ಬೆಂಗಳೂರು: ವರ್ಗಾವಣೆ ದಂಧೆಯಲ್ಲಿ ಸಾಕಷ್ಟು ಭ್ರಷ್ಟಾಚಾರ ನಡೆಯುತ್ತಿದೆ ಎಂದು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಪದೇ ಪದೇ ಆರೋಪಿಸುತ್ತಲೇ ಇದ್ದಾರೆ. ಎಚ್‌ಡಿಕೆ ಆರೋಪಕ್ಕೆ ಬಿಜೆಪಿ ಕೂಡ ಧ್ವನಿಗೂಡಿಸಿದೆ.
ಈ ನಡುವೆಯೇ ಮಾಜಿ ಸಚಿವ ಬಸವರಾಜ ರಾಯರೆಡ್ಡಿ ಅವರು ಕೊಪ್ಪಳ ಜಿಲ್ಲೆಯ 25ಕ್ಕೂ ಹೆಚ್ಚು ಪೊಲೀಸರನ್ನು ವರ್ಗಾವಣೆ ಮಾಡುವಂತೆ ಕೋರಿ ಐಜಿಪಿಗೆ ಪತ್ರ ಬರೆದಿದ್ದಾರೆ.
ವರ್ಗಾವಣೆಯಾಗಬೇಕಾದ ಪೊಲೀಸ್ ಅಧಿಕಾರಿಗಳ ಹೆಸರಿನ ಮುಂದೆ ವರ್ಗಾಯಿಸಬೇಕಾದ ಸ್ಥಳವನ್ನು ಕೂಡ ನಮೂದಿಸಿರುವುದು ವರ್ಗಾವಣೆ ದಂಧೆಯ ಅನುಮಾನಕ್ಕೆ ಕಾರಣವಾಗಿದೆ.
ಬಳ್ಳಾರಿ ವಲಯದ ಪೊಲೀಸ್ ಮಹಾ ನಿರೀಕ್ಷಕ ಲೋಕೇಶ್ ಕುಮಾರ್ ಅವರಿಗೆ ಪತ್ರ ಬರೆದಿರುವ ಯಲಬುರ್ಗಾ ಶಾಸಕ ಬಸವರಾಜ ರಾಯರೆಡ್ಡಿ ನಡೆ ಮೇಲೆ ಪ್ರತಿಪಕ್ಷದ ನಾಯಕರು ಕಿಡಿಕಾರಿದ್ದಾರೆ. ರಾಯರೆಡ್ಡಿ ಬರೆದ ಪತ್ರ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ಸಾಮೂಹಿಕ ವರ್ಗಾವಣೆ ಮಾಡಿಸುವುದಕ್ಕೆ ಇವರ‍್ಯಾರು ಎಂಬ ಪ್ರಶ್ನೆಗಳು ಕೇಳಿಬರುತ್ತಿವೆ.
ಬಸವರಾಜ ರಾಯರೆಡ್ಡಿ ಅವರ ಹೆಸರಿನ ಲೆಟರ್ ಹೆಡ್‌ನಲ್ಲಿಯೇ ಪತ್ರ ಬರೆಯಲಾಗಿದ್ದು, ಕೊಪ್ಪಳ ಜಿಲ್ಲೆಯ 25 ಪೊಲೀಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲು ಮನವಿ ಮಾಡಿದ್ದಾರೆ. ಅದರಲ್ಲೂ ತಮ್ಮ ಕ್ಷೇತ್ರ ಯಲಬುರ್ಗಾ ವ್ಯಾಪ್ತಿಯ ಕುಕನೂರು ಮತ್ತು ಯಲಬುರ್ಗಾ ಪೊಲೀಸ್ ಠಾಣೆಗಳಿಗೆ ಸೇರಿದ ಹೆಚ್ಚಿನ ಪೊಲೀಸರನ್ನು ವರ್ಗಾವಣೆ ಮಾಡಲು ಮನವಿ ಮಾಡಿದ್ದಾರೆ. ಜೊತೆಗೆ ಕೊಪ್ಪಳ, ಗಂಗಾವತಿ ಹಾಗೂ ಕುಷ್ಟಗಿ ತಾಲೂಕುಗಳ ಪೊಲೀಸರನ್ನು ಕೂಡ ವರ್ಗಾವಣೆ ಮಾಡಬೇಕೆಂದು ಪತ್ರದಲ್ಲಿ ಹೇಳಿದ್ದಾರೆ.
ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಅವರು ಕಾಂಗ್ರೆಸ್ ಸರ್ಕಾರದ ವಿರುದ್ಧ ವರ್ಗಾವಣೆ ದಂಧೆ ಹಾಗೂ ಕಾಸಿಗಾಗಿ ಪೋಸ್ಟ್ ಎಂಬ ಆರೋಪವನ್ನು ಮಾಡುತ್ತಾ ಬಂದಿದ್ದಾರೆ. ಪದೇ ಪದೇ ವೈಎಸ್‌ಟಿ ಟ್ಯಾಕ್ಸ್ ಬಗ್ಗೆಯೂ ಪುನರುಚ್ಛರಿಸುತ್ತಿದ್ದಾರೆ. ಈ ವೇಳೆ ಬಸವರಾಜ ರಾಯರೆಡ್ಡಿ ಅವರ ಪತ್ರ ವಿಪಕ್ಷ ನಾಯಕರಿಗೆ ಪ್ರಮುಖ ಅಸ್ತ್ರ ಸಿಕ್ಕಂತಾಗಿದೆ.
ದೂರ: ಮೈಸೂರು ತಾಲ್ಲೂಕಿನ ಜಯಪುರ ಹೋಬಳಿಯ ದೂರ ಗ್ರಾಮಕ್ಕೆ ಖ್ಯಾತ ನಟ, ನಿರ್ದೇಶಕ ಪ್ರಭುದೇವ ಶನಿವಾರ ಆಗಮಿಸಿದ್ದರು. ಅವರು ಮೊದಲು…
ರಿಯಾಧ್: ಸೌದಿ ಅರಾಮ್ಕೊ ತೈಲ ಕಂಪನಿಗೆ ಸೇರಿದ ಹೆಲಿಕಾಪ್ಟರ್ ಅಪಘಾತಕ್ಕೀಡಾಗಿ ಕನಿಷ್ಠ 14 ಮಂದಿ ಸಾವನ್ನಪ್ಪಿದ್ದಾರೆ. ಸೌದಿ ಅರೇಬಿಯಾದ ರಾಸ್…
ಟಿ.ನರಸೀಪುರ: ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತಾಲ್ಲೂಕಿನ ಕೆಂಪಯ್ಯನಹುಂಡಿ ಗ್ರಾಮಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ…
ಮೈಸೂರು: ನಗರದ ಪ್ರಮುಖ ಎರಡು ಹೋಟೆಲ್‌ಗಳನ್ನು ಬಾಂಬ್ ಮೂಲಕ ಸ್ಛೋಟಿಸುವುದಾಗಿ ಇ-ಮೇಲ್ ಮೂಲಕ ವ್ಯಕ್ತಿಯೊಬ್ಬ ಬೆದರಿಕೆ ಒಡ್ಡಿದ್ದು, ಕೆಲಕಾಲ ಆತಂಕ…
ಹನೂರು: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಯುವತಿಯೊಬ್ಬರಿಗೆ ಹಾವು ಕಚ್ಚಿದ ಪರಿಣಾಮ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಅಜ್ಜೀಪುರ ಗ್ರಾಮದಲ್ಲಿ ನಡೆದಿದೆ.…
ಸರಗೂರು: ಮೈಸೂರು ಜಿಲ್ಲೆಯಲ್ಲಿ ಮತ್ತೆ ಹುಲಿ ಉಪಟಳ ಹೆಚ್ಚಾಗಿದ್ದು, ಹುಲಿ ದಾಳಿಗೆ ಕರುವೊಂದು ಬಲಿಯಾಗಿರುವ ಘಟನೆ ಸರಗೂರು ತಾಲ್ಲೂಕಿನ ಹೆಗ್ಗನೂರು…