ಬೆಂಗಳೂರು : ʼʼರಾಜ್ಯದ #ATMSarkara ದಲ್ಲಿ ಶಾಸಕ-ಸಚಿವರ ಒಳಜಗಳಗಳು ಸದ್ಯಕ್ಕೆ ಮುಗಿಯುವ ಲಕ್ಷಣಗಳು ಕಾಣುತ್ತಿಲ್ಲʼʼ ಎಂದು ವಿಪಕ್ಷ ಬಿಜೆಪಿ ಟೀಕಿಸಿದೆ.
ಈ ಕುರಿತು ಟ್ವೀಟ್ ಮಾಡಿರುವ ಬಿಜೆಪಿ, ʼʼಸ್ವಪಕ್ಷೀಯ ಶಾಸಕರನ್ನೇ ನಿರ್ಲಕ್ಷಿಸುವ ಸಚಿವರುಗಳು, ಇನ್ನು ಜನ ಸಾಮಾನ್ಯರ ಕಷ್ಟಗಳಿಗೆ ಸ್ಪಂದಿಸುತ್ತಾರೆಯೇ..? ಭ್ರಷ್ಟಾಚಾರ, ವರ್ಗಾವಣೆ ದಂಧೆ, ಒಳಜಗಳ, ಕುರ್ಚಿ ತಿಕ್ಕಾಟ, ಹೀಗೆ ಕಾಂಗ್ರೆಸ್ ಸರ್ಕಾರದ ಸಾಲು ಸಾಲು ವೈಫಲ್ಯಗಳು ರಾಜ್ಯದ ಅಭಿವೃದ್ಧಿಯನ್ನು ರಿವರ್ಸ್ ಗೇರ್‌ನಲ್ಲಿರಿಸಿದೆʼʼ ಎಂದು ವಾಗ್ದಾಳಿ ನಡೆಸಿದೆ.
ಭ್ರಷ್ಟಾಚಾರದ ಆರೋಪದಡಿ ಸೂಕ್ತ ಸಾಕ್ಷಿಗಳು ದೊರೆತರೂ, ಅಂತಹ ಅಧಿಕಾರಿಗಳ ವಿರುದ್ದ ಕ್ರಮ ಕೈಗೊಳ್ಳಲು ಹಿಂದೇಟು ಹಾಕುವ #ATMSarkara, ತನ್ನ ತಪ್ಪುಗಳ ಬಗ್ಗೆ ಪ್ರಶ್ನಿಸುವವರನ್ನು ಶಿಕ್ಷಿಸಲು ಸದಾ “ಸಿದ್ದ”ವಾಗಿರುತ್ತದೆʼʼ ಎಂದು ಬಿಜೆಪಿ ದೂರಿದೆ.
ʼʼಲಂಚಗುಳಿತನವನ್ನು ಬಹಿರಂಗಪಡಿಸಿದ ಗುತ್ತಿಗೆದಾರರ ವಿರುದ್ಧ ಎಫ್‌ಐಆರ್ʼʼ
ʼʼಸರ್ಕಾರದ ಜನವಿರೋಧಿ ನೀತಿಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಪ್ರಶ್ನಿಸುವವರ ಮೇಲೆ ಎಫ್.ಐ.ಆರ್ ಮಾಡಿದ್ದಾಯ್ತು. ಈಗ ಸರ್ಕಾರದ ಲಂಚಗುಳಿತನವನ್ನು ಬಹಿರಂಗಪಡಿಸಿದರು ಎಂಬ ಕಾರಣಕ್ಕೆ ಗುತ್ತಿಗೆದಾರರ ವಿರುದ್ಧ ಸಹ ಎಫ್.ಐ.ಆರ್ ದಾಖಲಿಸಿ ತನ್ನ ದ್ವೇಷದ ರಾಜಕಾರಣವನ್ನು ಪ್ರದರ್ಶಿಸುತ್ತಿದೆ. ಸರ್ಕಾರದ ಈ ಭಂಡತನಕ್ಕೆ ಕೊನೆ ಎಂದು..?ʼʼ ಬಿಜೆಪಿ ಮತ್ತೊಂದು ಟ್ವೀಟ್ ನಲ್ಲಿ ವಾಗ್ದಾಳಿ ನಡೆಸಿದೆ.
ನಂಜನಗೂಡು : ಜಾತೀಯತೆ ಎಂಬುದು ಸಂಪೂರ್ಣವಾಗಿ ತೊಲಗಬೇಕು. ಎಲ್ಲ ಸಮುದಾಯದವರು ನಮ್ಮವರೇ ಎಂದು ತಿಳಿದಾಗ ಮಾತ್ರ ಜಾತೀಯತೆ ದೂರವಾಗಲು ಸಾಧ್ಯ…
ಮೈಸೂರು : ನಿರಂತರ ರಂಗ ತಂಡದ ‘ನಿರಂತರ ರಂಗ ಉತ್ಸವ-2025-26’ರ ಐದು ದಿನಗಳ ರಂಗೋತ್ಸವದ ಕೊನೆಯ ದಿನ ‘ಕೊಡಲ್ಲ ಅಂದ್ರೆ…
ಬೆಂಗಳೂರು : ನಗರದ ಹೊರವಲಯದ ಆನೇಕಲ್‌ನಲ್ಲಿ ಭಾನುವಾರ ಭೀಕರ ಸರಣಿ ಅಪಘಾತವಾಗಿದೆ. ವೇಗವಾಗಿ ನುಗ್ಗಿ ಬಂದ ಬೃಹತ್ ಕಂಟೈನರ್ ಲಾರಿಯೊಂದು…
ಮಂಡ್ಯ : ಮೌಢ್ಯಗಳನ್ನು ಜನರು ತಿರಸ್ಕರಿಸಿ ಬಸವಾದಿ ಶರಣರು ತಿಳಿಸಿರುವುದನ್ನು ಪಾಲನೆ ಮಾಡಬೇಕು. ವಿದ್ಯಾವಂತರಲ್ಲಿ ಕಂದಾಚಾರ ಹಾಗೂ ಮೌಢ್ಯತೆ ಇರುವುದು…
ಮೈಸೂರು : ನಗರದ ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿ ಲಲಿತ ಕಲೆ ಮತ್ತು ಕರಕುಶಲ ಹಾಗೂ ಮಹಿಳಾ ಉದ್ದಿಮೆ ಉಪ…
ಬೆಂಗಳೂರು : ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಂಧನ ಭೀತಿ ಎದುರಿಸುತ್ತಿರುವ ಬಿಜೆಪಿ ಶಾಸಕ ಬೈರತಿ ಬಸವರಾಜು, ಕಳೆದೆರಡು…