Mysore
21
overcast clouds

Social Media

ಭಾನುವಾರ, 16 ಆಗಸ್ಟ್ 2026
Light
Dark

ಜೂ.30 ರೊಳಗೆ ಕಡ್ಡಯವಾಗಿ ಆಸ್ತಿ ವಿವರಗಳನ್ನು ಲೋಕಾಯುಕ್ತಕ್ಕೆ ಸಲ್ಲಿಸಬೇಕು: ನ್ಯಾ. ಬಿ.ಎಸ್‌.ಪಾಟೀಲ್‌

ಬೆಂಗಳೂರು: ನೂತನವಾಗಿ ವಿಧಾಸಭೆಗೆ ಆಯ್ಕೆಯಾಗಿರುವ ಶಾಸಕರು ಇದೇ ತಿಂಗಳ 30 ರೊಳಗೆ ಕಡ್ಡಯವಾಗಿ ತಮ್ಮ ಆಸ್ತೀ ವಿವರಗಳನ್ನು ಲೋಕಾಯುಕ್ತಕ್ಕೆ ಸಲ್ಲಿಸಬೇಕು ಎಂದು ಮುಖ್ಯ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಆದೇಶ ನೀಡಿ 15 ದಿನ ಕಳೆದರೂ ಶಾಸಕರು ಆಸ್ತಿ ವಿವರ ಸಲ್ಲಿಸಿಲ್ಲ. ಹೀಗಾಗಿ ಲೋಕಾಯುಕ್ತಕ್ಕೆ ಎಲ್ಲಾ ಪಕ್ಷದ ಶಾಸಕರ ಆಸ್ತಿ ವಿವರ ಪಡೆದು ಸಲ್ಲಿಸುವಂತೆ ಸರ್ಕಾರದ ಮುಖ್ಯಕಾರ್ಯದರ್ಶಿ ವಂದಿತಾ ಶರ್ಮಾ ಅವರಿಗೆ ಮೌಖಿಕ ಸೂಚನೆ ನೀಡಿದ್ದಾರೆ.

ಕಳೆದ ಬಾರಿ ಆಸ್ತಿ ವಿವರ ಸಲ್ಲಿಸಿದ್ದೇವೆಂದು ಸುಮ್ಮನಿರುವಂತಿಲ್ಲ. ಪುನರ್ ಆಯ್ಕೆಯಾದ ಶಾಸಕರು ಮತ್ತೊಮ್ಮೆ ಆಸ್ತಿ ವಿವರ ಸಲ್ಲಿಸಬೇಕು. ಮೊದಲ ಬಾರಿ ಆಯ್ಕೆಯಾದ ಶಾಸಕರು ಕೂಡ ಆಸ್ತಿ ವಿವರ ಸಲ್ಲಿಸಬೇಕು. ಒಂದು ವೇಳೆ ಜೂ.30ರೊಳಗೆ ಶಾಸಕರು ತಮ್ಮ ಆಸ್ತಿ ವಿವರ ಸಲ್ಲಿಸದಿದ್ದರೆ ಶಿಸ್ತು ಕ್ರಮಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಈ ಬಾರಿ ದಾಖಲೆಗಳ ಸಮೇತ ಮತ್ತೆ ಆಸ್ತಿ ವಿವರ ಸಲ್ಲಿಸಬೇಕು. ಕಳೆದ ಬಾರಿ ಶಾಸಕರು ಸರಿಯಾದ ಮಾದರಿಯಲ್ಲಿ ಆಸ್ತಿ ವಿವರ ಸಲ್ಲಿಸಿಲ್ಲ. ಈ ಹಿನ್ನೆಲೆಯಲ್ಲಿ ಈ ಬಾರಿ ಸಮಸ್ಯೆ ಆಗಬಾರದೆಂದು ಶಾಸಕರ ಕಡ್ಡಾಯ ಆಸ್ತಿ ವಿವರ ಪಡೆಯಲು ಲೋಕಾಯುಕ್ತ ಸೆಕ್ರೆಟರಿಗೆ ಸೂಚಿಸಿದ್ದಾರೆ.

ಜನಪ್ರತಿನಿಧಿಗಳು ಕಡ್ಡಾಯವಾಗಿ ತಮ್ಮ ತಮ್ಮ ಆಸ್ತಿ ವಿವರಗಳನ್ನು ಲೋಕಾಯುಕ್ತ ಇಲಾಖೆಗೆ ನೀಡಲೇ ಬೇಕಾಗಿರುವುದು ಕಾನೂನು. ಆದರೆ ಆಸ್ತಿ ವಿವರ ನೀಡುವಂತೆ ಲೋಕಾಯುಕ್ತ ಇಲಾಖೆ ಜನಪ್ರತಿನಿಧಿಗಳಿಗೆ ಹಲವು ಬಾರಿ ನೋಟೀಸ್ ನೀಡಿದ್ದರೂ, ಜನಪ್ರತಿನಿಧಿಗಳು ಅದರ ಬಗ್ಗೆ ತಲೆಕೆಡಿಸಿಕೊಳ್ಳದ ಸಾಕಷ್ಟು ನಿದರ್ಶನಗಳಿವೆ.

