BREAKING NEWS

ಕಲ್ಲಿದ್ದಲು ಹಗರಣ: ಮಾಜಿ ಸಂಸದ ವಿಜಯ್ ದರ್ದಾ, ಮಾಜಿ ಕಾರ್ಯದರ್ಶಿ ಎಚ್‌ಸಿ ಗುಪ್ತಾ ದೋಷಿ

ನವದೆಹಲಿ: ಛತ್ತೀಸ್‌ಗಢದಲ್ಲಿ ಕಲ್ಲಿದ್ದಲು ನಿಕ್ಷೇಪ ಹಂಚಿಕೆ ಅಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ರಾಜ್ಯಸಭಾ ಮಾಜಿ ಸಂಸದ ವಿಜಯ್ ದರ್ದಾ ಮತ್ತು ಮಾಜಿ ಕಲ್ಲಿದ್ದಲು ಕಾರ್ಯದರ್ಶಿ ಎಚ್‌ಸಿ ಗುಪ್ತಾ ಸೇರಿದಂತೆ ಏಳು ಆರೋಪಿಗಳು ತಪ್ಪಿತಸ್ಥರು ಎಂದು ದೆಹಲಿ ನ್ಯಾಯಾಲಯ ಗುರುವಾರ ತೀರ್ಪು ನೀಡಿದೆ.

ಪ್ರಕರಣದ ವಿಚಾರಣೆ ನಡೆಸಿದ ವಿಶೇಷ ನ್ಯಾಯಾಧೀಶ ಸಂಜಯ್ ಬನ್ಸಾಲ್ ಅವರು, ಆರೋಪಿಗಳಾದ ದರ್ದಾ ಹಾಗೂ ಪುತ್ರ ದೇವೆಂದರ್ ದರ್ದಾ, ಇಬ್ಬರು ಹಿರಿಯ ಅಧಿಕಾರಿಗಳಾದ ಕೆ ಎಸ್ ಕ್ರೋಫಾ ಮತ್ತು ಕೆ ಸಿ ಸಮ್ರಿಯಾ, ಜೆಎಲ್‌ಡಿ ಯವತ್ಮಲ್ ಎನರ್ಜಿ ಪ್ರೈವೇಟ್ ಲಿಮಿಟೆಡ್ ಮತ್ತು ಅದರ ನಿರ್ದೇಶಕ ಮನೋಜ್ ಕುಮಾರ್ ಜಯಸ್ವಾಲ್ ಅವರನ್ನೂ ದೋಷಿಗಳೆಂದು ತೀರ್ಪು ನೀಡಿದ್ದಾರೆ.

ನ್ಯಾಯಾಧೀಶ ಸಂಜಯ್ ಬನ್ಸಾಲ್ ಅವರು ಶಿಕ್ಷೆಯ ಪ್ರಮಾಣವನ್ನು ಜುಲೈ 18ಕ್ಕೆ ಕಾಯ್ದಿರಿಸಿದ್ದಾರೆ.

ಸಿಬಿಐ ತನ್ನ ಪ್ರಕರಣವನ್ನು ಎಲ್ಲಾ ಅನುಮಾನಗಳನ್ನು ಮೀರಿ ಆರೋಪ ಸಾಬೀತುಪಡಿಸಲು ಸಮರ್ಥವಾಗಿದೆ ಎಂದು ಹಿರಿಯ ಪಬ್ಲಿಕ್ ಪ್ರಾಸಿಕ್ಯೂಟರ್ ಎ ಪಿ ಸಿಂಗ್ ಸಲ್ಲಿಸಿದ ವಾದವನ್ನು ನ್ಯಾಯಾಲಯ ಒಪ್ಪಿಕೊಂಡಿದೆ.

