲ್ಲೇ ಕೈಗೊಳ್ಳುತ್ತೇನೆ ಎಂದು ಹೇಳಿದರು.

ಯೋಗಿ ಆದಿತ್ಯನಾಥ್ ಜೊತೆ ಸಿಎಂ ಫೋಟೋ
ಈ ನಡುವೆ ಗಾಜಿಯಾಬಾದ್ ಕಾರ್ಯಕ್ರಮದ ವೇದಿಕೆಯ ಪೋಸ್ಟರ್ ನಲ್ಲಿ ಯುಪಿ ಸಿಎಂ ಯೋಗಿ ಆದಿತ್ಯನಾಥ್ ಜೊತೆ ಕರ್ನಾಟಕ ಸಿಎಂ ಸಿದ್ದರಾಮಯ್ಯ ಫೋಟೋ ಕಾಣಿಸಿಕೊಂಡಿದೆ. ಪ್ರಧಾನಿ ಮೋದಿ ಜೊತೆ ಇಬ್ಬರು ಸಿಎಂಗಳ ಫೋಟೋ ಕಾಣಿಸಿಕೊಂಡಿದೆ.

ಇದನ್ನು ನೋಡಿದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ನಿಮ್ಮದೂ ಫೋಟೋ ಇದೆ ಎಂದು ಸಿದ್ದರಾಮಯ್ಯ ಅವರಿಗೆ ತಿಳಿಸಿದರು. ಈ ವೇಳೆ ಮಾತನಾಡಿದ ಸಿದ್ದರಾಮಯ್ಯ ಅವರು, ಇಲ್ಲ ಅನ್ಸುತ್ತೆ ಎಂದು ವಿಡಿಯೋ ಕಾನ್ಫರೆನ್ಸ್ ನಲ್ಲಿ ಕಣ್ಣಿಟ್ಟು ನೋಡಿದರು. ಇದೆ.. ಇದೆ.. ನಾನು ನೋಡ್ದೆ ಎಂದು ಡಿಕೆ ಶಿವಕುಮಾರ್ ಹೇಳಿದ್ದು, ನಿಮ್ ಫೋಟೋ ಹಾಕಿದ್ದಾರೆ ಸರ್ ಎಂದು ಅಧಿಕಾರಿಗಳು ಕೂಡ ಮಾಹಿತಿ ನೀಡಿದರು. ಬಳಿಕ ಹೌದಾ ಎಂದು ಸಿಎಂ ಸಿದ್ದರಾಮಯ್ಯ ಸುಮ್ಮನಾದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!