BREAKING NEWS

IPL Retention 2024: ರಾಜಸ್ಥಾನ್‌ ರಾಯಲ್ಸ್‌ ಉಳಿಸಿಕೊಂಡ, ಕೈಬಿಟ್ಟ ಆಟಗಾರರ ಸಂಪೂರ್ಣ ಪಟ್ಟಿ

ಮುಂದಿನ ವರ್ಷ ಮಾರ್ಚ್‌ ತಿಂಗಳಿನಲ್ಲಿ ಆರಂಭವಾಗಲಿರುವ 17ನೇ ಆವೃತ್ತಿಯ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯ ಸಲುವಾಗಿ ಡಿಸೆಂಬರ್‌ 19ರಂದು ದುಬೈನಲ್ಲಿ ಮಿನಿ ಹರಾಜು ಪ್ರಕ್ರಿಯೆಯನ್ನು ಏರ್ಪಡಿಸಲಾಗಿದೆ. ಇನ್ನು ಎಲ್ಲಾ ಫ್ರಾಂಚೈಸಿಗಳು ಯಾವ ಆಟಗಾರರನ್ನು ಉಳಿಸಿಕೊಳ್ಳುತ್ತವೆ ಹಾಗೂ ಯಾವ ಆಟಗಾರರನ್ನು ಬಿಡುಗಡೆಗೊಳಿಸುತ್ತೆ ಎಂಬುದನ್ನು ಪ್ರಕಟಿಸಲು ಇಂದು ( ನವೆಂಬರ್‌ 26 ) ಸಂಜೆ 4 ಗಂಟೆಯೇ ಡೆಡ್‌ಲೈನ್‌ ಆಗಿತ್ತು.

ಈ ಸಮಯದ ಗಡುವು ಈಗ ಮುಕ್ತಾಯವಾಗಿದ್ದು, ಯಾವ ತಂಡಗಳು ಯಾವ ಆಟಗಾರರನ್ನು ರಿಟೈನ್‌ ಮಾಡಿಕೊಂಡಿವೆ ಹಾಗೂ ಯಾವ ಆಟಗಾರರನ್ನು ರಿಲೀಸ್‌ ಮಾಡಿವೆ ಎಂಬ ಮಾಹಿತಿ ಹೊರಬಿದ್ದಿದೆ. ರಾಜಸ್ಥಾನ್‌ ರಾಯಲ್ಸ್‌ ಫ್ರಾಂಚೈಸಿ ಯಾವೆಲ್ಲಾ ಆಟಗಾರರಿಗೆ ಸ್ಥಾನ ನೀಡಿದೆ ಹಾಗೂ ಯಾವೆಲ್ಲಾ ಆಟಗಾರರಿಗೆ ಕೊಕ್‌ ಕೊಟ್ಟಿದೆ ಎಂಬ ಮಾಹಿತಿ ಈ ಕೆಳಕಂಡಂತಿದೆ..

ಉಳಿಸಿಕೊಂಡ ಆಟಗಾರರು : ಸಂಜು ಸ್ಯಾಮ್ಸನ್‌ ( ನಾಯಕ ), ಶಿಮ್ರಾನ್‌ ಹೆಟ್ಮಾಯರ್‌, ಜೋಸ್‌ ಬಟ್ಲರ್‌, ಯಶಸ್ವಿ ಜೈಸ್ವಾಲ್‌, ಧ್ರುವ್‌ ಜುರೆಲ್‌, ರಿಯಾನ್‌ ಪರಾಗ್‌, ಡೊನೊವೆನ್‌ ಫೆರೈರಾ, ಕುನಾಲ್‌ ರಾಥೋರ್‌, ರವಿಚಂದ್ರನ್‌ ಅಶ್ವಿನ್‌, ಕುಲ್‌ದೀಪ್‌ ಸೇನ್‌, ನವ್‌ದೀಪ್‌ ಸೈನಿ, ಪ್ರಸಿದ್ಧ್‌ ಕೃಷ್ಣ, ಟ್ರೆಂಟ್‌ ಬೌಲ್ಟ್‌, ಯುಜ್ವೇಂದ್ರ ಚಹಲ್‌, ಆಡಂ ಜಂಪಾ ಹಾಗೂ ಆವೇಶ್‌ ಖಾನ್‌. ( ಅವೇಶ್‌ ಖಾನ್ ಲಕ್ನೋ ಸೂಪರ್‌ಜೈಂಟ್ಸ್‌ ತಂಡದಿಂದ ವಿನಿಮಯಗೊಂಡಿದ್ದಾರೆ.)‌

