ಚಿತ್ರದುರ್ಗ : ಚಿತ್ರದುರ್ಗದ ಚಳ್ಳಕೆರೆ ತಾಲೂಕು ಕೇಂದ್ರದಿಂದ ಹಿರಿಯೂರಿಗೆ ಸಾಗುವ, ಬೀದರ್-ಶ್ರೀರಂಗಪಟ್ಟಣ ರಸ್ತೆಯಲ್ಲಿ ಕೆಎಸ್ ಆರ್ ಟಿಸಿ ಹಾಗೂ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ ಐದು ಮಂದಿ ಸಾವನ್ನಪ್ಪಿದ್ದಾರೆ.
ಮೃತರನ್ನು ಬೆಂಗಳೂರು ಮೂಲದ ಪಾರ್ವತಮ್ಮ(45), ಮಸ್ಕಿಯ ರಮೇಶ್(40), ರಾಯಚೂರಿನ ಮಾಬಮ್ಮ, ಮಾನ್ವಿಯ ನರಸಣ್ಣ ಎಂದು ಗುರುತಿಸಲಾಗಿದೆ. ಇನ್ನೂ ಒಬ್ಬರ ಗುರುತು ಪತ್ತೆಯಾಗಿಲ್ಲ.
ಗಾಯಗೊಂಡ ಎಂಟು ಜನರಲ್ಲಿ ಐವರನ್ನು ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ಮೂವರಿಗೆ ಚಳ್ಳಕೆರೆ ಜನರಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಪ್ರಯಾಣಿಕರ ಪ್ರಕಾರ, ಕೆಎಸ್ಆರ್‌ಟಿಸಿ ಚಾಲಕ ಅತಿವೇಗ ಮತ್ತು ನಿರ್ಲಕ್ಷತನದಿಂದ ಬಸ್ಸನ್ನು ಚಲಾಯಿಸುತ್ತಿದ್ದ ಎಂದು ತಿಳಿದು ಬಂದಿದೆ. ನಿಧಾನವಾಗಿ ಚಲಿಸುತ್ತಿದ್ದ ಲಾರಿ ಹಿಂದಿಕ್ಕಲು ಯತ್ನಿಸಿದ ವೇಳೆ ಅಪಘಾತ ಸಂಭವಿಸಿದೆ, ಬಸ್ಸಿನ ಎಡಭಾಗ ಸಂಪೂರ್ಣ ಜಖಂಗೊಂಡಿದೆ.
ಡಿಕ್ಕಿಯ ರಭಸಕ್ಕೆ ಬಸ್ ನ ಮುಂದಿನ ಸೀಟುಗಳಲ್ಲಿ ಕುಳಿತಿದ್ದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆ ಸಂಬಂಧ ಹಿರಿಯೂರು ಪೊಲೀಸರು ದೂರು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಮೈಸೂರು : ಮೈಸೂರು ಅರಮನೆ ಮುಂಭಾಗ ನಿನ್ನೆ ಸಂಜೆ ನಡೆದಿದ್ದ ಹೀಲಿಯಂ ಸ್ಫೋಟ ಪ್ರಕರಣದಲ್ಲಿ ಸಾವಿನ ಸಂಖ್ಯೆ ಇದೀಗ ಮೂರಕ್ಕೆ…
ಮೈಸೂರು : ಹುಬ್ಬಳ್ಳಿಯಲ್ಲಿ ನಡೆದ ಮರ್ಯಾದಗೇಡು ಹತ್ಯೆ ವಿರೋಧಿಸಿ ಮತ್ತು ಮರ್ಯಾದೆಗೇಡು ಹತ್ಯೆ ತಡೆಗೆ ಕಠಿಣ ಕಾಯಿದೆ ರೂಪಿಸಬೇಕು ಎಂದು…
ಮೈಸೂರು : ಇಲ್ಲಿನ ಕೆ.ಆರ್. ಆಸ್ಪತ್ರೆಯ ಶೆಡ್ ನಲ್ಲಿ ಬೆಂಕಿ ಕಾಣಿಸಿಕೊಂಡು ಆಸ್ಪತ್ರೆಯ ಹಾಸಿಗೆಗಳು ಬೆಂಕಿಗಾಹುತಿಯಾಗಿವೆ. ಆಸ್ಪತ್ರೆಯ ಚೆಲುವಾಂಬ ವಾರ್ಡ್…
ಬೆಂಗಳೂರು : ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುರಿತಂತೆ ಪ್ರಶ್ನೆಗಳು ಉದ್ಭವಿಸಿರುವ ಸಂದರ್ಭದಲ್ಲಿ, ಹೊಸ ವರ್ಷಾಚರಣೆಯ ವೇಳೆ ಯಾವುದೇ ಅವಘಡ ನಡೆಯದಂತೆ…
ಮೈಸೂರು : ಮೈಸೂರಿನ ವಿಶ್ವ ವಿಖ್ಯಾತ ಅರಮನೆ ಸಮೀಪ ಸಂಭವಿಸಿದ್ದ ಹೀಲಿಯಂ ಗ್ಯಾಸ್ ಸಿಲೆಂಡರ್ ಸ್ಫೋಟ ದುರಂತದಲ್ಲಿ ಸಾವಿನ ಸಂಖ್ಯೆ…
ತಿರುವನಂತಪುರಂ : ಬಿಜೆಪಿಯಿಂದ ಮೊದಲ ಬಾರಿಗೆ ತಿರುವನಂತಪುರಂ ನಗರ ಮೇಯರ್ ಆಗಿ ಆಯ್ಕೆಯಾಗುವ ಮೂಲಕ ವಿ.ವಿ.ರಾಜೇಶ್ ಇತಿಹಾಸ ನಿರ್ಮಿಸಿದ್ದಾರೆ. 49…