BREAKING NEWS

ಸಿಎಂ ಅವರ ಪುತ್ರವ್ಯಾಮೋಹ ಧೃತರಾಷ್ಟ್ರನನ್ನೇ ಮೀರಿಸುವಂತಿದೆ: ಬಿಜೆಪಿ ವ್ಯಂಗ್ಯ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರವ್ಯಾಮೋಹ ಧೃತರಾಷ್ಟ್ರನನ್ನೇ ಮೀರಿಸುವಂತಿದೆ ಎಂದು ಬಿಜೆಪಿ ಟ್ವೀಟ್ ಮಾಡುವ ಮೂಲಕ ಮುಖ್ಯಮಂತ್ರಿಗಳು ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದೆ.

ಯತೀಂದ್ರ ಸಿದ್ದರಾಮಯ್ಯರನ್ನು ಶ್ಯಾಡೋ ಸಿಎಂ ಎಂದು ಬಿಜೆಪಿ ಕರೆದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪುತ್ರ ಯತೀಂದ್ರ ಸಿದ್ದರಾಮಯ್ಯನವರಿಗೆ ಸದ್ದಿಲ್ಲದೇ ಸಂವಿಧಾನಿಕ ಹುದ್ದೆಯನ್ನು ನೀಡಲಾಗಿದೆ ಎಂಬ ವಿಚಾರವಾಗಿ ಟೀಕಾ ಪ್ರಹಾರ ನಡೆಸಿದೆ.

ಸಿಎಂ ಸಿದ್ದರಾಮಯ್ಯ ರವರ ಪುತ್ರವ್ಯಾಮೋಹ, ಧೃತರಾಷ್ಟ್ರನನ್ನೇ ಮೀರಿಸುವಂತಿದೆ. ಸರ್ಕಾರದ ಆಡಳಿತದಲ್ಲಿ ಹಾಗೂ ವರ್ಗಾವಣೆ ದಂಧೆಯಲ್ಲಿ ಇನ್ನಿಲ್ಲದಂತೆ ಹಸ್ತಕ್ಷೇಪ ಮಾಡುವ ಆರೋಪ ಹೊತ್ತಿರುವ ಶ್ಯಾಡೋ ಸಿಎಂ ಡಾ. ಯತೀಂದ್ರರವರಿಗೆ ಈಗ ಸಾಂವಿಧಾನಿಕ ಹುದ್ದೆಯನ್ನು ದಯಪಾಲಿಸಲಾಗಿದೆ, ಅದು ಗುಟ್ಟಾಗಿ! ಎಂದು ಟೀಕೆ ಮಾಡಿದೆ.

ತಮ್ಮದು ಪಾರದರ್ಶಕ ಸರ್ಕಾರ ಎಂದು ಬೊಗಳೆ ಬಿಡುವ ಸಿದ್ದರಾಮಯ್ಯರವರು, ತಮ್ಮ ಪುತ್ರನಿಗೆ ನೀಡಿದ ಹುದ್ದೆಯ ನೇಮಕಾತಿ ಆದೇಶವನ್ನು ಇಷ್ಟು ದಿನ ಗುಟ್ಟಾಗಿರಿಸಿದ್ದರು ಎಂದು ಬಿಜೆಪಿ ವಾಗ್ದಾಳಿಯನ್ನು ನಡೆಸಿದೆ.

andolanait

Recent Posts

ತಿರುವಿನಲ್ಲಿ ಉರುಳಿಬಿದ್ದ ಲಾರಿ: ತಪ್ಪಿದ ಭಾರೀ ಅನಾಹುತ

ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…

3 hours ago

ದುಬಾರೆ ಆನೆ ಶಿಬಿರದಲ್ಲಿ19 ವರ್ಷದ ಗಂಡಾನೆ ಸಾವು

ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…

4 hours ago

ಪ್ರೀತಿಗೆ ನಿರಾಕರಣೆ: ಮೈಸೂರಿನಲ್ಲಿ ಬೆಚ್ಚಿಬೀಳಿಸಿದ ಒನ್‌ ಸೈಡ್‌ ಲವ್‌ ಕೃತ್ಯ

ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…

6 hours ago

ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣ: ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಅಧ್ಯಕ್ಷ ಶಿವಕುಮಾರ್ ಅರೆಸ್ಟ್​!

ಮಂಡ್ಯ: ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…

7 hours ago

ಭಾರೀ ಮಳೆಗೆ ರೈತರ ಬೆಳೆ ನಾಶ: ಲಕ್ಷಾಂತರ ರೂ. ನಷ್ಟ, ಮನೆ ಗೋಡೆ ಕುಸಿತ

ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…

8 hours ago

ಸ್ಕೂಲ್ ಬಸ್‌ ಹರಿದು ಒಂದೂವರೆ ವರ್ಷದ ಮಗು ಸಾವು

ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…

8 hours ago