ಮುಂಬೈ : ಮುಂಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾದಕವಸ್ತು ಕಳ್ಳಸಾಗಣೆ ಜಾಲ ವಿಫಲಗೊಳಿಸಿರುವ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‍ಐ) ಪ್ರತ್ಯೇಕ ಘಟನೆಗಳಲ್ಲಿ ಇಬ್ಬರು ವಿದೇಶಿ ಪ್ರಜೆಗಳು ಸೇರಿದಂತೆ ನಾಲ್ವರನ್ನು ಬಂಧಿಸಿ ಮೂಲಕ 70 ಕೋಟಿ ರೂಪಾಯಿ ಮೌಲ್ಯದ 7 ಕೆಜಿ ಕೊಕೇನ್ ವಶಪಡಿಸಿಕೊಂಡಿದೆ.
ಆರೋಪಿಗಳಲ್ಲಿ ಒಬ್ಬನಿಂದ ಐದು ಗುಂಡುಗಳೊಂದಿಗೆ ಬಂದೂಕನ್ನುವಶಪಡಿಸಿಕೊಂಡಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಕಳೆದೆರಡು ದಿನಗಳಲ್ಲಿ ನಾಲ್ಕು ಘಟನೆಗಳು ವರದಿಯಾಗಿವೆ. ಬಂಧಿತ ನಾಲ್ವರಲ್ಲಿ ಓರ್ವ ಮಹಿಳೆಯೂ ಸೇರಿದ್ದಾಳೆ ಎಂದು ಅವರು ಹೇಳಿದ್ದಾರೆ.
ಮಾದಕ ಕೊಕೇನ್ ಅನ್ನು ತಮ್ಮ ಟ್ರಾಲಿ ಬ್ಯಾಗ್‍ಗಳ ಸುಳ್ಳು ಕುಳಿಗಳಲ್ಲಿ ಬಚ್ಚಿಟ್ಟು ಕಳ್ಳಸಾಗಣೆ ಮಾಡಲು ಪ್ರಯತ್ನಿಸುತ್ತಿದ್ದ ಇಬ್ಬರನ್ನು ಬಂಸಿದೆ ಎಂದು ಅವರು ಹೇಳಿದರು.ಇದಲ್ಲದೆ ಪ್ರತ್ಯೇಕ ಘಟನೆಯಲ್ಲಿ ಇಬ್ಬರು (ಕೊಕೇನ್) ಡ್ರಗ್ ಕ್ಯಾಪ್ಸುಲ್‍ಗಳನ್ನು ನುಂಗಿರುವುದು ಕಂಡುಬಂದಿದೆ. ಅವರನ್ನು ಸರ್ಕಾರಿ ಜೆಜೆ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಕ್ಯಾಪ್ಸೂಲ್‍ಗಳನ್ನು ಹೊರತೆಗೆಯಲಾಗಿದೆ ಎಂದು ನೈರೋಬಿಯಿಂದ ಅಕ್ರಮವಾಗಿ ಸಾಗಿಸಲಾಗುತ್ತಿತ್ತು ಎಂದು ಮೂಲಗಳು ತಿಳಿಸಿವೆ.
ಮುಂಬೈ ಘಟಕದ ಡಿಆರ್‍ಐ ಅಧಿಕಾರಿಗಳು ನೆರೆಯ ಪಾಲ್ಘರ್ ಜಿಲ್ಲೆಯ ವಿರಾರ್‍ನಲ್ಲಿ ಮನೆಯೊಂದರ ಮೇಲೂ ದಾಳಿ ಮಾಡಿ ಮಾದಕ ದ್ರವ್ಯಗಳನ್ನು (ಕೊಕೇನ್) ವಶಪಡಿಸಿಕೊಂಡಿದ್ದಾರೆ ಎಂದು ತಿಳಿಸಿದ್ದಾರೆ,
ಬೆಂಗಳೂರು: ಇಂಧನ ಇಲಾಖೆಯಲ್ಲಿ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಹಸ್ತಕ್ಷೇಪಕ್ಕೆ ಬೇಸತ್ತು ಇಂಧನ ಸಚಿವ ಕೆ.ಜೆ.ಜಾರ್ಜ್ ರಾಜೀನಾಮೆ ನೀಡಿದ್ದರು ಎಂಬ…
ಬೆಂಗಳೂರು: ವಿಕಲಚೇತನರಿಗಾಗಿಯೇ ಮುಂದಿನ ಮೂರು ತಿಂಗಳಲ್ಲಿ ನಗರದ ಕಂಠೀರವ ಕ್ರೀಡಾಂಗಣದಲ್ಲಿ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗುವುದು ಎಂದು ಸಚಿವ ಡಾ.ಶರಣಪ್ರಕಾಶ್…
ಕೊಡಗು: ಜಿಲ್ಲೆಯಲ್ಲಿ ಆನೆ–ಮಾನವ ಸಂಘರ್ಷ ಮತ್ತೆ ಜೀವ ಬಲಿ ಪಡೆದಿದೆ. ಸಿದ್ದಾಪುರ ಸಮೀಪದ ಗೌರಿ ಬೆಟ್ಟ ಬಳಿ ಕಾಡಾನೆ ದಾಳಿಗೆ…
ಮಡಿಕೇರಿ: ವಿಮಾನ ದುರಂತದಲ್ಲಿ ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಮತಾ ಬ್ಯಾನರ್ಜಿ ಕತೆ ಕಟ್ಟುತ್ತಿದ್ದಾರೆ ಎಂದು…
ಮಡಿಕೇರಿ: ವಿರಾಜಪೇಟೆ ತಾಲ್ಲೂಕಿನ ಸಿದ್ದಾಪುರ ಸಮೀಪದ ಮಾಲ್ದಾರೆ ವ್ಯಾಪ್ತಿಯಲ್ಲಿ ಬೆಳಿಗ್ಗೆ ಶಾಲಾ ಬಸ್ಸನ್ನು ಒಂಟಿ ಸಲಗ ಅಟ್ಟಿಸಿಕೊಂಡು ಬಂದ ಘಟನೆ…
ಚಾಮರಾಜನಗರ: ಸುಳ್ವಾಡಿ ವಿಷಪ್ರಸಾದ ದುರಂತ ಪ್ರಕರಣದ ಆರೋಪಿ ಇಮ್ಮಡಿ ಮಹದೇವಸ್ವಾಮಿಗೆ ಮಲೆ ಮಹದೇಶ್ವರ ಬೆಟ್ಟಕ್ಕೆ ಪ್ರವೇಶ ನಿರ್ಬಂಧಿಸಲಾಗಿದೆ. ಈ ಕುರಿತು…