BREAKING NEWS

ಮುಂಬೈ ವಿಮಾನ ನಿಲ್ದಾಣದಲ್ಲಿ 70 ಕೋಟಿ ಮೌಲ್ಯದ ಕೊಕೇನ್ ವಶ

ಮುಂಬೈ : ಮುಂಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾದಕವಸ್ತು ಕಳ್ಳಸಾಗಣೆ ಜಾಲ ವಿಫಲಗೊಳಿಸಿರುವ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‍ಐ) ಪ್ರತ್ಯೇಕ ಘಟನೆಗಳಲ್ಲಿ ಇಬ್ಬರು ವಿದೇಶಿ ಪ್ರಜೆಗಳು ಸೇರಿದಂತೆ ನಾಲ್ವರನ್ನು ಬಂಧಿಸಿ ಮೂಲಕ 70 ಕೋಟಿ ರೂಪಾಯಿ ಮೌಲ್ಯದ 7 ಕೆಜಿ ಕೊಕೇನ್ ವಶಪಡಿಸಿಕೊಂಡಿದೆ.

ಆರೋಪಿಗಳಲ್ಲಿ ಒಬ್ಬನಿಂದ ಐದು ಗುಂಡುಗಳೊಂದಿಗೆ ಬಂದೂಕನ್ನುವಶಪಡಿಸಿಕೊಂಡಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಕಳೆದೆರಡು ದಿನಗಳಲ್ಲಿ ನಾಲ್ಕು ಘಟನೆಗಳು ವರದಿಯಾಗಿವೆ. ಬಂಧಿತ ನಾಲ್ವರಲ್ಲಿ ಓರ್ವ ಮಹಿಳೆಯೂ ಸೇರಿದ್ದಾಳೆ ಎಂದು ಅವರು ಹೇಳಿದ್ದಾರೆ.

ಮಾದಕ ಕೊಕೇನ್ ಅನ್ನು ತಮ್ಮ ಟ್ರಾಲಿ ಬ್ಯಾಗ್‍ಗಳ ಸುಳ್ಳು ಕುಳಿಗಳಲ್ಲಿ ಬಚ್ಚಿಟ್ಟು ಕಳ್ಳಸಾಗಣೆ ಮಾಡಲು ಪ್ರಯತ್ನಿಸುತ್ತಿದ್ದ ಇಬ್ಬರನ್ನು ಬಂಸಿದೆ ಎಂದು ಅವರು ಹೇಳಿದರು.ಇದಲ್ಲದೆ ಪ್ರತ್ಯೇಕ ಘಟನೆಯಲ್ಲಿ ಇಬ್ಬರು (ಕೊಕೇನ್) ಡ್ರಗ್ ಕ್ಯಾಪ್ಸುಲ್‍ಗಳನ್ನು ನುಂಗಿರುವುದು ಕಂಡುಬಂದಿದೆ. ಅವರನ್ನು ಸರ್ಕಾರಿ ಜೆಜೆ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಕ್ಯಾಪ್ಸೂಲ್‍ಗಳನ್ನು ಹೊರತೆಗೆಯಲಾಗಿದೆ ಎಂದು ನೈರೋಬಿಯಿಂದ ಅಕ್ರಮವಾಗಿ ಸಾಗಿಸಲಾಗುತ್ತಿತ್ತು ಎಂದು ಮೂಲಗಳು ತಿಳಿಸಿವೆ.

ಮುಂಬೈ ಘಟಕದ ಡಿಆರ್‍ಐ ಅಧಿಕಾರಿಗಳು ನೆರೆಯ ಪಾಲ್ಘರ್ ಜಿಲ್ಲೆಯ ವಿರಾರ್‍ನಲ್ಲಿ ಮನೆಯೊಂದರ ಮೇಲೂ ದಾಳಿ ಮಾಡಿ ಮಾದಕ ದ್ರವ್ಯಗಳನ್ನು (ಕೊಕೇನ್) ವಶಪಡಿಸಿಕೊಂಡಿದ್ದಾರೆ ಎಂದು ತಿಳಿಸಿದ್ದಾರೆ,

