Mysore
27
haze

Social Media

ಮಂಗಳವಾರ, 24 ಫೆಬ್ರವರಿ 2026
Light
Dark

ಬೆಂಗಳೂರಿನಲ್ಲಿಂದು ಕಾಂಗ್ರೆಸ್​​- ಬಿಜೆಪಿ ಪ್ರತಿಭಟನೆ : 500ಕ್ಕೂ ಹೆಚ್ಚು ಪೊಲೀಸರಿಂದ ಬಿಗಿ ಬಂದೋಬಸ್ತ್

ಬೆಂಗಳೂರು : ಬೆಂಗಳೂರಿನಲ್ಲಿಂದು ಕಾಂಗ್ರೆಸ್​​, ಬಿಜೆಪಿ ಪ್ರತಿಭಟನೆ ಹಿನ್ನಲೆ ಪ್ರತಿಭಟನಾ ಸ್ಥಳದಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್​​ ವ್ಯವಸ್ಥೆ ಕಲ್ಪಿಸಲಾಗಿದೆ. ಫ್ರೀಡಂಪಾರ್ಕ್​ನಲ್ಲಿ ಕೇಂದ್ರ ಸರ್ಕಾರದ ವಿರುದ್ದ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸುತ್ತಿದ್ದರೆ, ಇತ್ತ ಮೌರ್ಯ ಸರ್ಕಲ್​ನಲ್ಲಿ ಬಿಜೆಪಿ ನಾಯಕರು ಪ್ರತಿಭಟನೆ ನಡೆಸುತ್ತಿದ್ದಾರೆ.

ಈ ಹಿನ್ನಲೆ ಎರಡೂ ಕಡೆ 500ಕ್ಕೂ ಹೆಚ್ಚು ಪೊಲೀಸರಿಂದ ಬಿಗಿ ಬಂದೋಬಸ್ತ್ ಮಾಡಲಾಗಿದ್ದು, ಡಿಸಿಪಿಗಳಾದ ಶ್ರೀನಿವಾಸಗೌಡ, ಲಕ್ಷ್ಮಣ ನಿಂಬರಗಿ ನೇತೃತ್ವದಲ್ಲಿ ಭದ್ರತೆ ಕೈಗೊಳ್ಳಲಾಗಿದೆ. 6 ಎಸಿಪಿ, 25 ಪಿಐ​ ಸೇರಿ 500ಕ್ಕೂ ಹೆಚ್ಚು ಪೊಲೀಸರ ನಿಯೋಜನೆ ಮಾಡಲಾಗಿದ್ದು, ಬಿಜೆಪಿ ಮುಖಂಡರ ಪ್ರತಿಭಟನೆ ಸ್ಥಳದಲ್ಲಿ KSRP ತುಕಡಿ ನಿಯೋಜನೆ ಮಾಡಲಾಗಿದೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!