BREAKING NEWS

ಸಿಎಂ ಆಯ್ಕೆ ಮತ್ತಷ್ಟು ಕಗ್ಗಂಟು : ಡಿಕೆಶಿಯಿಂದ ಇಂದು ಸಂಜೆ ಮತ್ತೆ ಖರ್ಗೆ ರಾಹುಲ್ ಗಾಂಧಿ ಭೇಟಿ

ನವದೆಹಲಿ : ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಸ್ಪಷ್ಟ ಬಹುಮತ ಪಡೆದಿರುವ ಕಾಂಗ್ರೆಸ್ ಗೆ ಮುಂದಿನ ಮುಖ್ಯಮಂತ್ರಿ ಆಯ್ಕೆ ವಿಚಾರ ಮತ್ತಷ್ಟು ಕಗ್ಗಂಟಾಗಿದ್ದು, ಸಿಎಂ ಹುದ್ದೆಗಾಗಿ ಪಟ್ಟು ಹಿಡಿದಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಬುಧವಾರ ಸಂಜೆ ಮತ್ತೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಲಿದ್ದಾರೆ.

ಡಿಕೆ ಶಿವಕುಮಾರ್ ಅವರು ಇಂದು ಮಧ್ಯಾಹ್ನ ಮಲ್ಲಿಕಾರ್ಜುನ ಖರ್ಗೆ ಅವರ ಮನೆಗೆ ತೆರಳಿ, ತಮ್ಮನ್ನೇ ಸಿಎಂ ಮಾಡುವಂತೆ ಪಟ್ಟು ಹಿಡಿದಿದ್ದಾರೆ. ಆದರೆ ಇದಕ್ಕೆ ಖರ್ಗೆ ಅವರು ಒಪ್ಪಿಲ್ಲ. ಹೀಗಾಗಿ ಸಂಜೆ ಮತ್ತೊಮ್ಮೆ ಭೇಟಿ ಮಾಡಲು ಡಿಕೆಶಿ ನಿರ್ಧರಿಸಿದ್ದಾರೆ.

ಖರ್ಗೆ ಭೇಟಿ ಬಳಿಕ ಮಾಧ್ಯಮದವರಿಗೆ ಯಾವುದೇ ಪ್ರತಿಕ್ರಿಯೆ ನೀಡದ ಡಿಕೆ ಶಿವಕುಮಾರ್ ಅವರು ರಾಷ್ಟ್ರ ರಾಜಧಾನಿಯಲ್ಲಿರುವ ತಮ್ಮ ಸಹೋದರ ಮತ್ತು ಪಕ್ಷದ ಸಂಸದ ಡಿ ಕೆ ಸುರೇಶ್ ಅವರ ನಿವಾಸಕ್ಕೆ ತೆರಳಿದ್ದಾರೆ.

ಡಿಕೆ ಶಿವಕುಮಾರ್ ಅವರು ಇಂದು ಸಂಜೆ ಖರ್ಗೆ ಮತ್ತು ರಾಹುಲ್ ಗಾಂಧಿ ಅವರನ್ನು ಭೇಟಿಯಾಗಲಿದ್ದಾರೆ ಎಂದು ಆಪ್ತ ಮೂಲಗಳು ತಿಳಿಸಿವೆ.

lokesh

Recent Posts

ಕುರಟ್ಟಿ ಹೊಸೂರಲ್ಲಿ ಪ್ರಕೃತಿ ವಿಸ್ಮಯ: ಕಹಿ ಬೇವಿನ ಮರದಲ್ಲಿ ಸಿಹಿ ದ್ರಾವಣ ಕಂಡು ಜನರು ಅಚ್ಚರಿ

ಮಹಾದೇಶ್‌ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು  ಹನೂರು: ಕಡು ಕಹಿ ಎಲೆ, ಕಾಂಡ, ಕಾಯಿ ನೀಡುವ ಬೇವಿನ ಮರದಲ್ಲಿ…

11 hours ago

ಕನ್ನಡದಲ್ಲಿ ರೈಲ್ವೆ ಪರೀಕ್ಷೆ ನಡೆಸದಿದ್ದರೆ ಉಗ್ರ ಹೋರಾಟ: ನಾರಾಯಣಗೌಡ ಎಚ್ಚರಿಕೆ

ಬೆಂಗಳೂರು: ರೈಲ್ವೆಯ ಯಾವುದೇ ಪರೀಕ್ಷೆಯಿರಲಿ, ಅದನ್ನು ಕನ್ನಡದಲ್ಲೇ ಕಡ್ಡಾಯವಾಗಿ ನಡೆಸಬೇಕು. ಇಲ್ಲದಿದ್ದರೆ ಉಗ್ರ ಹೋರಾಟ ನಡೆಸಲಾಗುತ್ತದೆ ಎಂದು ಕರ್ನಾಟಕ ರಕ್ಷಣಾ…

11 hours ago

ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆ: ಪರೀಕ್ಷಾ ಕೇಂದ್ರಗಳಿಗೆ ಸಿಇಓ ಭೇಟಿ

ಮಂಡ್ಯ: ಜನವರಿ.27ರಿಂದ ಪ್ರಾರಂಭವಾಗಿರುವ ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆಯ ಹಿನ್ನೆಲೆಯಲ್ಲಿ ಇಂದು ತಾಲ್ಲೂಕಿನ ಸೂನಗನಹಳ್ಳಿ ಮತ್ತು ತಗ್ಗಹಳ್ಳಿ ಗ್ರಾಮದ ಸರ್ಕಾರಿ…

11 hours ago

ಲೋಕಸಭೆಯಲ್ಲಿ ಸ್ಪೀಕರ್‌ ಮೇಲೆ ಪೇಪರ್‌ ತೂರಿದ್ದ 8 ಮಂದಿ ಸಂಸದರು ಅಮಾನತು

ನವದೆಹಲಿ: ಸಂಸತ್ತಿನ ಬಜೆಟ್‌ ಅಧಿವೇಶನದ ವೇಳೆ ಲೋಕಸಭೆಯಲ್ಲಿ ಉಂಟಾದ ಭಾರೀ ಗದ್ದಲ ಮತ್ತು ಸ್ಪೀಕರ್‌ ಪೀಠದ ಕಡೆಗೆ ಪೇಪರ್‌ ಹರಿದು…

11 hours ago

ನರೇಗಾ ಮರುಸ್ಥಾಪನೆಗೆ ಸಿಎಂ ಸಿದ್ದರಾಮಯ್ಯ ಪಟ್ಟು: ವಿಧಾನಸಭೆಯಲ್ಲಿ ಕೇಂದ್ರದ ವಿರುದ್ಧ ನಿರ್ಣಯ ಮಂಡನೆ

ಬೆಂಗಳೂರು: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹೊಸ ಉದ್ಯೋಗ ಯೋಜನೆಯನ್ನು ವಿರೋಧಿಸಿ ಹಾಗೂ ಹಳೆಯ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ…

12 hours ago

ಹನೂರು| ಆಂದೋಲನ ವರದಿಯಿಂದ ಎಚ್ಚೆತ್ತ ಅಧಿಕಾರಿಗಳು: ಗ್ರಾಮಗಳಿಗೆ ಭೇಟಿ

ಮಹಾದೇಶ್‌ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾರ್ಟಳ್ಳಿ ಹಾಗೂ ಸುಳ್ವಾಡಿ…

12 hours ago