BREAKING NEWS

ಲಿಂಗಾಯತರಿಗೆ ಸಿಎಂ ಪಟ್ಟ : ಖರ್ಗೆಗೆ ಶಾಮನೂರು ಪತ್ರ

ಬೆಂಗಳೂರು : ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಭರ್ಜರಿ ಜಯಗಳಿಸಲು ಪ್ರಮುಖ ಪಾತ್ರ ವಹಿಸಿರುವ ಲಿಂಗಾಯತ ಸಮುದಾಯಕ್ಕೆ ಮುಖ್ಯಮಂತ್ರಿ ಸ್ಥಾನ ಹಾಗೂ ಸಚಿವ ಸಂಪುಟದಲ್ಲಿ ಹೆಚ್ಚು ಪ್ರಾತಿನಿಧ್ಯ ನೀಡಬೇಕು ಎಂದು ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷ ನಾಯಕ ಶಾಮನೂರು ಶಿವಶಂಕರಪ್ಪ ಪತ್ರ ಬರೆದು ಕಾಂಗ್ರೆಸ್‌ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಆಗ್ರಹಿಸಿದ್ದಾರೆ.

ಬಿಜೆಪಿಯ ಸಾಂಪ್ರದಾಯಿಕ ಮತದಾರರಾಗಿದ್ದ ಲಿಂಗಾಯತರು ಈ ಬಾರಿ ಕಾಂಗ್ರೆಸ್‌ಗೆ ನಿಷ್ಠೆ ಪ್ರದರ್ಶಿಸಿದ್ದಾರೆ. ಕಾಂಗ್ರೆಸ್‌ನಿಂದ ಸಮುದಾಯಕ್ಕೆ 46 ಕ್ಷೇತ್ರದಲ್ಲಿ ಟಿಕೆಟ್‌ ನೀಡಿದ್ದು ಈ ಪೈಕಿ 34 ಶಾಸಕರು ಆಯ್ಕೆಯಾಗಿ ಶೇ.74 ರಷ್ಟು ಸಾಧನೆಯಾಗಿದೆ. ಸಣ್ಣ ಸಮುದಾಯಗಳ ಅಭ್ಯರ್ಥಿಗಳು 50 ಕ್ಷೇತ್ರಗಳಲ್ಲಿ ಜಯಗಳಿಸಲು ಲಿಂಗಾಯತರು ಪ್ರಮುಖ ಪಾತ್ರ ವಹಿಸಿದ್ದಾರೆ. ಆದ್ದರಿಂದ ಸಮುದಾಯಕ್ಕೆ ಮುಖ್ಯಮಂತ್ರಿ ಸ್ಥಾನ ನೀಡಬೇಕು ಹಾಗೂ ಸಚಿವ ಸಂಪುಟದಲ್ಲಿ ಹೆಚ್ಚು ಪ್ರಾತಿನಿಧ್ಯ ಕಲ್ಪಿಸಬೇಕು ಎಂದು ಒತ್ತಾಯಿಸಿದ್ದಾರೆ.

ಲಿಂಗಾಯತ ಸಮುದಾಯ ಹೆಚ್ಚಿನ ಪ್ರಮಾಣದಲ್ಲಿ ಕಾಂಗ್ರೆಸ್‌ ಬೆಂಬಲಿಸಿದ್ದರಿಂದ ರಾಜ್ಯದಲ್ಲಿ ಪಕ್ಷ 135 ಕ್ಷೇತ್ರದಲ್ಲಿ ಜಯಗಳಿಸಿದೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಪಡೆಯಲು ಸಮುದಾಯದ ಬೆಂಬಲವನ್ನು ಕಾಪಾಡಿಕೊಳ್ಳಬೇಕು. ಆದ್ದರಿಂದ ಲಿಂಗಾಯತ ಸಮುದಾಯಕ್ಕೆ ಮುಖ್ಯಮಂತ್ರಿ ಹುದ್ದೆ ನೀಡಬೇಕು. ಸಂಪುಟದಲ್ಲಿ ಹೆಚ್ಚು ಪ್ರಾತಿನಿಧ್ಯ ನೀಡಬೇಕು ಎಂದು ಅವರು ಆಗ್ರಹಿಸಿದ್ದಾರೆ.

 

lokesh

Recent Posts

ಪಶ್ಚಿಮ ಬಂಗಾಳ | ಮತದಾನದ ಹೊತ್ತಲ್ಲೇ ಕಚ್ಚಾ ಬಾಂಬ್‌ ದಾಳಿ ; ಹಲವರು ಗಂಭೀರ

ಕೊಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಮೊದಲ ಹಂತಕ್ಕೆ ಇಂದು ಮತದಾನ ನಡೆಯುತ್ತಿದೆ. ಈ ಹೊತ್ತಿನಲ್ಲೇ ಆತಂಕಕಾರಿ ಘಟನೆಯೊಂದು…

9 mins ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಏಪ್ರಿಲ್‌ 23 ಗುರುವಾರ

2 hours ago

ತಮಿಳುನಾಡು, ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆ ; ಬಿಗಿ ಭದ್ರತೆಯಲ್ಲಿ ಮತದಾನ ಆರಂಭ

ಬೆಂಗಳೂರು : ಇಂದು ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಲ್ಲಿ ವಿಧಾನಸಭೆ ಚುನಾವಣೆಗೆ ಬೆಳಗ್ಗೆ 7 ಗಂಟೆಯಿಂದ ಮತದಾನ ಆರಂಭವಾಗಿದೆ. ಪಶ್ಚಿಮ…

3 hours ago

ಹುಣಸೂರು: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರ ಬಂಧನ

ಹುಣಸೂರು: ತಾಲ್ಲೂಕಿನ ಬಿಳಿಕೆರೆ ಗ್ರಾಮದ ಕೆರೆಯ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಒಡಿಶಾ…

12 hours ago

ಹನೂರು| ಕೆಸರಿನಲ್ಲಿ ಸಿಲುಕಿ ನಿತ್ರಾಣಗೊಂಡಿದ್ದ ಹೆಣ್ಣಾನೆ ಚಿಕಿತ್ಸೆ ಫಲಿಸದೇ ಸಾವು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ನೀರು ಕುಡಿಯಲು ಬಂದು ಕೆಸರಿನಲ್ಲಿ ಸಿಲುಕಿಕೊಂಡು ನಿತ್ರಾಣಗೊಂಡಿದ್ದ ಹೆಣ್ಣಾನೆ ಚಿಕಿತ್ಸೆಗೆ…

12 hours ago

ಪಶ್ಚಿಮ ಬಂಗಾಳದಲ್ಲಿ ನಾಳೆ ಮೊದಲ ಹಂತದ ಚುನಾವಣೆ

ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಳೆ ಮತದಾನ ನಡೆಯಲಿದೆ. ನಾಳೆ ಉತ್ತರ ಬಂಗಾಳದ ಎಲ್ಲಾ 152…

14 hours ago