ಸಿ.ಟಿ.ರವಿ ವಿರುದ್ಧ ಕಾಂಗ್ರೆಸ್‌ನಿಂದ ದೂರು ದಾಖಲು

ಮೈಸೂರು: ಸ್ವಾತಂತ್ರ್ಯ ಸೇನಾನಿ ಹಾಗೂ ಭಾರತದ ಪ್ರಥಮ ಪ್ರಧಾನ ಮಂತ್ರಿ ಜವಾಹರ ಲಾಲ್ ನೆಹರು ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರ ವಿರುದ್ಧ ಮೈಸೂರು ಜಿಲ್ಲಾ ಕಾಂಗ್ರೆಸ್ ಕಾನೂನು ವಿಭಾಗದಿಂದ ದೇವರಾಜ ಪೊಲೀಸ್ ಠಾಣೆಯಲ್ಲಿ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗಿದೆ.

ಮೈಸೂರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಡಾ.ಬಿ.ಜೆ.ವಿಜಯಕುಮಾರ್, ರಾಜ್ಯ ಮಹಿಳಾ ಆಯೋಗದ ಮಾಜಿ ಅಧ್ಯಕ್ಷರಾದ ಮಂಜುಳಾ ಮಾನಸ, ಜಿಲ್ಲಾ ಕಾನೂನು ವಿಭಾಗದ ಅಧ್ಯಕ್ಷರಾದ ವಕೀಲ ಸುರೇಶ್ ಪಾಳ್ಯ, ಡಿಸಿಸಿ ಉಪಾಧ್ಯಕ್ಷರಾದ ಹೆಡತಲೆ ಮಂಜುನಾಥ್, ವಕೀಲ ವೃತ್ತಿಯ ಕಾಂಗ್ರೆಸ್ ಪದಾಧಿಕಾರಿಗಳಾದ ಶಿವಪ್ರಸಾದ್, ತಿಮ್ಮಯ್ಯ, ಚರಣರಾಜ್, ಗಂಗಾಧರ್, ಮುನಿಯಪ್ಪ, ಮನೋನ್ಮಣಿ ನಿಯೋಗ ಠಾಣೆಗೆ ತೆರಳಿ ಮೊಕದ್ದಮೆ ದಾಖಲಿಸಿದೆ.

× Chat with us