ನವದೆಹಲಿ: ಛತ್ತೀಸ್‌ಗಢದಲ್ಲಿ ಕಲ್ಲಿದ್ದಲು ನಿಕ್ಷೇಪ ಹಂಚಿಕೆ ಅಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ರಾಜ್ಯಸಭಾ ಮಾಜಿ ಸಂಸದ ವಿಜಯ್ ದರ್ದಾ ಮತ್ತು ಮಾಜಿ ಕಲ್ಲಿದ್ದಲು ಕಾರ್ಯದರ್ಶಿ ಎಚ್‌ಸಿ ಗುಪ್ತಾ ಸೇರಿದಂತೆ ಏಳು ಆರೋಪಿಗಳು ತಪ್ಪಿತಸ್ಥರು ಎಂದು ದೆಹಲಿ ನ್ಯಾಯಾಲಯ ಗುರುವಾರ ತೀರ್ಪು ನೀಡಿದೆ.
ಪ್ರಕರಣದ ವಿಚಾರಣೆ ನಡೆಸಿದ ವಿಶೇಷ ನ್ಯಾಯಾಧೀಶ ಸಂಜಯ್ ಬನ್ಸಾಲ್ ಅವರು, ಆರೋಪಿಗಳಾದ ದರ್ದಾ ಹಾಗೂ ಪುತ್ರ ದೇವೆಂದರ್ ದರ್ದಾ, ಇಬ್ಬರು ಹಿರಿಯ ಅಧಿಕಾರಿಗಳಾದ ಕೆ ಎಸ್ ಕ್ರೋಫಾ ಮತ್ತು ಕೆ ಸಿ ಸಮ್ರಿಯಾ, ಜೆಎಲ್‌ಡಿ ಯವತ್ಮಲ್ ಎನರ್ಜಿ ಪ್ರೈವೇಟ್ ಲಿಮಿಟೆಡ್ ಮತ್ತು ಅದರ ನಿರ್ದೇಶಕ ಮನೋಜ್ ಕುಮಾರ್ ಜಯಸ್ವಾಲ್ ಅವರನ್ನೂ ದೋಷಿಗಳೆಂದು ತೀರ್ಪು ನೀಡಿದ್ದಾರೆ.
ನ್ಯಾಯಾಧೀಶ ಸಂಜಯ್ ಬನ್ಸಾಲ್ ಅವರು ಶಿಕ್ಷೆಯ ಪ್ರಮಾಣವನ್ನು ಜುಲೈ 18ಕ್ಕೆ ಕಾಯ್ದಿರಿಸಿದ್ದಾರೆ.
ಸಿಬಿಐ ತನ್ನ ಪ್ರಕರಣವನ್ನು ಎಲ್ಲಾ ಅನುಮಾನಗಳನ್ನು ಮೀರಿ ಆರೋಪ ಸಾಬೀತುಪಡಿಸಲು ಸಮರ್ಥವಾಗಿದೆ ಎಂದು ಹಿರಿಯ ಪಬ್ಲಿಕ್ ಪ್ರಾಸಿಕ್ಯೂಟರ್ ಎ ಪಿ ಸಿಂಗ್ ಸಲ್ಲಿಸಿದ ವಾದವನ್ನು ನ್ಯಾಯಾಲಯ ಒಪ್ಪಿಕೊಂಡಿದೆ.
ನವೆಂಬರ್ 20, 2014 ರಂದು, ಪ್ರಕರಣದಲ್ಲಿ ಸಿಬಿಐ ಸಲ್ಲಿಸಿದ್ದ ಮುಕ್ತಾಯ ವರದಿಯನ್ನು ಸ್ವೀಕರಿಸಲು ನಿರಾಕರಿಸಿದ್ದ ಕೋರ್ಟ್, ಮಾಜಿ ಸಂಸದ ದರ್ದಾ ಅವರು ಅಂದಿನ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ಬರೆದ ಪತ್ರದಲ್ಲಿ “ತಪ್ಪು ಮಾಹಿತಿ” ನೀಡಿದ್ದಾರೆ ಎಂದು ಹೇಳಿ, ಹೆಚ್ಚಿನ ತನಿಖೆ ನಡೆಸುವಂತೆ ಸೂಚಿಸಿತ್ತು.
ಹನೂರು : ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ಮಹಿಳೆಯೋರ್ವಳನ್ನು ಮಲೆ ಮಹದೇಶ್ವರ ಬೆಟ್ಟ ಪೊಲೀಸರು ಬಂಧಿಸಿರುವ ಘಟನೆ ಜರುಗಿದೆ. ಹನೂರು…
ಹೊಸದಿಲ್ಲಿ : ದೇಶದ 140 ಕೋಟಿ ಜನರ ಮತದಾನದ ಹಕ್ಕು ಉಳಿಸಲು ನಾವು ಮತಕಳ್ಳತನದ ವಿರುದ್ಧ ಹೋರಾಟ ಮಾಡುತ್ತಿದ್ದೇವೆ. ಇದರಲ್ಲಿ…
ಚಿಕ್ಕಮಗಳೂರು : ಅದೊಂದು ಬಹುಕಾಲದ ಪ್ರೀತಿ, ಪ್ರೀತಿ ಮಾಡಿ, ಪ್ರೇಯಸಿಯಿಂದ ಹಣ ಪಡೆದು, ಇದೀಗ ಬೇರೊಂದು ಮದುವೆಗೆ ಸಿದ್ಧವಾಗಿದ್ದ ಹುಡಗ…
ಬಂಡೀಪುರ, ನಾಗರಹೊಳೆಯಲ್ಲಿ ಹೊಸ ವರ್ಷ ಆಚರಿಸಲು ಬಯಸಿದವರಿಗೆ ನಿರಾಸೆ ರೆಸಾರ್ಟ್, ಹೋಟೆಲ್ ಮಾಲೀಕರಿಂದ ಸಫಾರಿ ಪುನಾರಂಭಕ್ಕೆ ಒತ್ತಡ? ಮೈಸೂರು :…
ಎಚ್.ಡಿ.ಕೋಟೆ : ತಾಲ್ಲೂಕಿನ ಕ್ಯಾತನಹಳ್ಳಿ, ಆಲನಹಳ್ಳಿ, ಜಿ. ಬಿ. ಸರಗೂರು ವ್ಯಾಪ್ತಿಯ ಐದು ಕೆರೆಗಳಿಗೆ ನೀರು ತುಂಬಿಸಲು ಅಧಿಕಾರಿಗಳು ನಿರ್ಲಕ್ಷಿ…
ಮೈಸೂರಿನ ರಾಮಕೃಷ್ಣನಗರದಲ್ಲಿರುವ ಸುಯೋಗ್ ಆಸ್ಪತ್ರೆ ಎದುರಿನ ರಸ್ತೆಯು ಸಂಪೂರ್ಣ ಹದಗೆಟ್ಟಿದೆ. ಈ ರಸ್ತೆಯಲ್ಲಿ ಎಲ್ಲೆಡೆ ದೊಡ್ಡ ದೊಡ್ಡ ಗುಂಡಿಗಳು ನಿರ್ಮಾಣವಾಗಿದ್ದು,…