Mysore
18
broken clouds

Social Media

ಸೋಮವಾರ, 23 ಡಿಸೆಂಬರ್ 2024
Light
Dark

ಕ್ರಿಮಿನಲ್ ಕೇಸ್ ಮುಗಿಯುವವರೆಗೆ ಜನಾರ್ದನ ರೆಡ್ಡಿ ಆಸ್ತಿ ಜಪ್ತಿ ಮಾಡಿ : ಸಿಬಿಐ ವಿಶೇಷ ಕೋರ್ಟ್ ಆದೇಶ

ಬೆಂಗಳೂರು : ಕ್ರಿಮಿನಲ್ ಕೇಸ್ ಮುಗಿಯುವವರೆಗೆ ಶಾಸಕ ಜನಾರ್ದನ ರೆಡ್ಡಿ ಮತ್ತು ಪತ್ನಿ ಲಕ್ಷ್ಮೀ ಅರುಣಾ ರೆಡ್ಡಿಗೆ ಸೇರಿದ ಆಸ್ತಿ ಜಪ್ತಿ ಮಾಡುವಂತೆ ಸಿಬಿಐ ವಿಶೇಷ ಕೋರ್ಟ್​ ಆದೇಶ ಹೊರಡಿಸಿದೆ.

ಜನಾರ್ದನ ರೆಡ್ಡಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಕೇಸ್ ಮುಗಿಯುವವರೆಗೆ ಒಟ್ಟು 77 ಆಸ್ತಿಗಳನ್ನು ಜಪ್ತಿ ಮಾಡುವಂತೆ ಸಿಬಿಐ ವಿಶೇಷ ಕೋರ್ಟ್ ಆದೇಶ ಹೊರಡಿಸಿದೆ. ಜನಾರ್ದನ ರೆಡ್ಡಿ ದಂಪತಿಗೆ ಸೇರಿದ ಒಟ್ಟು 124 ಆಸ್ತಿಗಳ ಜಪ್ತಿ ಕೋರಿ ಸಿಬಿಐ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿತ್ತು. ಇದೀಗ ನ್ಯಾಯಾಲಯ ಭ್ರಷ್ಟಾಚಾರ ತಡೆ ಕಾಯ್ದೆ, ಕ್ರಿಮಿನಲ್ ಲಾ ತಿದ್ದುಪಡಿ ಕಾಯ್ದೆಯಡಿಯಲ್ಲಿ ಒಟ್ಟು 77 ಆಸ್ತಿಗಳನ್ನು ಜಪ್ತಿ ಮಾಡುವಂತೆ ಆದೇಶ ಹೊರಡಿಸಿದೆ.

ಈ ಹಿಂದೆ ಕೂಡ 2023ರ ಜನವರಿ 12 ರಂದು ಜನಾರ್ದನ ರೆಡ್ಡಿ ಆಸ್ತಿ ಜಪ್ತಿಗೆ ಕರ್ನಾಟಕ ಗೃಹ ಇಲಾಖೆ ಅನುಮತಿ ನೀಡಿ ಆದೇಶ ಹೊರಡಿಸಿತ್ತು. ಹೈಕೋರ್ಟ್​​ ಚಾಟಿ ಬೀಸಿದ ಬಳಿಕ ಎಚ್ಚೆತ್ತುಕೊಂಡಿದ್ದ ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ಸರ್ಕಾರ ಜನವರಿ 12 ರಂದು ಜನಾರ್ದನ ರೆಡ್ಡಿ ಆಸ್ತಿ ಜಪ್ತಿಗೆ ಪ್ರತಿಕ್ರಿಯೆಗೆ ಅನುಮತಿ ನೀಡಿತ್ತು.

ಕಳೆ‌ದ ವರ್ಷ ಆಗಸ್ಟ್ ತಿಂಗಳಲ್ಲಿ ತೆಲಂಗಾಣ, ಆಂಧ್ರಪ್ರದೇಶದಲ್ಲಿನ ಜನಾರ್ದನ ರೆಡ್ಡಿ ಆಸ್ತಿ ಜಪ್ತಿಗೆ ಸಿಬಿಐ ಅನುಮತಿ ಕೇಳಿತ್ತು. ಜನಾರ್ದನ ರೆಡ್ಡಿ ಆಸ್ತಿ ಜಪ್ತಿಗೆ ಕರ್ನಾಟಕ ಸರ್ಕಾರ ಅನುಮತಿ ನೀಡದ ಹಿನ್ನೆಲೆ ಸಿಬಿಐ ಹೈಕೋರ್ಟ್ ಮೆಟ್ಟಿಲೇರಿತ್ತು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