ಬೆಂಗಳೂರು: ರಾಜ್ಯದಲ್ಲಿ ರೈತರನ್ನು ಸಂಕಷ್ಟಕ್ಕೆ ತಂದಿಟ್ಟಿರುವ ಕಾವೇರಿ ಹಾಗೂ ವಿದ್ಯುತ್ ಕೊರತೆ ಸಮಸ್ಯೆಯನ್ನು ಮುಂದಿಟ್ಟುಕೊಂಡು ಪ್ರತಿಪಕ್ಷ ಬಿಜೆಪಿ, ಆಡಳಿತಾರೂಢ ಕಾಂಗ್ರೆಸ್ ವಿರುದ್ಧ ಟೀಕಾಪ್ರಹಾರ ನಡೆಸಿದೆ.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಕಾಂಗ್ರೆಸ್ ವಿರುದ್ಧ ಸರಣಿ ಟ್ವೀಟ್ ಮಾಡಿರುವ ಬಿಜೆಪಿ, ಕಾಂಗ್ರೆಸ್ ಸರ್ಕಾರ ಕಾವೇರಿ ವಿಚಾರದಲ್ಲಿ ತಮ್ಮ ತಪ್ಪುಗಳನ್ನು ಮರೆಮಾಚಲು ಸದಾ ಇತರರ ಮೇಲೆ ಗೂಬೆ ಕೂರಿಸುತ್ತಾ, ಚಿಲ್ಲರೆ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಿದೆ.
https://x.com/BJP4Karnataka/status/1707221086025175055?s=20
ಬಿಜಿಪಿ ಸರ್ಕಾರದ ಅವಧಿಯಲ್ಲಿ ವಿದ್ಯುತ್ ಉತ್ಪಾದನೆಯಲ್ಲಿ ಕರ್ನಾಟಕ “ಪವರ್ ಸರ್‌ಪ್ಲಸ್ ಸ್ಟೇಟ್” ಸಾಧನೆ ಮಾಡಿತ್ತು. ಆದರೆ, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆ ಕರ್ನಾಟಕದ ಎಲ್ಲಾ ಘನತೆಗಳನ್ನು ಕಳೆದು ಹಾಳು ಮಾಡಿ ರಾಜ್ಯವನ್ನು ಕತ್ತಲಿಗೆ ದೂಡಿದೆ. ಉಚಿತ ವಿದ್ಯುತ್ ಕೊಡುತ್ತೇವೆಂದು ಕಿವಿ ಮೇಲೆ ಹೂವಿಟ್ಟ ಕಾಂಗ್ರೆಸ್ ಇದೀಗ ಹಣ ಕೊಡುತ್ತೇವೆಂದರೂ ವಿದ್ಯುತ್ ಪೂರೈಕೆ ಮಾಡದಷ್ಟು ನಿಶಕ್ತವಾಗಿದೆ ಎಂದು ಟೀಕಿಸಿದೆ.
ಸಿದ್ದರಾಮಯ್ಯ ಅವರ ಅಸಮರ್ಥ ಆಡಳಿತದಿಂದಾಗಿ ರಾಜ್ಯದಲ್ಲಿ ವಿದ್ಯುತ್ ಉತ್ಪಾದನೆ ಸಂಪೂರ್ಣ ಕುಂಠಿತವಾಗಿದೆ. ಹೊರ ರಾಜ್ಯಗಳಿಂದಲೂ ವಿದ್ಯುತ್ ಖರೀದಿ ಮಾಡಲು ಕೂಡ ಸಿದ್ದರಾಮಯ್ಯ ಅವರ ಸರ್ಕಾರಕ್ಕೆ ಯೋಗ್ಯತೆ ಇಲ್ಲ. ಈಗಾಗಲೇ ವಿದ್ಯುತ್ ದರ ಏರಿಕೆಯಿಂದ ಕಂಗೆಟ್ಟಿದ್ದ ಕೃಷಿ, ಕೈಗಾರಿಕೆಗಳು ವಿದ್ಯುತ್ ಅಭಾವದಿಂದ ಮತ್ತಷ್ಟು ಕುಗ್ಗಿ ಹೋಗಿವೆ. ಇದರ ನಡುವೆ ರಾಜ್ಯಕ್ಕೆ ಲೋಡ್ ಶೆಡ್ಡಿಂಗ್ ಭೂತ ಆಗಲೇ ಆವರಿಸಿದೆ. ಇದೇ ಕಾಂಗ್ರೆಸ್ಸಿನ ಕತ್ತಲು ರಾಜ್ಯದ ಗ್ಯಾರಂಟಿ ಎಂದು ಕಿಡಿಕಾರಿದೆ.
ನವದೆಹಲಿ: ಇಂದಿನಿಂದ ಆರಂಭವಾಗಿರುವ ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಕೇಂದ್ರ ಸರ್ಕಾರವು ಮೂರು ಪ್ರಮುಖ ಮಸೂದೆಗಳನ್ನು ಮಂಡಿಸಿದೆ. ಸಂವಿಧಾನದ ತಿದ್ದುಪಡಿ ಮಸೂದೆ-2026,…
ಬೆಂಗಳೂರು: ಪ್ರಕೃತಿ, ಪರಿಸರ ಸಂರಕ್ಷಣೆ ಹಾಗೂ ಹಸಿರು ಹೊದಿಕೆ ಹೆಚ್ಚಳದಲ್ಲಿ ಸುಸ್ಥಿರ ಸಾಂಸ್ಥಿಕ ಸಾಮಾಜಿಕ ಹೊಣೆಗಾರಿಕೆ ಪಾತ್ರ ಹಿರಿದಾಗಿದೆ ಎಂದು…
ನವದೆಹಲಿ: ಕೇಂದ್ರ ಸಚಿವ ಅರ್ಜುನ್ ರಾಮ್ ಮೇಘವಾಲ್ ಅವರು ಇಂದು ಲೋಕಸಭೆಯಲ್ಲಿ ಕ್ಷೇತ್ರ ಮರುವಿಂಗಡಣೆ ಮಸೂದೆ 2026ನ್ನು ಮಂಡಿಸಿದರು. ಈ…
ಚೆನ್ನೈ: ಕೇಂದ್ರ ಸರ್ಕಾರ ಜಾರಿ ಮಾಡಲು ಹೊರಟಿರುವ ಲೋಕಸಭಾ ಕ್ಷೇತ್ರ ಮರು ವಿಂಗಡಣೆ ಮಸೂದೆಗೆ ವಿಪಕ್ಷಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದು,…
ಬೆಂಗಳೂರು: ರಾಜ್ಯದಲ್ಲಿ ರಣ ಬಿಸಿಲ ಧಗೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಕೆಲ ಜಿಲ್ಲೆಗಳಲ್ಲಿ ಅತ್ಯಧಿಕ ತಾಪಮಾನ ದಾಖಲಾಗುತ್ತಿದ್ದು, ಜನರು ಬಿಸಿಲ…
ಮಧ್ಯ ಪ್ರಾಚ್ಯ ದೇಶಗಳಲ್ಲಿ ಕಳೆದ ೪೦ ದಿನಗಳಿಂದಲೂ ಯುದ್ಧ ನಡೆಯುತ್ತಿರುವುದರಿಂದ ವಿವಿಧ ದೇಶಗಳು ಸಂಕಷ್ಟಕ್ಕೆ ಸಿಲುಕಿವೆ. ಪೋಪ್ ೧೪ನೇ ಲಿಯೋರವರು…