ಬಿಡುಗಡೆಗೊಂಡ ಆಟಗಾರರು: ಜೋ ರೂಟ್‌, ಅಬ್ದುಲ್‌ ಬಸಿತ್‌, ಜೇಸನ್‌ ಹೋಲ್ಡರ್‌, ಆಕಾಶ್‌ ವಸಿಷ್ಠ್‌, ಕುಲ್‌ದೀಪ್‌ ಯಾದವ್‌, ಒಬೆಡ್‌ ಮೆಕ್‌ಗಾಯ್‌, ಮುರುಗನ್‌ ಅಶ್ವಿನ್‌, ಕೆಸಿ ಕಾರಿಯಪ್ಪ ಹಾಗೂ ಕೆಎಂ ಆಸಿಫ್‌.
ಜೋ ರೂಟ್‌ ಮುಂಬರುವ ಇಂಡಿಯನ್‌ ಪ್ರೀಮಿಯರ್‌ ಲೀಗ್‌ನಲ್ಲಿ ಭಾಗವಹಿಸದಿರಲು ನಿರ್ಧರಿಸಿದ್ದಾರೆ. ಹೀಗಾಗಿ ಅವರು ಹರಾಜಿನಲ್ಲಿ ಭಾಗವಹಿಸದೇ ಉಳಿಯಲಿದ್ದಾರೆ.

andolana

Recent Posts

ರಾಮನಗರ: ರೈಲ್ವೆ ಹಳಿ ಮೇಲೆ ಗ್ಯಾಸ್‌ ಸಿಲಿಂಡರ್‌, ಸ್ಟವ್‌ ಪತ್ತೆ

ರಾಮನಗರ: ರೈಲ್ವೆ ಹಳಿ ಮೇಲೆ ಗ್ಯಾಸ್‌ ಸಿಲಿಂಡರ್‌ ಪತ್ತೆಯಾಗಿ ಕೆಲಕಾಲ ಆತಂಕ ಸೃಷ್ಟಿಯಾಗಿರುವ ಘಟನೆ ಮದ್ದೂರು-ಚನ್ನಪಟ್ಟಣ ಮಾರ್ಗಮಧ್ಯೆಯ ಶೆಟ್ಟಿಹಳ್ಳಿ ರೈಲ್ವೆ…

5 mins ago

ತಮಿಳುನಾಡು ಚುನಾವಣೆ: ಬಿಜೆಪಿಯಿಂದ ಪ್ರಣಾಳಿಕೆ ಬಿಡುಗಡೆ

ಚನ್ನೈ: ತಮಿಳುನಾಡಿನ ಜನರ ಕಲ್ಯಾಣಕ್ಕಾಗಿ, ಬಿಜೆಪಿ ಮಹಿಳಾ ಮನೆ ಮುಖ್ಯಸ್ಥರಿಗೆ ತಿಂಗಳಿಗೆ 2,000 ರೂ., ವಾರ್ಷಿಕವಾಗಿ ಮೂರು ಉಚಿತ ಎಲ್‍ಪಿಜಿ…

30 mins ago

ಮೈಸೂರು: ವಿನೂತನ ರೀತಿಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ 135ನೇ ಜಯಂತಿ ಆಚರಣೆ

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಇಂದು ಬಾಬಾ ಸಾಹೇಬ್‌ ಡಾ.ಬಿ.ಆರ್.‌ಅಂಬೇಡ್ಕರ್‌ ಅವರು 135ನೇ ಜಯಂತಿಯನ್ನು ವಿನೂತನ ರೀತಿಯಲ್ಲಿ ಆಚರಣೆ ಮಾಡಲಾಯಿತು.…

1 hour ago

ನಾಳೆ ಮಂಡ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ

ಮಂಡ್ಯ: ಶ್ರೀಕ್ಷೇತ್ರ ಆದಿಚುಂಚನಗಿರಿಯಲ್ಲಿ 100 ಕೋಟಿಗೂ ಅಧಿಕ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಶ್ರೀಗುರು ಭೈರವೈಕ್ಯ ಮಂದಿರ ನಾಳೆ ಲೋಕಾರ್ಪಣೆಗೆ ಸಜ್ಜಾಗಿದೆ. ಪ್ರಧಾನಿ…

2 hours ago

ದೇಶದ ಹಲವು ರಾಜ್ಯಗಳಲ್ಲಿ ಒಂದು ವಾರ ಹೆಚ್ಚಲಿದೆ ತಾಪಮಾನ

ನವದೆಹಲಿ: ದೇಶಾದ್ಯಂತ ರಣ ಬಿಸಿಲ ಝಳ ಹೆಚ್ಚುತ್ತಿದ್ದು, ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಒಂದು ವಾರಗಳ ಕಾಲ ತಾಪಮಾನ ಹೆಚ್ಚಾಗಲಿದೆ…

3 hours ago

ಗುರುವಾರ ಅಮೇರಿಕಾ-ಇರಾನ್‌ ಮಧ್ಯೆ 2ನೇ ಹಂತದ ಮಾತುಕತೆ

ಇಸ್ಲಾಮಾಬಾದ್:‌ ಮಧ್ಯಪ್ರಾಚ್ಯ ಹಾಗೂ ಕೊಲ್ಲಿ ರಾಷ್ಟ್ರಗಳಲ್ಲಿ ನಡೆಯುತ್ತಿರುವ ಯುದ್ಧವನ್ನು ನಿಲ್ಲಿಸಲು ಇರಾನ್‌ ಮತ್ತು ಅಮೇರಿಕಾ ನಡುವೆ 2ನೇ ಸುತ್ತಿನ ಮಾತುಕತೆಗೆ…

3 hours ago