andolanait

Recent Posts

ಪೊಲೀಸರ ಮೇಲೆ ಹಲ್ಲೆ: 20 ಜನರ ವಿರುದ್ಧ ಕೇಸ್‌ ದಾಖಲು

ನವದೆಹಲಿ: ಮುಖ್ಯ ಚುನಾವಾಣಾ ಆಯುಕ್ತ ಜ್ಞಾನೇಶ್‌ ಕುಮಾರ್‌ ರಾಜೀನಾಮೆಗೆ ಆಗ್ರಹಿಸಿ ಸಿಜೆಪಿ ನಿನ್ನೆ ಬೃಹತ್‌ ಪ್ರತಿಭಟನೆಗೆ ಕರೆ ನೀಡಿತ್ತು. ಈ…

6 hours ago

ದೇವಿ ಕೃಪೆ ಜನರ ಮೇಲಿರಲಿ, ಜನರ ಕೃಪೆ ನಮ್ಮ ಸರ್ಕಾರದ ಮೇಲಿರಲಿ: ಸಿಎಂ ಡಿಕೆಶಿ

ಮೈಸೂರು:  ಮೈಸೂರು ದಸರಾ ಮಹೋತ್ಸವಕ್ಕೆ ಅದ್ಧೂರಿ ಚಾಲನೆ ಸಿಕ್ಕಿದೆ. ಈ ಹಿನ್ನೆಲೆಯಲ್ಲಿ ಮಾತನಾಡಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌, ದೇವಿಯ ಕೃಪೆ…

8 hours ago

ದಸರಾ ಉದ್ಘಾಟಿಸುವಷ್ಟು ದೊಡ್ಡವನು ನಾನಲ್ಲ: ಗವಿಸಿದ್ದೇಶ್ವರ ಶ್ರೀ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನಾ ಕಾರ್ಯಕ್ರಮದಲ್ಲಿ ಕೊಪ್ಪಳದ ಗವಿಮಠದ ಶ್ರೀ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ವಿನಮ್ರ ಮಾತುಗಳನ್ನಾಡಿದ್ದಾರೆ. “ದಸರಾ…

8 hours ago

ಮನಸೆಳೆವ ಫಲ ಪುಷ್ಪ ಪ್ರದರ್ಶನ

ಪ್ರಕೃತಿಯೊಂದಿಗೆ ನಂಟನ್ನು ನೆನಪಿಸುವ ಒಂದು ಸುಂದರ ಪಯಣ. 15 ಎಕರೆ ವಿಸ್ತೀರ್ಣ, 70 ಸಸ್ಯಶಾಸ್ತ್ರೀಯ ಜಾತಿಯ 327ಕ್ಕೂ ಹೆಚ್ಚಿನ ವೈವಿಧ್ಯಮಯ…

9 hours ago

ಮೈಸೂರು ದಸರಾ ಮಹೋತ್ಸವಕ್ಕೆ ಅಧಿಕೃತ ಚಾಲನೆ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಅದ್ಧೂರಿ ಚಾಲನೆ ಸಿಕ್ಕಿದೆ. ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಡೆಯುತ್ತಿರುವ 416ನೇ ನಾಡಹಬ್ಬ ದಸರಾ…

10 hours ago

ಓದುಗರ ಪತ್ರ: ಬಳಸಿದ ಅಡುಗೆ ಎಣ್ಣೆ: ಯೋಜನೆ ಪ್ರಶಂಸನೀಯ

ಬಳಸಿದ ಅಡುಗೆ ಎಣ್ಣೆಯನ್ನು ಸರಕಾರವೇ ಸಂಗ್ರಹಿಸಿ ಜೈವಿಕ ಇಂಧನವಾಗಿ (ಬಯೋಡೀಸೆಲ) ಪರಿವರ್ತಿಸುವ ಯೋಜನೆ ಪ್ರಶಂಸನೀಯ. ಪುನರಾವರ್ತಿತ ಎಣ್ಣೆ ಬಳಕೆಯಿಂದ ಹೊರಹೊಮ್ಮುವ…

11 hours ago