ಕಾಯಿದೆ ಏನು ಹೇಳುತ್ತದೆ.?
ಕರ್ನಾಟಕ ಲೋಕಾಯುಕ್ತ ಕಾಯಿದೆ-1984 ಕಲಂ 22 ಜೊತೆಗೆ 7(1) ಪ್ರಕಾರ, ‘ಸಾರ್ವಜನಿಕ ಸೇವಕ’ರಾಗಿರುವವರು ಕಾಯಿದೆ ಜಾರಿಯಾದ 3 ತಿಂಗಳಲ್ಲಿ ಮತ್ತು ಪ್ರತಿ ವರ್ಷ ಜೂನ್ 30ರ ಒಳಗಾಗಿ ನಿಗದಿತ ನಮೂನೆಯಲ್ಲಿ ತಮ್ಮ ಮತ್ತು ತಮ್ಮ ಕುಟುಂಬದ ಆಸ್ತಿ ವಿವರವನ್ನು ಲೋಕಾಯುಕ್ತಕ್ಕೆ ಸಲ್ಲಿಸಬೇಕು.

ಸಾರ್ವಜನಿಕ ಸೇವಕ ಎಂದರೆ ಮುಖ್ಯಮಂತ್ರಿ, ಸಚಿವರು, ಶಾಸಕರು, ಸರಕಾರಿ ನೌಕರರು, ರಾಜ್ಯ ಸರಕಾರದಿಂದ ಸ್ಥಾಪಿತವಾದ ಪ್ರಾಧಿಕಾರ, ನಿಗಮ, ಸಹಕಾರ ಸೊಸೈಟಿ, ವಿಶ್ವವಿದ್ಯಾಲಯ, ಸರಕಾರದ ಕಂಪನಿ, ಸಮಿತಿ, ಮಂಡಳಿ ಸದಸ್ಯ, ಅಧ್ಯಕ್ಷ, ಕಾರ್ಪೊರೇಷನ್, ಮುನಿಸಿಪಾಲ್ಟಿ, ಪಂಚಾಯತ್‍ನ ಸದಸ್ಯರು ಮತ್ತು ಅಧ್ಯಕ್ಷರು ಸೇರುತ್ತಾರೆ.

ಕರ್ನಾಟಕ ಲೋಕಾಯುಕ್ತ ಕಾಯಿದೆ 1984ರ ಕಲಂ 22(1), ಕಲಂ 7ರ ಉಪಕಲಂ (1)ರಂತೆ ಸರಕಾರಿ ನೌಕರನಲ್ಲದ ಪ್ರತಿಯೊಬ್ಬ ಸಾರ್ವಜನಿಕರ ನೌಕರ ಈ ಕಾಯಿದೆಯಂತೆ, ಈ ಅಧಿನಿಯಮ ಜಾರಿಗೆ ಬಂದ ಮೂರು ತಿಂಗಳೊಳಗೆ ಮತ್ತು ಜೂನ್‍ಗಿಂತ ಮುಂಚಿತವಾಗಿ ಪ್ರತಿ ವರ್ಷವೂ ಪ್ರತಿ ವರ್ಷ ತನ್ನ ಮತ್ತು ಕುಟುಂಬದ ಸದಸ್ಯರ ಆಸ್ತಿ ವಿವರಗಳನ್ನು ನಿಗದಿತ ನಮೂನೆಯಲ್ಲಿ ಲೋಕಾಯುಕ್ತರಿಗೆ ಸಲ್ಲಿಸಬೇಕೆಂಬ ನಿಯಮವಿದೆ. ಅದು ಕಡ್ಡಾಯ ಕೂಡ.

ಒಂದು ವೇಳೆ ಆಸ್ತಿ ವಿವರ ಸಲ್ಲಿಸದಿದ್ದಲ್ಲಿ ಸಾರ್ವಜನಿಕ ಸೇವಕರಿಗೆ ಸಂಬಂಧಿಸಿದಂತೆ ಲೋಕಾಯುಕ್ತ ಸಕ್ಷಮ ಪ್ರಾಧಿಕಾರ (ರಾಜ್ಯಪಾಲರು) ವರದಿ ಸಲ್ಲಿಸಬೇಕು. ಅಂತಹ ಶಾಸಕರ ಹೆಸರುಗಳನ್ನು ರಾಜ್ಯದಾದ್ಯಂತ ಪ್ರಸರಣ ಹೊಂದಿರುವ ಮೂರು ದಿನಪತ್ರಿಕೆಗಳಲ್ಲಿ ಪ್ರಕಟಿಸಲು ಕಾಯ್ದೆಯಲ್ಲಿ ಅವಕಾಶವಿದೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!