BREAKING NEWS

ಜೂ.11ರಂದು ಕೆಲಹೊತ್ತು ಬಸ್ ಕಂಡಕ್ಟರ್ ಆಗಲಿದ್ದಾರೆ ಸಿಎಂ ಸಿದ್ದರಾಮಯ್ಯ!

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳು ಭಾರೀ ಸದ್ದು ಮಾಡುತ್ತಿವೆ. ಕಾಂಗ್ರೆಸ್ ಚುನಾವಣಾ ಪೂರ್ವ ನೀಡಿದ್ದ 5 ಖಾತರಿಗಳಲ್ಲಿ 3 ಖಾತರಿಗಳನ್ನು ಜಾರಿಗೆ ತರುವ ದಿನಾಂಕಗಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿನ್ನೆ ಅಧಿಕೃತವಾಗಿ ಘೋಷಿಸಿದ್ದಾರೆ.

ಅದರಲ್ಲಿ ಮೊದಲನೆಯದಾಗಿ ಸರ್ಕಾರಿ ಬಸ್ಸುಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣವಾದ ಶಕ್ತಿ ಯೋಜನೆ(Shakti scheme) ಇದೇ ಭಾನುವಾರ ಜಾರಿಗೆ ಬರಲಿದ್ದು ರಾಜಧಾನಿ ಬೆಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ ಕೆ ಶಿವಕುಮಾರ್ ಚಾಲನೆ ನೀಡಲಿದ್ದಾರೆ.

ನಿರ್ವಾಹಕರಾಗಲಿದ್ದಾರೆ ಸಿದ್ದರಾಮಯ್ಯ: ಶಕ್ತಿ ಯೋಜನೆಗೆ ವಿಭಿನ್ನವಾಗಿ ಚಾಲನೆ ನೀಡಲು ಕಾಂಗ್ರೆಸ್ ಸರ್ಕಾರ ಮುಂದಾಗಿದೆ. ಅದರಂತೆ ಜೂನ್ 11ರಂದು ಬೆಳಗ್ಗೆ ರಾಜ್ಯದ ಶಕ್ತಿ ಕೇಂದ್ರ ವಿಧಾನಸೌಧ ಮುಂಭಾಗದಲ್ಲಿ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ. ವಿಧಾನಸೌಧಕ್ಕೆ ತೆರಳುವ ರೂಟ್ ನಂಬರ್ 43ರ ಬಸ್ಸಿನಲ್ಲಿ ಕೆಲಹೊತ್ತು ಸಿಎಂ ಕಂಡಕ್ಟರ್ ಆಗಿ ಮಹಿಳೆಯರಿಗೆ ಶೂನ್ಯದರದ ಟಿಕೆಟ್ ನೀಡಲಿದ್ದಾರೆ. ವಿಧಾನಸೌಧದಿಂದ ಮೆಜೆಸ್ಟಿಕ್ ಗೆ ಕಂಡಕ್ಟರ್ ಆಗಿ ಕಾರ್ಯನಿರ್ವಹಿಸುತ್ತಾ ಕೆಲಹೊತ್ತು ಪ್ರಯಾಣಿಸಲಿದ್ದಾರೆ.

ಅನಂತರ ವಿಧಾನಸೌಧದಲ್ಲಿ ನಡೆಯುವ ಅದ್ಧೂರಿ ಕಾರ್ಯಕ್ರಮದಲ್ಲಿ ಯೋಜನೆಗೆ ಅಧಿಕೃತ ಚಾಲನೆ ನೀಡಲಿದ್ದಾರೆ. ಇಡೀ ರಾಷ್ಟ್ರದ ಗಮನ ಸೆಳೆದಿರುವ ಗ್ಯಾರಂಟಿ ಯೋಜನೆಗಳ ಉದ್ಘಾಟನೆಯೂ ಸಹ ವಿಭಿನ್ನವಾಗಿರಬೇಕು ಎಂಬ ಆಲೋಚನೆಯಲ್ಲಿರುವ ಸಿದ್ದರಾಮಯ್ಯ ಅವರ ಥಿಂಕ್‌ ಟ್ಯಾಂಕ್‌ ಈ ಶೈಲಿಯಲ್ಲಿ ಕಾರ್ಯಕ್ರಮ ರೂಪಿಸಲು ತೀರ್ಮಾನಿಸಲಾಗಿದೆ ಎಂದು ತಿಳಿದುಬಂದಿದೆ.

andolanait

Recent Posts

ತಿ.‌ ನರಸೀಪುರ: ಬೈಕ್ ಡಿಕ್ಕಿ ಚಿರತೆ ಸಾವು

ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…

6 hours ago

ತಿರುಪತಿ ಲಡ್ಡು: ತುಪ್ಪದಲ್ಲಿ ಪ್ರಾಣಿ ಕೊಬ್ಬು ಬಳಕೆ

ಅಮರಾವತಿ: ಜಗತ್‌ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…

8 hours ago

ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ಖಾನ್‌ ತಂದೆಗೆ ಜೀವ ಬೆದರಿಕೆ: ಮಹಿಳೆ ಸೇರಿ ಇಬ್ಬರ ಬಂಧನ

ಮುಂಬೈ:‌ ಬಾಲಿವುಡ್‌ನ ಭಾಯಿಜಾನ್ ಸಲ್ಮಾನ್‌ ಖಾನ್‌ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…

8 hours ago

ಶಾಸಕ ಮುನಿರತ್ನಗೆ ಜಾಮೀನು: ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಬಂಧನ ಸಾಧ್ಯತೆ

ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…

9 hours ago

ನುಡಿ ಹಬ್ಬಕ್ಕೆ ಆಹ್ವಾನಿಸಲು ಸಿದ್ಧವಾಗಿದೆ ಕನ್ನಡ ರಥ

ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…

10 hours ago

ಬಸ್‌ನಲ್ಲಿ ಪ್ರಯಾಣ: ಮಹಿಳೆಯರಿಂದ ಶಕ್ತಿಯೋಜನೆಯ ಅಭಿಪ್ರಾಯ ಪಡೆದ ಪುಷ್ಪ ಅಮರನಾಥ್‌

ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…

10 hours ago