ಬೆಂಗಳೂರು : ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಜಯಗಳಿಸಲು ಪ್ರಮುಖ ಪಾತ್ರ ವಹಿಸಿರುವ ಲಿಂಗಾಯತ ಸಮುದಾಯಕ್ಕೆ ಮುಖ್ಯಮಂತ್ರಿ ಸ್ಥಾನ ಹಾಗೂ ಸಚಿವ ಸಂಪುಟದಲ್ಲಿ ಹೆಚ್ಚು ಪ್ರಾತಿನಿಧ್ಯ ನೀಡಬೇಕು ಎಂದು ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷ ನಾಯಕ ಶಾಮನೂರು ಶಿವಶಂಕರಪ್ಪ ಪತ್ರ ಬರೆದು ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಆಗ್ರಹಿಸಿದ್ದಾರೆ.
ಬಿಜೆಪಿಯ ಸಾಂಪ್ರದಾಯಿಕ ಮತದಾರರಾಗಿದ್ದ ಲಿಂಗಾಯತರು ಈ ಬಾರಿ ಕಾಂಗ್ರೆಸ್‌ಗೆ ನಿಷ್ಠೆ ಪ್ರದರ್ಶಿಸಿದ್ದಾರೆ. ಕಾಂಗ್ರೆಸ್‌ನಿಂದ ಸಮುದಾಯಕ್ಕೆ 46 ಕ್ಷೇತ್ರದಲ್ಲಿ ಟಿಕೆಟ್ ನೀಡಿದ್ದು ಈ ಪೈಕಿ 34 ಶಾಸಕರು ಆಯ್ಕೆಯಾಗಿ ಶೇ.74 ರಷ್ಟು ಸಾಧನೆಯಾಗಿದೆ. ಸಣ್ಣ ಸಮುದಾಯಗಳ ಅಭ್ಯರ್ಥಿಗಳು 50 ಕ್ಷೇತ್ರಗಳಲ್ಲಿ ಜಯಗಳಿಸಲು ಲಿಂಗಾಯತರು ಪ್ರಮುಖ ಪಾತ್ರ ವಹಿಸಿದ್ದಾರೆ. ಆದ್ದರಿಂದ ಸಮುದಾಯಕ್ಕೆ ಮುಖ್ಯಮಂತ್ರಿ ಸ್ಥಾನ ನೀಡಬೇಕು ಹಾಗೂ ಸಚಿವ ಸಂಪುಟದಲ್ಲಿ ಹೆಚ್ಚು ಪ್ರಾತಿನಿಧ್ಯ ಕಲ್ಪಿಸಬೇಕು ಎಂದು ಒತ್ತಾಯಿಸಿದ್ದಾರೆ.
ಲಿಂಗಾಯತ ಸಮುದಾಯ ಹೆಚ್ಚಿನ ಪ್ರಮಾಣದಲ್ಲಿ ಕಾಂಗ್ರೆಸ್ ಬೆಂಬಲಿಸಿದ್ದರಿಂದ ರಾಜ್ಯದಲ್ಲಿ ಪಕ್ಷ 135 ಕ್ಷೇತ್ರದಲ್ಲಿ ಜಯಗಳಿಸಿದೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಪಡೆಯಲು ಸಮುದಾಯದ ಬೆಂಬಲವನ್ನು ಕಾಪಾಡಿಕೊಳ್ಳಬೇಕು. ಆದ್ದರಿಂದ ಲಿಂಗಾಯತ ಸಮುದಾಯಕ್ಕೆ ಮುಖ್ಯಮಂತ್ರಿ ಹುದ್ದೆ ನೀಡಬೇಕು. ಸಂಪುಟದಲ್ಲಿ ಹೆಚ್ಚು ಪ್ರಾತಿನಿಧ್ಯ ನೀಡಬೇಕು ಎಂದು ಅವರು ಆಗ್ರಹಿಸಿದ್ದಾರೆ.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…