ನವೆಂಬರ್ 20, 2014 ರಂದು, ಪ್ರಕರಣದಲ್ಲಿ ಸಿಬಿಐ ಸಲ್ಲಿಸಿದ್ದ ಮುಕ್ತಾಯ ವರದಿಯನ್ನು ಸ್ವೀಕರಿಸಲು ನಿರಾಕರಿಸಿದ್ದ ಕೋರ್ಟ್, ಮಾಜಿ ಸಂಸದ ದರ್ದಾ ಅವರು ಅಂದಿನ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ಬರೆದ ಪತ್ರದಲ್ಲಿ “ತಪ್ಪು ಮಾಹಿತಿ” ನೀಡಿದ್ದಾರೆ ಎಂದು ಹೇಳಿ, ಹೆಚ್ಚಿನ ತನಿಖೆ ನಡೆಸುವಂತೆ ಸೂಚಿಸಿತ್ತು.

andolanait

Recent Posts

ಭಾರೀ ಮಳೆಗೆ ಕೊಚ್ಚಿ ಹೋದ ಚೆಕ್ ಡ್ಯಾಂ: 15 ಅಡಿಗೂ ಹೆಚ್ಚು ಪ್ರವಾಹ

ಹನೂರು: ತಾಲ್ಲೂಕಿನ ಶಾಗ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಲಾಜರ್ ದೊಡ್ಡಿ ಗ್ರಾಮದಲ್ಲಿ ಒಡಿಪಿ ಸಂಸ್ಥೆಯಿಂದ ನಿರ್ಮಾಣ ಮಾಡಿದ್ದ ಚೆಕ್ ಡ್ಯಾಂ…

9 hours ago

ಭಾರೀ ಮಳೆಗೆ ಮನೆ ಕುಸಿತ: ಲಕ್ಷಾಂತರ ರೂ. ನಷ್ಟ

ಹನೂರು: ತಾಲ್ಲೂಕಿನ ಎಲ್ಲೇಮಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವೈಶಂಪಾಳ್ಯ ಗ್ರಾಮದಲ್ಲಿ ಭಾನುವಾರ ರಾತ್ರಿ ಸುರಿದ ಭಾರೀ ಮಳೆಗೆ ಮನೆ ಸಂಪೂರ್ಣ…

9 hours ago

ಧರ್ಮಸ್ಥಳ ಸೌಜನ್ಯ ಪ್ರಕರಣ: ಮರು ತನಿಖೆಗೆ ಸುಪ್ರೀಂಕೋರ್ಟ್ ಮಹತ್ವದ ಆದೇಶ

ನವದೆಹಲಿ: ಧರ್ಮಸ್ಥಳ ಸೌಜನ್ಯ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ನವದೆಹಲಿಯಲ್ಲಿ ನಡೆದ ವಿಚಾರಣೆಯಲ್ಲಿ, ಹಲವು…

10 hours ago

ಕಾಡಾನೆ ದಾಳಿ: ವ್ಯಕ್ತಿ ಸಾವು

ಸರಗೂರು: ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸರಗೂರು ತಾಲ್ಲೂಕಿನ ಕಾಡಗೆರೆ ಗ್ರಾಮದ…

13 hours ago

ಗಣೇಶ ವಿಸರ್ಜನೆ ಮೆರವಣಿಗೆ ರಾಜಕೀಯ ದಾಳವಾಗದಿರಲಿ…

ಬ್ರಿಟೀಷರ ವಿರುದ್ಧ ಸಮಾಜವನ್ನು ಅದರಲ್ಲೂ ಯುವಜನರನ್ನು ಸಂಘಟಿಸಿ, ದೇಶಭಕ್ತಿಯನ್ನು ಜಾಗೃತಿಗೊಳಿಸುವ ಮೂಲಕ ಅವರನ್ನು ಸ್ವಾತಂತ್ರ್ಯಸಂಗ್ರಾಮಕ್ಕೆ ಸಜ್ಜುಗೊಳಿಸುವ ಉದ್ದೇಶದಿಂದ ಆರಂಭವಾದ ಸಾರ್ವಜನಿಕ…

16 hours ago

ಕಾಂಗ್ರೆಸ್‌ನಲ್ಲೀಗ ಆತಂಕದ ಕಾರ್ಮೋಡ…

ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕಳೆದ ಮೂರು ವರ್ಷಗಳಿಂದ ಅಧಿಕಾರ ಹಂಚಿಕೆಯ ಸಂಘರ್ಷದಲ್ಲಿ ಮುಳುಗಿದ್ದ ಆಡಳಿತಾರೂಢ ಕಾಂಗ್ರೆಸ್…

16 hours ago