ರಾಷ್ಟ್ರಪತಿ ರಾಮನಾಥ ಕೋವಿಂದ್‌ ಆರೋಗ್ಯ ಸ್ಥಿರ

ಹೊಸದಿಲ್ಲಿ: ಎದೆನೋವು ಸಮಸ್ಯೆಯಿಂದ ಶುಕ್ರವಾರ ಆಸ್ಪತ್ರೆಗೆ ದಾಖಲಾಗಿದ್ದ ರಾಷ್ಟ್ರಪತಿ ರಾಮನಾಥ ಕೋವಿಂದ್‌ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಸೇನಾ ಆಸ್ಪತ್ರೆ ಮೂಲಗಳು ತಿಳಿಸಿವೆ.

ʻರಾಷ್ಟ್ರಪತಿ ರಾಮನಾಥ ಕೋವಿಂದ್‌ ಅವರನ್ನು ತೀವ್ರ ನಿಗಾ ಘಟಕದಲ್ಲಿ ಇರಿಸಲಾಗಿದೆ. ಅವರ ಆರೋಗ್ಯ ಸ್ಥಿರವಾಗಿದೆ’ ಎಂದು ಸೇನಾ ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ.

ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಏಮ್ಸ್‌ಗೆ ದಾಖಲಿಸಲಾಗುವುದು ಎಂದು ಕೂಡ ಮಾಹಿತಿ ನೀಡಿದ್ದಾರೆ.

× Chat with us